ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Team Udayavani, Jan 30, 2022, 2:11 PM IST

ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

ದೊಡ್ಡಬಳ್ಳಾಪುರ: ರಾಯಚೂರಿನಲ್ಲಿ ನಡೆದ ಗಣ ರಾಜ್ಯೋತ್ಸವ ಆಚರಣೆಯ ಕಾರ್ಯಕ್ರಮದಲ್ಲಿ ಸಂವಿ ಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಭಾವಚಿತ್ರ ತೆಗೆಸಿದ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ, ಸಂವಿ ಧಾನ ರಕ್ಷಣೆಗಾಗಿ ನಾಗರಿಕ ವೇದಿಕೆಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಸಂವಿಧಾನ ರಕ್ಷಣೆಗಾಗಿ ನಾಗರಿಕ ವೇದಿಕೆಯ ಸಂಚಾಲಕ ರಾಜು ಸಣ್ಣಕ್ಕಿ ಮಾತನಾಡಿ, ರಾಯಚೂರು ಕೋರ್ಟ್‌ ಆವರಣದಲ್ಲಿ ಗಣರಾಜ್ಯೋತ್ಸವಆಚರಣೆಯ ಸಂದರ್ಭದಲ್ಲಿ ಡಾ. ಬಿ.ಆರ್‌ಅಂಬೇಡ್ಕರ್‌ ಅವರ ಫೋಟೋ ಇಟ್ಟರೆ ನಾನು  ಕಾರ್ಯಕ್ರಮಕ್ಕೆ ಬರುವುದಿಲ್ಲ ಎಂದು ಹೇಳಿಅಂಬೇಡ್ಕರ್‌ ಅವರ ಭಾವಚಿತ್ರವನ್ನು ತೆರವುಗೊಳಿಸಲು ತಿಳಿಸಿದ ರಾಯಚೂರು ಜಿಲ್ಲಾ ಜಡ್ಜ್ ಮಲ್ಲಿಕಾರ್ಜುನ್‌ಗೌಡ, ಅವರ ನಡೆ ಖಂಡನೀಯವಾಗಿದ್ದು, ನ್ಯಾಯಾಧೀಶರನ್ನು ದೇಶದ್ರೋಹದ ಆರೋಪದ ಮೇಲೆ ಕಡ್ಡಾಯ ನಿವೃತ್ತಿ ನೀಡಿ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.

ಪಿವಿಸಿ ಜಿಲ್ಲಾಧ್ಯಕ್ಷ ಗೂಳ್ಯ ಹನುಮಣ್ಣ ಮಾತನಾಡಿ, ನ್ಯಾಯ ಸ್ಥಾನದಲ್ಲಿ ಕುಳಿತ ವ್ಯಕ್ತಿಯೊಬ್ಬರು ಅಸ್ಪೃಶ್ಯತೆ ಆಚರಣೆ ಮಾಡಿರುವುದು ನ್ಯಾಯಾಧೀಶರ ಸ್ಥಾನಕ್ಕೆ ಅರ್ಹರಲ್ಲ ಎಂಬುದು ಸಾಭೀತಾಗಿದೆ. ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳು ಸಂವಿಧಾನದ ಆಶಯಗಳಿಗೆ ಬದ್ಧವಾಗಿ ಕಾರ್ಯ ನಿರ್ವಹಿಸಬೇಕು ಆದರೆ ಸಂವಿಧಾನದ ಆಶಯದಂತೆ ನ್ಯಾಯಾ ಶರಾಗಿ ಆಯ್ಕೆಯಾಗಿ ಸಂವಿಧಾನದ ಆಶಯದಂತೆ ಕಾರ್ಯ ನಿರ್ವಹಿಸಬೇಕಾದ ಮಲ್ಲಿಕಾರ್ಜುನ ಗೌಡ ಇವರು ವೃತ್ತಿ ಗೌರವಕ್ಕೆ ಅವಮಾನ ಮಾಡಿದ್ದಾರೆ ಎಂದರು.

ಸಂವಿಧಾನಕ್ಕೆ ಮತ್ತು ಭಾರತ ರತ್ನ, ಮಹಾ ನಾಯಕ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಅವರಿಗೆ ಅವಮಾನ ಮಾಡಿರುತ್ತಾರೆ ಎಂದುಆರೋಪಿಸಿದರು. ಛಲವಾದಿ ಮಹಾ ಸಭಾದತಾಲೂಕು ಅಧ್ಯಕ್ಷ ಗುರುರಾಜಪ್ಪ ಮಾತನಾಡಿರಾಯಚೂರು ನ್ಯಾಯಾಧೀಶರ ನಡೆ ದೇಶ ದೊ›àಹ ಕೃತ್ಯವಾಗಿದ್ದು, ಘಟನೆಗೆ ಸಂಬಂಸಿದಂತೆ ಮಾನ್ಯ ರಾಜ್ಯಪಾಲರು ಮಧ್ಯ ಪ್ರವೇಶಿಸಿ, ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಅವರ ವಿರುದ್ಧ ಉಚ್ಚ ನ್ಯಾಯಾಲಯ ಸ್ವಯಂಪ್ರೇರಿತವಾಗಿ ರಾಷ್ಟ್ರದ್ರೋಹದ ಪ್ರಕರಣವನ್ನ ದಾಖಲಿಸಬೇಕು ಎಂದು ಉಚ್ಚ ನ್ಯಾಯಾಲಯದ ನ್ಯಾಯಾಧೀಶರಿಗೆ ಆದೇಶ ನೀಡಬೇಕೆಂದು ಒತ್ತಾಯಿಸಿದರು.

ತಾಲೂಕು ಕನ್ನಡ ಪಕ್ಷದ ಅಧ್ಯಕ್ಷ ಸಂಜೀವನಾಯ್ಕ್ ದಲಿತ ವಿಮೋಚನಾ ಶಕ್ತಿಯ ರಾಜ್ಯಾಧ್ಯಕ್ಷ ಮಂಜು ನಾಥ, ಕಾರ್ಯದರ್ಶಿ ಸದಾನಂದ, ಪ್ರಜಾವಿಮೋಚನಾ ಬಹುಜನ ಸಮಿತಿಯ ರಾಜ್ಯಕಾರ್ಯದರ್ಶಿ ಚನ್ನಿಗರಾಯಪ್ಪ, ಅಂಬೇಡ್ಕರ್‌ಸೇನೆಯ ತಾಲೂಕು ಅಧ್ಯಕ್ಷ ನಂಜೇಶ್‌ ಮತ್ತು ದಸಂಸದ ಛಲವಾದಿ ಸುರೇಶ್‌ ಸೇರಿದಂತೆ ಸಂಘಟನೆಗಳ ಕಾರ್ಯಕರ್ತರು ಹಾಜರಿದ್ದರು.

ಟಾಪ್ ನ್ಯೂಸ್

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-kanna

Karnataka; ವಲಸಿಗರು ಈ ನಾಡಿಗೊಂದು ಸಮಸ್ಯೆ ಆಗದಿರಲಿ…

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

1-madaraa

CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Stray dogs: ಅಂ.ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀದಿ ನಾಯಿಗಳ ಹಾವಳಿ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Tragic: ಮರದ ಕಾರ್ಖಾನೆಯಲ್ಲಿ ಆಕಸ್ಮಿಕ ಬೆಂಕಿ; ಕಾರ್ಮಿಕ ಸಜೀವ ದಹನ

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Bantwala1

Bantwala: ಅಧಿಕಾರಿಗಳ ನಡೆ ವಸತಿ ನಿಲಯಗಳ ಕಡೆ; ವಿನೂತನ ಕಾರ್ಯಕ್ರಮ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-kanna

Karnataka; ವಲಸಿಗರು ಈ ನಾಡಿಗೊಂದು ಸಮಸ್ಯೆ ಆಗದಿರಲಿ…

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.