ಮಹಿಳೆ-ಮಕ್ಕಳ ಸಾಗಣೆ ತಡೆಗೆ ಜಾಗೃತಿ ಮುಖ್ಯ


Team Udayavani, Jan 29, 2022, 6:08 PM IST

24women

ರಾಯಚೂರು: ಮಹಿಳೆಯರು ಹಾಗೂ ಮಕ್ಕಳ ಅನೈತಿಕ ಸಾಗಣೆ ಒಂದು ಸಾಮಾಜಿಕ ಪಿಡುಗು. ಈ ಅಕ್ರಮ ಜಾಲದ ಬಗ್ಗೆ ಅಧಿಕಾರಿಗಳು ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶ ಮಹಾಜನ ಆರ್‌.ಎ ತಿಳಿಸಿದರು.

ನಗರದ ಕೃಷಿ ವಿವಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಮಹಿಳೆಯರ ಮತ್ತು ಮಕ್ಕಳ ಸಾಗಣೆ ತಡೆಗಟ್ಟುವ ಬಗ್ಗೆ ಶುಕ್ರವಾರ ಹಮ್ಮಿಕೊಂಡಿದ್ದ ಕ್ಷೇತ್ರ ಮಟ್ಟದ ಭಾಗಿದಾರರಿಗೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಹಿಳೆಯರು, ಮಕ್ಕಳ ಅನೈತಿಕ ಸಾಗಣೆಯನ್ನು ಅನೈತಿಕ ಚಟುವಟಿಕೆಗಳಿಗೆ ಬಳಸಲಾಗುತ್ತಿದೆ. ಇದರಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ಬಡವರು, ಗ್ರಾಮೀಣ ಪ್ರದೇಶಗಳ ಮಕ್ಕಳು ಮತ್ತು ಮಹಿಳೆಯರು ಕಳ್ಳ ಸಾಗಣೆ ಜಾಲಕ್ಕೆ ಸಿಲುಕುತ್ತಿದ್ದಾರೆ. ಪರಿಚಯಿಸ್ಥರಿಂದಲೇ ಈ ಕೃತ್ಯ ನಡೆಯುತ್ತಿದ್ದು, ಪೋಷಕರ ನಿರ್ಲಕ್ಷ್ಯವೇ ಇದಕ್ಕೆ ಕಾರಣ. ಈ ಪಿಡುಗು ತಡೆಗಟ್ಟುವುದು ಸಮಾಜದ ಎಲ್ಲ ನಾಗರಿಕರ ಕರ್ತವ್ಯ. ಕಾನೂನಿನ ಸಮರ್ಪಕ ಜಾರಿಯಿಂದ ಈ ಪಿಡುಗು ನಿಯಂತ್ರಿಸಬಹುದು ಎಂದರು.

ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿಗೆ ಸರ್ಕಾರೇತರ ಸಂಘ-ಸಂಸ್ಥೆಗಳು ಕೈ ಜೋಡಿಸಬೇಕು. ಜಿಲ್ಲೆಯ 6 ತಾಲೂಕುಗಳಲ್ಲಿ ಬಡತನ ನಿರ್ಮೂಲನೆ ಸೇರಿದಂತೆ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಿದೆ. ಈ ಯೋಜನೆಗಳನ್ನು ಪ್ರತಿಯೊಬ್ಬ ನಿರ್ಗತಿಕ ಮಹಿಳೆಯರು ಸಾಂತ್ವನ ಕೇಂದ್ರಗಳು, ಸ್ವಾಧಾರಿತ ಕೇಂದ್ರಗಳು, ಸ್ತ್ರೀಶಕ್ತಿ ಸಂಘಗಳು, ಅಂಗನವಾಡಿ ಕೇಂದ್ರಗಳು ಹಾಗೂ ಸರ್ಕಾರೇತರ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ನಡೆಯುತ್ತಿರುವ ಕೇಂದ್ರಗಳಿಗೆ ಭೇಟಿ ನೀಡಿ ಸೌಲಭ್ಯ ಪಡೆಯಬೇಕು ಎಂದರು.

ಮಕ್ಕಳ ಹಿರಿಯ ಕಲ್ಯಾಣಾಧಿಕಾರಿ ವೆಂಕಟೇಶ, ಜಿಲ್ಲಾ ಮಕ್ಕಳ ಸಮಿತಿ ಸದಸ್ಯೆ ಮಂಗಳಾ ಹೊಣೆ, ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಈರಮ್ಮ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮನ್ಸೂರ್‌ ಅಹ್ಮದ್‌, ಸಂಪನ್ಮೂಲ ವ್ಯಕ್ತಿ ಸುದರ್ಶನ, ಇಲಾಖೆಯ ಸಿಬ್ಬಂದಿ ಕ್ಷೀರಲಿಂಗಪ್ಪ, ಹನುಮೇಶ, ಶಿವರಾಜ, ಶ್ರೀದೇವಿ ಸೇರಿ ಇತರರಿದ್ದರು.

ಟಾಪ್ ನ್ಯೂಸ್

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.