ಕುಡಿವ ನೀರಿನ ಸಮಸ್ಯೆ ಶೀಘ್ರ ಇತ್ಯರ್ಥ : ಸಮರೋಪಾದಿಯಲ್ಲಿ ನಡೆಯುವ ಕೆಲಸಕ್ಕೆ ಮೆಚ್ಚುಗೆ
Team Udayavani, Jan 30, 2022, 6:14 PM IST
ಸುರಪುರ: ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ, ಶಾಸಕ ರಾಜುಗೌಡ ಶನಿವಾರ ನಗರಸಭೆ ವ್ಯಾಪ್ತಿಯ ರಂಗಂಪೇಟೆಗೆ ಭೇಟಿ ನೀಡಿ, ಮಂಡಳಿಯಿಂದ ನಡೆದಿರುವ ಕುಡಿಯವ ನೀರಿನ ಪೈಪ್‌ಲೈನ್ ಕಾಮಗಾರಿ ಪರಿಶೀಲಿಸಿದರು.
ನಿರ್ಮಾಣ ಹಂತದಲ್ಲಿರುವ 7 ಟ್ಯಾಂಕ್‌ಗಳ ಮತ್ತು ಪೈಪ್‌ಲೈನ್ ಕಾಮಗಾರಿ ಸಮರೋಪಾದಿಯಲ್ಲಿ ನಡೆಯುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ಇದು ನನ್ನ ಬಹುದಿನ ಕನಸಿನ ಯೋಜನೆ ಅನುಷ್ಠಾನಕ್ಕಾಗಿ ಸಾಕಷ್ಟು ಶ್ರಮಿಸಿದ್ದೇನೆ. ಕಾಮಗಾರಿ ಕಳಪೆ ಆಗದಂತೆ ಜಾಗೃತಿ ವಹಿಸಿ, ನೀವು ಮಾಡಿದ ಕೆಲಸ ಬಹುಕಾಲ ಬಾಳಿಕೆ ಬರಬೇಕು. ಜನಮಾನಸದಲ್ಲಿ ಸ್ಥರವಾಗಿ ಉಳಿಯಬೇಕು ಎಂದು ಸ್ಥಳದಲ್ಲಿದ್ದ ಕುಡಿಯುವ ನೀರು ಸರಬರಾಜು ಇಲಾಖೆಯ ಇಂಜನಿಯರ್ ಮತ್ತು ಗುತ್ತಿಗೆದಾರರಿಗೆ ತಾಕೀತು ಮಾಡಿದರು.
ನಂತರ ರಂಗಂಪೇಟೆ-ತಿಮ್ಮಾಪುರದ ರಸ್ತೆ ಅಗಲೀಕರಣ ಕಾಮಗಾರಿ ಪರಿಶೀಲಿಸಿದರು. ಅಗಲೀಕರಣದಲ್ಲಿ ಮನೆ ಕಳೆದುಕೊಂಡಿರುವ ಅನೇಕರು ಶಾಸಕರನ್ನು ಭೇಟಿ ಮಾಡಿ, ಇರುವ ಮನೆ
ಕಳೆದುಕೊಂಡು ಬೀದಿಗೆ ಬಿದ್ದಿದ್ದೇವೆ. ದಯವಿಟ್ಟು ಮನೆ ಒದಗಿಸಿಕೊಡುವಂತೆ ಮನವಿ ಮಾಡಿದರು. ಮನೆ ಕಳೆದುಕೊಂಡ ಬಡವರ ಕೈ ಬಿಡುವುದಿಲ್ಲ. ಕೊಳಚೆ ನಿರ್ಮೂಲನಾ ನಿಗಮದಿಂದ
ಮನೆಗಳು ಮಂಜೂರಿಯಾಗಿವೆ. ಮನೆ ಕಳೆದುಕೊಂಡವರಿಗೆ ಮತ್ತು ವಸತಿ ರಹಿತ ಅರ್ಹ ಬಡವರಿಗೆ ಮನೆ ಕಲ್ಪಿಸಿಕೊಡುವುದಾಗಿ ಶಾಸಕರು ಭರವಸೆ ನೀಡಿದರು. ಮನೆ ಕಳೆದುಕೊಂಡವರ
ಪಟ್ಟಿ ಮಾಡಿ ಕೊಡುವಂತೆ ಸ್ಥಳದಲ್ಲಿದ್ದ ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ ಅವರಿಗೆ ಸೂಚಿಸಿದರು.
ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಳೆದ ಬಾರಿ ಚುನಾವಣೆಯಲ್ಲಿ ನಿರಂತರ ನೀರು ಕೊಡುವುದಾಗಿ ಭರವಸೆ ನೀಡಿದ್ದೆ. ನುಡಿದಂತೆ ನಡೆದುಕೊಂಡಿದ್ದೇನೆ ಕುಡಿಯುವ ನೀರಿನ ಕಾಮಗಾರಿ ತ್ವರಿತಗತಿಯಲ್ಲಿ ಸಾಗಿದೆ. ಆದಷ್ಟು ಬೇಗ ಕಾಮಗಾರಿ ಮುಗಿಯಲಿದ್ದು, ದಿನದ 24 ಗಂಟೆಯೂ ನೀರು ಸಿಗಲಿದೆ ಎಂದು ತಿಳಿಸಿದರು. ನಗರಸಭೆ ಉಪಾಧ್ಯಕ್ಷ ಮಹೇಶ ಪಾಟೀಲ್,
ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ, ಎಇ ಶಂಕರಗೌಡ, ನಗರಸಭೆ ಸದಸ್ಯ ನರಸಿಂಹಕಾಂತ ಪಂಚಮಗಿರಿ, ಮುಖಂಡರಾದ ರಾಜಾ ಹನುಮಪ್ಪ ನಾಯಕ (ತಾತಾ),
ವೇಣುಗೋಪಾಲನಾಯಕ ಜೇವರ್ಗಿ, ಭೀಮಾಶಂಕರ ಬಿಲ್ಲವ್, ರಾಜು ಪುಲ್ಸೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Manipal: ಮಾಹೆಯ ಪ್ರಸನ್ನ ಸ್ಕೂಲ್ ಆಪ್ ಪಬ್ಲಿಕ್ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ
Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.