ಪೋಲಿಯೋ ಅಭಿಯಾನ ಯಶಸ್ವಿಗೊಳಿಸಿ
Team Udayavani, Jan 30, 2022, 12:47 PM IST
ದಾವಣಗೆರೆ: ಜಿಲ್ಲೆಯಾದ್ಯಂತ ಫೆಬ್ರವರಿ 27ರಿಂದಮಾರ್ಚ್ 2ವರೆಗೆ ಪಲ್ಸ್ ಪೋಲಿಯೋ ಅಭಿಯಾನ ನಡೆಯಲಿದ್ದು ವಿವಿಧ ಇಲಾಖೆಗಳು ಸಹಕಾರ ನೀಡುವಮೂಲಕ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಇಲಾಖೆ ಕಚೇರಿಯಲ್ಲಿ ಶನಿವಾರ ನಡೆದ 2021-22ನೇಸಾಲಿನ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದಪೂರ್ವಸಿದ್ಧತಾ ಸಭೆ ಹಾಗೂ ಸ್ಪರ್ಶ್ ಕುಷ್ಠರೋಗಅರಿವು ಆಂದೋಲನ ಜಿಲ್ಲಾ ಸಮನ್ವಯ ಸಮಿತಿಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪಲ್ಸ್ ಪೋಲಿಯೋ ಲಸಿಕಾ ಅಭಿಯಾನವನ್ನು ಅಗತ್ಯಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವ ಮೂಲಕಯಶಸ್ವಿಗೊಳಿಸಬೇಕು.
ಬೂತ್‌ಗೆ ಬರಲು ಆಗದೇಇರುವ ಮಕ್ಕಳಿಗೆ ಮನೆಗೆ ತೆರಳಿ ಲಸಿಕೆ ನೀಡಬೇಕು.ಬಸ್‌ನಿಲ್ದಾಣಗಳಲ್ಲಿ ಲಸಿಕಾ ಬೂತ್ ನಿರ್ಮಿಸಿ ಬೇರೆಡೆಗೆತೆರಳುವ ಮಕ್ಕಳಿಗೂ ತಪ್ಪದೇ ಲಸಿಕೆ ನೀಡಬೇಕು ಎಂದರು.
ವಿಶ್ವ ಆರೋಗ್ಯ ಸಂಸ್ಥೆ ಸಲಹೆಗಾರ ಡಾ| ಶ್ರೀಧರ್‌ಮಾತನಾಡಿ, ಫೆ. 27ರಂದು ಬೂತ್‌ಗಳಲ್ಲಿ 0-5ವರ್ಷದ ಒಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆಹಾಕಲಾಗುವುದು.
ಫೆ. 28 ರಿಂದ ಮಾರ್ಚ್ 2ವರೆಗೆಮೂರು ದಿನಗಳ ಕಾಲ ಮನೆ ಮನೆ ಭೇಟಿ ಮಾಡಿಬಿಟ್ಟು ಹೋದ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಗುವುದು. 0-5 ವರ್ಷದ ಯಾವುದೇ ಮಗುಪೋಲಿಯೋ ಹನಿ ಹಾಕಿಸದೇ ಉಳಿಯಲಾರದಂತೆಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ
Davanagere: ಅಸೆಂಬ್ಲಿ ಅಧಿವೇಶನಕ್ಕೆ ಮೊದಲು ಸಿದ್ದರಾಮಯ್ಯ ರಾಜೀನಾಮೆ: ಆರ್.ಅಶೋಕ್
Waqf issue: ರಾಜ್ಯ ಸರ್ಕಾರದ ಆದೇಶ ಕೇವಲ ಜನರ ಕಣ್ಣೊರೆಸುವ ತಂತ್ರ: ಪ್ರಹ್ಲಾದ್ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.