ಕಠಿನ ಕಾಯ್ದೆ ಜಾರಿಗೊಂಡರೂ ನಿಲ್ಲದ ಗೋ ಕಳವು

ಅಸಹಾಯಕರಾದ ಹೈನುಗಾರರು; ಹೈನುಗಾರಿಕೆಗೆ ಹಿನ್ನಡೆ ಆತಂಕ

Team Udayavani, Jan 30, 2022, 7:10 AM IST

ಕಠಿನ ಕಾಯ್ದೆ ಜಾರಿಗೊಂಡರೂ ನಿಲ್ಲದ ಗೋ ಕಳವು

ಸಾಂದರ್ಭಿಕ ಚಿತ್ರ.

ಮಂಗಳೂರು: ಗೋ ಕಳವು ಅವ್ಯಾಹತವಾಗಿ ನಡೆಯುತ್ತಿದ್ದರೂ ಕರಾವಳಿ ಭಾಗದ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗುವ ಪ್ರಕರಣಗಳು ಮಾತ್ರ ಬೆರಳೆಣಿಕೆಯಷ್ಟು. ಕಳ್ಳರ ಬಂಧನ, ದನಗಳ ರಕ್ಷಣೆ ಕೂಡ ಕನಿಷ್ಠ.

ಗೋವು ಕಳವಾದರೆ ಹೈನುಗಾರರಿಗೆ ಸರಕಾರದಿಂದ ಬಿಡಿಗಾಸು ಪರಿಹಾರವೂ ಸಿಗುವುದಿಲ್ಲ. ಹಾಗಾಗಿ ಪ್ರಕರಣಗಳು ಕೂಡ ಕಡಿಮೆ ಪ್ರಮಾಣದಲ್ಲಿಯೇ ದಾಖಲಾಗುತ್ತಿವೆ ಎನ್ನಲಾಗಿದೆ. “ಅಕ್ಕಪಕ್ಕದ ಹಲವೆಡೆ ಈ ಹಿಂದೆ ಗೋ ಕಳವು ನಡೆದಿದ್ದಾಗ ಪೊಲೀಸರಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಪದೇ ಪದೇ ಕೃತ್ಯಗಳು ಮರುಕಳಿಸುತ್ತಿವೆ. ಹಾಗಾಗಿ ನಾವು ದೂರು ನೀಡಿಲ್ಲ’ ಎನ್ನುವುದು ಅನೇಕ ಹೈನುಗಾರರ ಅಳಲು. “ಗೋವು ಕಳ್ಳತನವಾದ ಬಗ್ಗೆ ಮಾಹಿತಿ ದೊರೆತ ಕೂಡಲೇ ಕಾರ್ಯಾಚರಣೆ ನಡೆಸಿ ಹಲವು ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸಿ ಗೋವುಗಳನ್ನು ರಕ್ಷಿಸಲಾಗಿದೆ. ಆದರೆ ಪೊಲೀಸರಿಗೆ ಮಾಹಿತಿ, ದೂರು ನೀಡಲು ಕೆಲವರು ಮುಂದೆ ಬಂದಿಲ್ಲ’ ಎನ್ನುತ್ತಾರೆ ಪೊಲೀಸರು.

59 ಪ್ರಕರಣಗಳು
ಇಲಾಖೆಗಳ ಪ್ರಕಾರ, ಗೋವು ಕಳವು/ಅಕ್ರಮ ಸಾಗಾಟಕ್ಕೆ ಸಂಬಂಧಿಸಿದಂತೆ ದ.ಕ. ಜಿಲ್ಲೆಯಲ್ಲಿ 2021ರ ಇಡೀ ವರ್ಷ ದಾಖಲಾಗಿರುವ ಪ್ರಕರಣಗಳ ಸಂಖ್ಯೆ 56. ದ.ಕ ಜಿಲ್ಲಾ ಪೊಲೀಸ್‌ ವ್ಯಾಪ್ತಿಯಲ್ಲಿ ಹೊಸ ಗೋ ಹತ್ಯೆ ನಿಷೇಧ ಕಾಯ್ದೆ ಯನ್ವಯ 2021ರಲ್ಲಿ 28 ಹಾಗೂ 2022ರಲ್ಲಿ ಇದುವರೆಗೆ 3 ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ 2019ರಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯಡಿ 13 ಪ್ರಕರಣಗಳನ್ನು ದಾಖಲಿಸಿ 21 ಮಂದಿಯನ್ನು ಬಂಧಿಸಿ 32 ಗೋವುಗಳನ್ನು ರಕ್ಷಿಸಲಾಗಿತ್ತು. 2020ರಲ್ಲಿ 27 ಪ್ರಕರಣಗಳನ್ನು ದಾಖಲಿಸಿ 54 ಮಂದಿಯನ್ನು ಬಂಧಿಸಿ 49 ಗೋವುಗಳನ್ನು ರಕ್ಷಿಸಲಾಗಿತ್ತು. ಮಂಗಳೂರು ಪೊಲೀಸ್‌ ಕಮಿಷನರೆಟ್‌ ವ್ಯಾಪ್ತಿಯಲ್ಲಿ 2021ರಲ್ಲಿ ನೂತನ ಗೋ ಹತ್ಯೆ ನಿಷೇಧ ಕಾಯ್ದೆಯಡಿ 28 ಪ್ರಕರಣಗಳು ದಾಖಲಾಗಿದ್ದು 59 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. 30ಕ್ಕೂ ಅಧಿಕ ಗೋವುಗಳನ್ನು ರಕ್ಷಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಉಡುಪಿ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ಪ್ರಕರಣ: ನಗರಸಭೆಯಿಂದ ಯಾತ್ರಿ ನಿವಾಸಕ್ಕೆ ನೋಟಿಸ್‌

ನೂತನ ಕಾಯ್ದೆ ಬಂದರೂ ಕೃತ್ಯ ನಿಂತಿಲ್ಲ
“ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯ್ದೆ -2020′ ಕಳೆದ ವರ್ಷ ಫೆಬ್ರವರಿಯಲ್ಲಿ ಜಾರಿಗೆ ಬಂದಿದೆ. ಜಾನುವಾರು ಗಳನ್ನು ಹತ್ಯೆಗಾಗಿ ಮಾರಾಟ, ಖರೀದಿ ಅಥವಾ ವಿಕ್ರಯವನ್ನು ಈ ಕಾಯ್ದೆ ನಿಷೇಧಿಸಿದ್ದು ತಪ್ಪಿತಸ್ಥರಿಗೆ 3 ವರ್ಷಗಳಿಗೆ ಕಡಿಮೆ ಇಲ್ಲದ, 7 ವರ್ಷಗಳಿಗೆ ವಿಸ್ತರಿಸಬಹುದಾದ ಕಾರಾಗೃಹ ಶಿಕ್ಷೆ ವಿಧಿಸಲು ಅವಕಾಶ ನೀಡಿದೆ. ಅಲ್ಲದೆ ಒಂದು ಜಾನುವಾರು ಅಕ್ರಮ ಸಾಗಾಟಕ್ಕೆ 50,000 ರೂ.ಗಳಿಂದ 5 ಲ.ರೂ.ಗಳವರೆಗೆ ದಂಡ ವಿಧಿಸಲು ಕೂಡ ಕಾಯ್ದೆ ಅವಕಾಶ ಮಾಡಿಕೊಟ್ಟಿದೆ. 2ನೇ ಬಾರಿ ಅಥವಾ ಹೆಚ್ಚು ಬಾರಿ ಅಪರಾಧ ಮಾಡಿದರೆ 1 ಲ.ರೂ.ಗಳಿಂದ 10 ಲ.ರೂ.ಗಳವರೆಗೆ ದಂಡ, 7 ವರ್ಷಗಳವರೆಗಿನ ಕಾರಾಗೃಹ ಶಿಕ್ಷೆ ವಿಧಿಸಬಹುದಾಗಿದೆ. ಆದರೆ ಹೊಸ ಕಾಯ್ದೆ ಜಾರಿಗೊಂಡರೂ ಗೋ ಕಳವು ನಿಂತಿಲ್ಲ.

ವಿಎಚ್‌ಪಿ ಪ್ರಮುಖರ ಭೇಟಿ
ನಿರಂತರ ಗೋ ಕಳವು ನಡೆದಿರುವ ಮಂಗಳೂರಿನ ಬೊಲ್ಪುಗುಡ್ಡೆ, ಪಚ್ಚನಾಡಿ, ಬೋಂದೆಲ್‌ ಪರಿಸರದ ಹೈನುಗಾರರಾದ ಡೊಮಿನಿಕ್‌ ಸಲ್ದಾನ, ಪ್ರಣಮ್‌ ಶೆಟ್ಟಿ ಮೊದಲಾದ ವರ ಮನೆಗೆ ಶನಿವಾರ ವಿಶ್ವಹಿಂದೂ ಪರಿಷತ್‌ ಮುಖಂಡರು ಭೇಟಿ ನೀಡಿ ಸಾಂತ್ವನ ಹೇಳಿದರು. ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌, ಗೋರಕ್ಷಾ ಪ್ರಮುಖರಾದ ದಿನೇಶ್‌ ಪೈ, ಬಜರಂಗದಳ ಪ್ರಮುಖರಾದ ಪವಿತ್ರ ಕೆರೆಬೈಲ್‌, ಪ್ರದೀಪ್‌ ಪಂಪ್‌ವೆಲ್‌, ಶೈಲೇಶ್‌ ಅಡ್ಕ, ನವೀನ ಕೊಣಾಜೆ, ಶಿವಪ್ರಸಾದ್‌ ಕೊಣಾಜೆ, ಅಜಿತ್‌ ಕಾವೂರು ಉಪಸ್ಥಿತರಿದ್ದರು. ಬೊಲ್ಪುಗುಡ್ಡೆ ಮತ್ತು ಸುತ್ತಲಿನ ಪರಿಸರದಲ್ಲಿ ನಿರಂತರವಾಗಿ ಗೋ ಕಳವು ನಡೆದ ಬಗ್ಗೆ “ಉದಯವಾಣಿ’ ಶನಿವಾರ ವಿಶೇಷ ವರದಿ ಪ್ರಕಟಿಸಿತ್ತು.

ಸೂಕ್ತ ಪರಿಹಾರಕ್ಕೆ ಒತ್ತಾಯ
ಗೋ ಕಳವು ನಿರಂತರವಾಗಿ ನಡೆಯುತ್ತಿದ್ದು ಹೈನುಗಾರರು ಸಂಕಷ್ಟಕ್ಕೀಡಾಗಿದ್ದಾರೆ. ಗೋ ಕಳ್ಳತನ, ಅಕ್ರಮ ಕಸಾಯಿಖಾನೆ ನಿಯಂತ್ರಿಸುವಲ್ಲಿ ಜಿಲ್ಲಾಡಳಿತ ವಿಫ‌ಲವಾಗಿದೆ. ದನಗಳನ್ನು ಕಳೆದುಕೊಂಡು ಸಂಕಷ್ಟಕ್ಕೀಡಾದ ಕುಟುಂಬಗಳಿಗೆ ಸರಕಾರದಿಂದ ಪರಿಹಾರ ಒದಗಿಸಬೇಕು ಎಂದು ಶರಣ್‌ ಪಂಪ್‌ವೆಲ್‌ ಅವರು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್‌ ಕುಮಾರ್‌ ಅವರನ್ನು ಒತ್ತಾಯಿಸಿದ್ದಾರೆ.

ಗೋವುಗಳ ಕಳವು, ಹತ್ಯೆಯಾದರೆ ಇಲಾಖೆ ಯಿಂದ ಪರಿಹಾರ ನೀಡಲು ಅವಕಾಶವಿಲ್ಲ. ಒಂದು ವೇಳೆ ಜಾನು ವಾರುಗಳು ಕಾಯಿಲೆ ಅಥವಾ ಅಪಘಾತ ದಿಂದ ಮೃತಪಟ್ಟರೆ ಜಾನುವಾರು ವಿಮೆ ಯೋಜನೆಯಡಿ ವಿಮೆ ಮೊತ್ತ ದೊರೆ ಯುತ್ತದೆ.
-ಡಾ| ಪ್ರಸನ್ನ ಕುಮಾರ್‌,
ಉಪನಿರ್ದೇಶಕರು,
ಪಶುಸಂಗೋಪನ ಇಲಾಖೆ ದ.ಕ. ಜಿಲ್ಲೆ

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.