ಉಡುಪಿ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ಪ್ರಕರಣ: ನಗರಸಭೆಯಿಂದ ಯಾತ್ರಿ ನಿವಾಸಕ್ಕೆ ನೋಟಿಸ್
Team Udayavani, Jan 29, 2022, 9:00 PM IST
ಉಡುಪಿ : ನಗರದ ಸರ್ವಿಸ್ ಬಸ್ ನಿಲ್ದಾಣದ ಬಳಿಯ ಯಾತ್ರಿ ನಿವಾಸದಲ್ಲಿ ನಗರಸಭೆ ನೀಡಿದ ಪರವಾನಿಗೆ ಉಲ್ಲಂಘಿಸಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ರಮೇಶ್ ಶೆಟ್ಟಿಗೆ ನಗರಸಭೆ ನೋಟಿಸ್ ಜಾರಿ ಮಾಡಿದೆ.
ಈ ಲಾಡ್ಜ್ ಅನ್ನು ನಗರಸಭೆಯಿಂದ ರಮೇಶ್ ಶೆಟ್ಟಿ 20 ವರ್ಷಗಳಿಗಾಗಿ ಲೀಸಿಗೆ ಪಡೆದುಕೊಂಡಿದ್ದರು. ಈಗ 12 ವರ್ಷ ಪೂರೈಸಲಾಗಿದೆ. ಸರಕಾರ ಹಾಗೂ ನಗರಸಭೆಗೆ ಸಂಬಂಧಿಸಿದ ಈ ಕಟ್ಟಡದಲ್ಲಿ ನಿರಂತರವಾಗಿ ಅನೈತಿಕ ವ್ಯವಹಾರ ನಡೆಸಿ ಸಾರ್ವಜನಿಕರ ನೆಮ್ಮದಿಗೆ ಭಂಗ ತರುತ್ತಿದ್ದರು. ಈ ಬಗ್ಗೆ ಹಲವಾರು ಬಾರಿಗೆ ಎಚ್ಚರಿಕೆ ನೀಡಿದ್ದರೂ ಅನೈತಿಕ ವ್ಯವಹಾರ ಮುಂದುವರಿದಿದ್ದು, ಆದ್ದರಿಂದ ಪರವಾನಿಗೆ ರದ್ದುಪಡಿಸುವಂತೆ ಪೊಲೀಸ್ ಇಲಾಖೆಯು ನಗರಸಭೆಗೆ ಪತ್ರ ಬರೆದಿದೆ. ಈ ಹಿನ್ನೆಲೆಯಲ್ಲಿ ನಗರಸಭೆ ನೋಟಿಸ್ ಜಾರಿ ಮಾಡಿದೆ.
ಹಿಂದೆಯೂ ಪ್ರಕರಣ ದಾಖಲು
ಇದೇ ಲಾಡ್ಜ್ ನಲ್ಲಿ ಬಾಲಕಿ ಹಾಗೂ ಮತ್ತೂರ್ವ ಆರೋಪಿಗೆ ರೂಮ್ ನೀಡಿದ್ದ ಎನ್ನುವ ಕಾರಣಕ್ಕೆ ರಮೇಶ್ ಶೆಟ್ಟಿ ಮೇಲೆ ಕೋಟ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಇದೇ ರೀತಿ ಬಿಟ್ಟರೆ ಚಟುವಟಿಕೆಯನ್ನು ಮತ್ತಷ್ಟು ವಿಸ್ತರಿಸುವ ಸಾಧ್ಯತೆ ಇದೆ. ಈ ಕಾರಣಕ್ಕಾಗಿ ನೋಟಿಸ್ ಜಾರಿ ಮಾಡಲಾಗಿದ್ದು, 10ರಿಂದ 15 ದಿನಗಳೊಳಗೆ ಪರವಾನಿಗೆ ರದ್ದುಗೊಳಿಸಲಾಗುತ್ತದೆ ಎಂದು ಪೌರಾಯುಕ್ತರು ತಿಳಿಸಿದ್ದಾರೆ. ಪ್ರಕರಣದಲ್ಲಿ ವಶಕ್ಕೆ ಪಡೆದಿರುವ ಇಬ್ಬರು ಮಹಿಳೆಯರನ್ನು ಸಖೀ ಕೇಂದ್ರಕ್ಕೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Puttur: ಇದು ಅಜಿತರ ಸಾಹಸ : ರಬ್ಬರ್ ತೋಟದಲ್ಲಿ ಕಾಫಿ ಘಮ ಘಮ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Puttur: ಇದು ಅಜಿತರ ಸಾಹಸ : ರಬ್ಬರ್ ತೋಟದಲ್ಲಿ ಕಾಫಿ ಘಮ ಘಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.