ಗ್ರಾಮ ಒನ್ ಕೇಂದ್ರದ ಲಾಭ ಪಡೆಯಿರಿ: ಶಾಸಕ ಖಾಶೆಂಪುರ
Team Udayavani, Jan 27, 2022, 11:49 AM IST
ಬೀದರ: ತಾಲೂಕಿನ ಕಪಲಾಪುರ (ಎ) ಗ್ರಾಮದಲ್ಲಿ ನಾಗಕರಿ ಸೇವಾ ಕೇಂದ್ರ ಗ್ರಾಮ ಒನ್ ಕೇಂದ್ರಕ್ಕೆ ಬುಧವಾರ ಶಾಸಕ ಬಂಡೆಪ್ಪ ಖಾಶೆಂಪುರ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಶಾಸಕರು, ಸರ್ಕಾರಿ ಸೇವೆಗಳನ್ನು ಪಡೆಯಲು ಗ್ರಾಮೀಣ ಭಾಗದ ಜನರು ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಿಗೆ ಹೋಗುವುದನ್ನು ತಪ್ಪಿಸಲು ಗ್ರಾಮಗಳ ಮಟ್ಟದಲ್ಲೇ ಗ್ರಾಮ ಒನ್ ಕೇಂದ್ರ ತೆರೆಯಲಾಗಿದೆ. ಈ ಮೂಲಕ ಹಲವಾರು ಸರ್ಕಾರಿ ಸೇವೆಗಳನ್ನು ಪಡೆಯಬಹುದಾಗಿದೆ ಎಂದರು.
ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಮಾತನಾಡಿ, ಪ್ರತಿಯೊಬ್ಬರಿಗೂ ಕೂಡ ಆರೋಗ್ಯ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಗ್ರಾಮಸ್ಥರು ಆರೋಗ್ಯ ಕಾರ್ಡ್ ಗಳನ್ನು ಪಡೆಯಬೇಕು. ಗ್ರಾಮ ಒನ್ ಸೇವಾ ಕೇಂದ್ರದ ಸದುಪಯೋಗ ಪಡೆಯಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕರು ಸಾರ್ವಜನಿಕರ ಅಹವಾಲು ಆಲಿಸಿದರು. ಹಿರಿಯ ನಾಗರಿಕರಿಗೆ ಮತ್ತು ವಿಕಲಚೇತನರಿಗೆ ಪ್ರಮಾಣ ಪತ್ರ ವಿತರಣೆ ಮಾಡಿದರು. ಜಿಪಂ ಸಿಇಒ ಜಹೀರಾ ನಸೀಮ್, ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.