ಕುಷ್ಟಗಿ: ಪುರಸಭೆ ಅಧೀನದಲ್ಲಿರುವ ಕಲ್ಯಾಣ ಮಂಟಪ ಜವಳಿ ಅಂಗಡಿಗೆ ಬಾಡಿಗೆ; ಸಾರ್ವಜನಿಕರ ಆಕ್ರೋಶ
Team Udayavani, Jan 29, 2022, 2:39 PM IST
ಕುಷ್ಟಗಿ: ಕುಷ್ಟಗಿ ಪಟ್ಟಣದ ಪುರಸಭೆ ಅಧೀನದ ಡಾ.ರಾಜಕುಮಾರ ಕಲ್ಯಾಣ ಮಂಟಪವನ್ನು ಖಾಸಗಿ ಜವಳಿ ಅಂಗಡಿಗೆ ದಿನಕ್ಕೆ 500 ರೂ. ನಂತೆ ಬಾಡಿಗೆ ನೀಡಿರುವುದು ಬೆಳಕಿಗೆ ಬಂದಿದೆ.
ಪಟ್ಟಣದ 6ನೇ ವಾರ್ಡ್ ನಲ್ಲಿರುವ ಡಾ.ರಾಜಕುಮಾರ ಕಲ್ಯಾಣ ಮಂಟಪ ಕೆ.ಶರಣಪ್ಪ ಶಾಸಕರಾಗಿದ್ದ ಸಂದರ್ಭದಲ್ಲಿ ಈ ಕಲ್ಯಾಣ ಮಂಟಪ ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅನುದಾನ ಅಡಿಯಲ್ಲಿ ನಿರ್ಮಿಸಲಾಗಿತ್ತು.12ನೇ ಏಪ್ರಿಲ್ 2006ರಲ್ಲಿ ಡಾ. ರಾಜಕುಮಾರ ನಿಧನದ ಹಿನ್ನೆಲೆಯಲ್ಲಿ ಸದರಿ ಕಲ್ಯಾಣ ಮಂಟಪಕ್ಕೆ ಡಾ.ರಾಜಕುಮಾರ ನಾಮಕರಣ ಮಾಡಲಾಗಿತ್ತು.ಇದಾದ ಬಳಿಕ ಸದರಿ ಕಲ್ಯಾಣ ಮಂಟಪದಲ್ಲಿ ಸಭೆ,ಸಮಾರಂಭ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿದ್ದವು ನಂತರದ ದಿನಮಾನಗಳಲ್ಲಿ ನಿರ್ಲಕ್ಷೆ ಮುಂದುವರಿದಿದ್ದರಿಂದ ಅನೈತಿಕ ಚಟುವಟಿಕೆಗಳ ತಾಣ ಹಾಗೂ ನಿರಂತರ ಕುಡುಕರ ಅಡ್ಡೆಯಾಗಿ ಬದಲಾಗಿತ್ತು.
ಡಾ.ರಾಜಕುಮಾರ ಅಭಿಮಾನಿಗಳ ಸಂಘ ಸೇರಿದಂತೆ ದುರಸ್ಥಿ ಹಾಗೂ ಹಲವು ಸಂಘಟನೆಗಳು ಪ್ರತಿಭಟನೆಯಿಂದಾಗಿ ಎಚ್ಚೆತ್ತುಕೊಂಡ ಪುರಸಭೆ 8 ಲಕ್ಷ ರೂ. ಅನುದಾನ ದಲ್ಲಿ ದುರಸ್ಥಿಗೆ ಕ್ರಮ ಕೈಗೊಂಡಿದ್ದು ಈ ಅನುದಾನದಲ್ಲಿ ಕಲ್ಯಾಣ ಮಂಟಪ ದುರಸ್ಥಿಯ ಕನಸು ಕಂಡಿದ್ದವರಿಗೆ ಶಾಕ್ ಆಗಿದೆ.
ಕಲ್ಯಾಣ ಮಂಟಪದ ಹೆಸರು ಆಳಿಸಿ ಹಾಕಿದ್ದಾರೆ. ಸುಣ್ಣ ಬಣ್ಣ ಹಚ್ಚಿದ್ದು, ಬಟ್ಟೆ ಅಂಗಡಿಯ ಪೀಠೋಪಕರಣಗಳ ಅಳವಡಿಸುವ ಕಾರ್ಯ ಭರದಿಂದ ನಡೆದಿದೆ. ಮೂಲಗಳ ಪ್ರಕಾರ ಗಜೇಂದ್ರಗಡ ಟೆಕ್ಸಟೈಲ್ಸ್ ಗೆ ಬಾಡಿಗೆ ನೀಡಿರುವುದು ಗೊತ್ತಾಗಿ, ಡಾ.ರಾಜಕುಮಾರ ಅಭಿಮಾನಿಗಳ ಸಂಘ, ಹೈದ್ರಾಬಾದ್ ಕರ್ನಾಟಕ ಯುವಶಕ್ತಿ ಸಂಘಟನೆಯ ಅಧ್ಯಕ್ಷ ಬಸವರಾಜ್ ಗಾಣಗೇರ ನೇತೃತ್ವದಲ್ಲಿ ಕಲಾವಿದರು. ಶನಿವಾರ ದಿಢೀರ್ ಪುರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿ ಮುಖ್ಯಾಧಿಕಾರಿ ಉಮೇಶ ಹಿರೇಮಠ ಅವರಿಗೆ ಮನವಿ ಸಲ್ಲಿಸಿದರು.
ಅಲ್ಲಿಯೇ ಇದ್ದ ಪುರಸಭೆ ಅಧ್ಯಕ್ಷ ಗಂಗಾಧರಸ್ವಾಮಿ ಹಿರೇಮಠ ಅವರು ಇದರ ಬಗ್ಗೆ ಗಮನಕ್ಕೆ ಇಲ್ಲ ಎಂದು ತಿಳಿಸಿರುವುದು ಅಚ್ಚರಿಯಾಗಿದೆ. ಕಲಾವಿದರು ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರಿಗೆ ಮೀಸಲಾಗಿದ್ದ ಡಾ.ರಾಜಕುಮಾರ ಕಲ್ಯಾಣ ಮಂಟಪ ಖಾಸಗಿ ಬಟ್ಟೆ ಅಂಗಡಿಯವರಿಗೆ ವಹಿರುವುದು ವ್ಯಾಪಕ ವಿರೋಧ ವ್ಯಕ್ತವಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ಪುರಸಭೆ ಮುಖ್ಯಾಧಿಕಾರಿ ಉಮೇಶ ಹಿರೇಮಠ, ಕಲ್ಯಾಣ ಮಂಟಪ ಬಟ್ಟೆ ಅಂಗಡಿಗೆ ಬಾಡಿಗೆ ನೀಡಿರುವುದು ಗೊತ್ತಿಲ್ಲ. ಸದರಿ ಬಟ್ಟೆ ಅಂಗಡಿ ತೆರವುಗೊಳಿಸುವುದಾಗಿ ತಿಳಿಸಿದ್ದಾರೆ.
ಪುರಸಭೆ 6ನೇ ವಾರ್ಡ್ ಸದಸ್ಯ ರಾಮಣ್ಣ ಬಿನ್ನಾಳ ಪ್ರತಿಕ್ರಿಯಿಸಿ ಇದೇ ವಾರ್ಡಿನಲ್ಲಿದ್ದರೂ ನನ್ನ ಗಮನಕ್ಕೆ ತಂದಿಲ್ಲ. ಡಾ.ರಾಜಕುಮಾರ ಕಲ್ಯಾಣ ಮಂಟಪವನ್ನು ಬಟ್ಟೆ ಅಂಗಡಿಗೆ ನೀಡಿದ್ದು, ಜ.31 ರಂದು ನಡೆಯುವ ಪುರಸಭೆ ಸಾಮಾನ್ಯ ಸಭೆಯಲ್ಲಿ ಪ್ರಶ್ನಿಸುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.