ರಸ್ತೆ ಕಾಮಗಾರಿ ತಡೆಯಲು ಸಚಿವ ಚವ್ಹಾಣರಿಗೆ ಮನವಿ
Team Udayavani, Jan 28, 2022, 3:27 PM IST
ಸೈದಾಪುರ: ಗ್ರಾಮದಿಂದ ಕಣೇಕಲ್ ಗ್ರಾಮದವರೆಗೆ ಕಾಲು ದಾರಿಯನ್ನು ಪಿಎಂಜಿಎಸ್‌ವೈ ಯೋಜನೆಯಡಿ ರಸ್ತೆ ನಿರ್ಮಾಣದಿಂದ ಹೆಚ್ಚುವರಿಯಾಗಿ ರೈತರ ಜಮೀನು ಕಳೆದುಕೊಳ್ಳಬೇಕಾಗುತ್ತದೆ. ಆದರಿಂದ ಅದನ್ನು ಕೂಡಲೇ ಸ್ಥಗಿತಗೊಳಿಸಬೇಕೆಂದು ಬಿಜೆಪಿ ರೈತ ಮೋರ್ಚಾ ಕರ್ನಾಟಕ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಶ್ರೀದೇವಿ ಶೆಟ್ಟಿಹಳ್ಳಿ ಹಾಗೂ ಜಮೀನು ಕಳೆದುಕೊಂಡು ರೈತರು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರಿಗೆ ಮನವಿ ಸಲ್ಲಿಸಿದರು.
ಪ್ರಧಾನಮಂತ್ರಿ ಗ್ರಾಮ ಸಡಕ್ ಮತ್ತು ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ 2019-20ರಲ್ಲಿ ಮಂಜೂರಾದ ಕಣೇಕಲ್ ಗ್ರಾಮದಿಂದ ಸೈದಾಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣದಿಂದ ರೈತರಿಗೆ ತೀವ್ರವಾದ ತೊಂದರೆಯಾಗುತ್ತಿದೆ ಎಂದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು, ಜಿಪಂ ಸಿಇಒ ಹಾಗೂ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಈ ಕಾಮಗಾರಿ ನಿಲ್ಲಿಸುವಂತೆ ಮನವಿ ಮಾಡಿದರು ಸಹ ರೈತರ ಜಮೀನುಗಳಲ್ಲಿ ಬೆಳೆದ ಬೆಳೆಯನ್ನು ನಾಶಪಡಿಸಿ ಗುತ್ತಿಗೆದಾರರು ಕಾಮಗಾರಿ ಪ್ರಾರಂಭಿಸಿದ ಪರಿಣಾಮವಾಗಿ ರೈತರಿಗೆ ಲಕ್ಷಾಂತರ ರೂ. ನಷ್ಟವಾಗಿದೆ. ಈಗಾಗಲೇ ಕಣೇಕಲ್ ಗ್ರಾಮದಿಂದ ಸೈದಾಪುರ ಗ್ರಾಮದ ಪಕ್ಕ ರಸ್ತೆ ಮಾರ್ಗವಿದೆ. ಆದ್ದರಿಂದ ಈಗ ನಿರ್ಮಿಸುತ್ತಿರುವ ರಸ್ತೆ ಅನಾವಶ್ಯಕವಾಗಿದೆ ಎಂದು ರೈತ ಮಲ್ಲಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಈ ಕೂಡಲೇ ಸರ್ಕಾರದ ಗಮನಕ್ಕೆ ತಂದು ರೈತರ ಕಷ್ಟಕ್ಕೆ ಸ್ಪಂದಿಸುವ ಮೂಲಕ ಕಾಮಗಾರಿ ಸ್ಥಗಿತಗೊಳಿಸಬೇಕೆಂದು ಜಮೀನು ಕಳೆದುಕೊಂಡ ರೈತರು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.