ಕೋವಿಡ್‌ನಿಂದ ಮೃತಪಟ್ಟ ಕುಟುಂಬಕ್ಕೆ ಪರಿಹಾರ
Team Udayavani, Jan 29, 2022, 2:53 PM IST
ಸುರಪುರ: ಕೋವಿಡ್‌ನಿಂದ ಮೃತಪಟ್ಟ ಕುಟುಂಬ ವರ್ಗದವರಿಗೆ ಸರಕಾರದಿಂದ ಮಂಜೂರಾದ ಒಂದು ಲಕ್ಷ ರೂ. ಪರಿಹಾರ ಧನದ ಚೆಕ್‌ನ್ನು ಶಾಸಕ ರಾಜುಗೌಡ ಶುಕ್ರವಾರ ವಿತರಿಸಿದರು.
ನಗರದ ತಮ್ಮ ನಿವಾಸದಲ್ಲಿ ನಾಲ್ಕು ಜನರಿಗೆ ಚೆಕ್ ವಿತರಿಸಿ ಮಾತನಾಡಿ, ತಾಲೂಕಿನಲ್ಲಿ ಕೋವಿಡ್‌ನಿಂದ ಮೃತಪಟ್ಟ 37 ಜನರ ಅರ್ಜಿ ಸಲ್ಲಿಕೆಯಾಗಿದ್ದವು. ಆ ಪೈಕಿ ಎಲ್ಲರಿಗೂ ಪರಿಹಾರ ದೊರಕಿದೆ. ಇನ್ನುಳಿದಂತೆ ನೇರವಾಗಿ 34 ಅರ್ಜಿಗಳು ಸಲ್ಲಿಕೆಯಾಗಿದ್ದು, ಅವುಗಳಿಗೂ ಸರಕಾರ ಅನುಮೋದನೆ ನೀಡಿದ್ದು, ಅನುದಾನ ಬಿಡುಗಡೆಯಾದ ನಂತರ ಅವರಿಗೂ ಪರಿಹಾರ ಮೊತ್ತದ ಚೆಕ್ ಸಿಗಲಿದೆ ಎಂದು ಹೇಳಿದರು.
ಈ ಹಿಂದೆ ಕೆಲವರ ಪರಿಹಾರ ಚೆಕ್‌ಗಳು ಬ್ಯಾಂಕ್‌ನಲ್ಲಿ ತಾಂತ್ರಿಕ ತೊಂದರೆಯಿಂದ ನಗದೀಕರಣ ಆಗಿರಲಿಲ್ಲ. ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದ ಬ್ಯಾಂಕ್ ವ್ಯವಸ್ಥಾಪಕರ ಮೇಲೆ ತಾಲೂಕು ಆಡಳಿತ ಶಿಸ್ತು ಕ್ರಮ ಜರುಗಿಸಿರುವುದನ್ನು ಸ್ವಾಗತಿಸುತ್ತೇನೆ. ಈಗ ಸಮಸ್ಯೆ ಸರಿಪಡಿಸಲಾಗಿದ್ದು, ಎಲ್ಲರಿಗೂ ಚೆಕ್ ನಗದೀಕರಣಗೊಂಡಿವೆ ಎಂದರು. ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ಕಂದಾಯ ಇಲಾಖೆ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.