2.5 ಕೋಟಿ ರೂ. ಮಂಜೂರು; ಪ್ರಗತಿಯಲ್ಲಿ ಕಟ್ಟಡ ಕಾಮಗಾರಿ
ಕಡಬ: ಅಲ್ಪಸಂಖ್ಯಾಕ ಬಾಲಕಿಯರ ಹಾಸ್ಟೆಲ್‌ಗೆ ಸ್ವಂತ ಕಟ್ಟಡ ಭಾಗ್ಯ
Team Udayavani, Jan 29, 2022, 5:22 PM IST
ಕಡಬ: ಕಳೆದ ನಾಲ್ಕು ವರ್ಷ ಗಳಿಂದ ಬಾಡಿಗೆ ಕಟ್ಟಡದಲ್ಲಿ ಕಾರ್ಯಾ ಚರಿಸುತ್ತಿರುವ ಕಡಬದ ಅಲ್ಪಸಂಖ್ಯಾಕ ಬಾಲಕಿಯರ ಮೆಟ್ರಿಕ್ ಅನಂತರದ ವಿದ್ಯಾರ್ಥಿ ನಿಲಯಕ್ಕೆ ಕೊನೆಗೂ ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಳ್ಳುವ ಯೋಗ ಬಂದಿದೆ.
ವಿದ್ಯಾರ್ಥಿ ನಿಲಯಕ್ಕೆ ನೂತನ ಕಟ್ಟಡ ನಿರ್ಮಿಸಲು 2.5 ಕೋಟಿ ರೂ. ಮಂಜೂರುಗೊಂಡಿದ್ದು, ಕಾದಿರಿಸಿದ ಜಮೀನಿನಲ್ಲಿ ಕಟ್ಟಡದ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ.
25 ಸೆಂಟ್ಸ್ ಜಮೀನು
ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆ ಯಿಂದ ನಡೆಸಲ್ಪಡುವ ಈ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಕಡಬದ ಅಂಬೇಡ್ಕರ್ ಭವನದ ಬಳಿ 3 ವರ್ಷಗಳ ಹಿಂದೆಯೇ 25 ಸೆಂಟ್ಸ್ ಜಮೀನು ಕಾದಿರಿಸಲಾಗಿತ್ತು. ಬಳಿಕ 2.5 ಕೋಟಿ ರೂ. ಅನುದಾನ ಮಂಜೂರಾಗಿದ್ದರೂ ಜಮೀನಿನಲ್ಲಿದ್ದ ಮರಗಳನ್ನು ತೆರವುಗೊಳಿಸಲು ತಡವಾದ ಕಾರಣದಿಂದಾಗಿ ಕಾಮಗಾರಿ ಆರಂಭಗೊಳ್ಳಲು ತೊಡಕಾಗಿತ್ತು. ಕೊನೆಗೂ ಜನಪ್ರತಿನಿಧಿಗಳು ಹಾಗೂ ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆಯ ಅಧಿಕಾರಿಗಳ ನಿರಂತರ ಪ್ರಯತ್ನದ ಫಲವಾಗಿ ಮರಗಳನ್ನು ತೆರವುಗೊಳಿಸಿ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. .
1.25 ಕೋಟಿ ರೂ. ಅನುದಾನ
ವಿದ್ಯಾರ್ಥಿ ನಿಲಯಕ್ಕೆ ಸುಸಜ್ಜಿತ ಕಟ್ಟಡ ನಿರ್ಮಿಸುವ ಸಲುವಾಗಿ ಒಟ್ಟು 2.5 ಕೋಟಿ ರೂ. ಅನುದಾನ ಮಂಜೂರುಗೊಂಡಿದ್ದು, ಆ ಪೈಕಿ 1.25 ಕೋಟಿ ರೂ. ಅನುದಾನ ಬಿಡುಗಡೆಯೂ ಆಗಿದೆ. 2.5 ಕೋಟಿ ರೂ. ಅನುದಾನದಲ್ಲಿ 1.98 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣಗೊಂಡರೆ, ಉಳಿದ 52 ಲಕ್ಷ ರೂ. ಗಳನ್ನು ತಡೆಗೋಡೆ ನಿರ್ಮಾಣ, ಆವರಣ ಗೋಡೆ ನಿರ್ಮಾಣ ಹಾಗೂ ಅಂಗಳಕ್ಕೆ ಇಂಟರ್‌ಲಾಕ್ ಅಳವಡಿಕೆಗೆ ವಿಂಗಡಿಸಲಾಗಿದೆ.
ಉದ್ದೇಶಿತ ವಿದ್ಯಾರ್ಥಿ ನಿಲಯದ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಈಗಾಗಲೇ ಎರಡನೇ ಮಹಡಿಯ ಕಾಂಕ್ರೀಟ್ ಕೆಲಸ ನಡೆಯುತ್ತಿದೆ. ಈ ಬಾರಿಯ ಮಳೆಗಾಲಕ್ಕೆ ಮೊದಲು ಕಾಮಗಾರಿ ಪೂರ್ಣಗೊಳಿಸುವ ಗುರಿ ಇರಿಸಿ ಕೊಳ್ಳಲಾಗಿದೆ ಎಂದು ಮಂಗಳೂರಿನ ದ.ಕ. ನಿರ್ಮಿತಿ ಕೇಂದ್ರದ ಸಹಾಯಕ ಎಂಜಿ ನಿಯರ್ ಹರೀಶ್ ಮೆದು ತಿಳಿಸಿದ್ದಾರೆ.
50 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ
ವಿದ್ಯಾರ್ಥಿ ನಿಲಯದಲ್ಲಿ ಕಡಬ ಪ್ರದೇಶದ ಒಟ್ಟು 50 ವಿದ್ಯಾರ್ಥಿನಿಯರಿಗೆ ಪ್ರವೇಶಾ ವಕಾಶವಿದೆ. ಆ ಪೈಕಿ ಶೇ. 75 ಸೀಟುಗಳು ಅಲ್ಪಸಂಖ್ಯಾಕ ವಿದ್ಯಾರ್ಥಿನಿಯರಿಗೆ ಹಾಗೂ ಉಳಿದ ಶೇ. 25ರಷ್ಟು ಸೀಟ್‌ಗಳನ್ನು ಸಾಮಾನ್ಯ ವರ್ಗದ ವಿದ್ಯಾರ್ಥಿನಿಯರಿಗೆ ಕಾದಿರಿಸಲಾಗಿದೆ.
ಶೀಘ್ರ ಬಿಡುಗಡೆ
ಮಂಜೂರಾಗಿರುವ 2.5 ಕೋಟಿ ರೂ. ಅನುದಾನದ ಪೈಕಿ 1.25 ಕೋಟಿ ರೂ. ಈಗಾಗಲೇ ಬಿಡುಗಡೆಯಾಗಿದೆ. ಕಟ್ಟಡದ ನಿರ್ಮಾಣ ಕಾಮಗಾರಿಯನ್ನು ಮಂಗಳೂರಿನ ದ.ಕ.ನಿರ್ಮಿತಿ ಕೇಂದ್ರಕ್ಕೆ ವಹಿಸಲಾಗಿದ್ದು, ಬಿಡುಗಡೆಗೆ ಬಾಕಿ ಇರುವ ಅನುದಾನವನ್ನು ಶೀಘ್ರ ಬಿಡುಗಡೆಗೊಳಿಸಲಾಗುವುದು.
-ಎಸ್.ಅಂಗಾರ, ಸಚಿವರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್; ಗಾಯಗೊಂಡ ರಾಹುಲ್
Editorial: ಪಾಕ್ ಪ್ರೇರಿತ ಉಗ್ರರ ತಂತ್ರಕ್ಕೆ ಸೂಕ್ತ ಪ್ರತಿತಂತ್ರ ಈಗಿನ ತುರ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.