ಮೈಸೂರು: ವಿದ್ಯಾರ್ಥಿನಿಗೆ ಮುಖ್ಯೋಪಾಧ್ಯಾಯನ ಕಿಸ್; ವಿಡಿಯೋ ವೈರಲ್
Team Udayavani, Jan 29, 2022, 1:08 PM IST
ಮೈಸೂರು: ವಿದ್ಯಾರ್ಥಿನಿಯೊಬ್ಬಳನ್ನು ಚುಂಬಿಸಿದ ಶಾಲೆಯ ಮುಖ್ಯೋಪಾಧ್ಯಾಯನ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ಅಪರಾಧ ತಡೆ (ಪೋಕ್ಸೊ) ಕಾಯ್ದೆಯಡಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿರುವ ಘಟನೆ ಹೆಚ್.ಡಿ.ಕೋಟೆ ಪಟ್ಟಣದಲ್ಲಿ ನಡೆದಿದೆ.
ಶಾಲೆಯ ಮುಖ್ಯೋಪಾಧ್ಯಾಯರು ತಮ್ಮ ಚೇಂಬರ್‌ನಲ್ಲಿ ಬಾಲಕಿಗೆ ಮುತ್ತಿಕ್ಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಶಿಕ್ಷಣ ಇಲಾಖೆ ಪ್ರಕರಣ ದಾಖಲಿಸಿದೆ.
ಆರೋಪಿ ಮುಖ್ಯಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಈ ವಿಡಿಯೋವನ್ನು ವಿದ್ಯಾರ್ಥಿಗಳು ಕಿಟಕಿಯ ಮೂಲಕ ಚಿತ್ರೀಕರಿಸಿದ್ದಾರೆ ಎನ್ನಲಾಗಿದೆ.
ಮುಖ್ಯೋಪಾಧ್ಯಾಯರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳುವಂತೆ ಬಿಇಒ ಕೋರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.