ನೊಂದ ಮಹಿಳೆಯರಲ್ಲಿ ಭರವಸೆ ಮೂಡಿಸಿದ “ಸಖಿ’ ಕೇಂದ್ರ

ನೆರವು ಪಡೆದವರಲ್ಲಿ ಅಪ್ರಾಪ್ತ ವಯಸ್ಸಿನವರೇ ಅಧಿಕ!

Team Udayavani, Jan 30, 2022, 6:41 PM IST

ನೊಂದ ಮಹಿಳೆಯರಲ್ಲಿ ಭರವಸೆ ಮೂಡಿಸಿದ “ಸಖಿ’ ಕೇಂದ್ರ

ಮಹಾನಗರ: ಮಂಗಳೂರಿನ “ಸಖಿ-ಒನ್‌ಸ್ಟಾಪ್‌ ಸೆಂಟರ್‌’ ಕಳೆದ ಮೂರು ವರ್ಷಗಳಲ್ಲಿ ದೌರ್ಜನ್ಯಕ್ಕೊಳಗಾದ 549 ಮಹಿಳೆಯರಿಗೆ ಆಸರೆಯಾಗಿದ್ದು ನೆರವು ಪಡೆದವರ ಪೈಕಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರೇ ಹೆಚ್ಚು!

ಮಹಿಳಾ ದೌರ್ಜನ್ಯ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಹೆಚ್ಚು ವರದಿಯಾಗುತ್ತಿರುವ ಜತೆಗೆ “ಸಖಿ’ಯ ನೆರವು ಪಡೆಯುವವರ ಸಂಖ್ಯೆಯೂ ಹೆಚ್ಚಳಗೊಂಡಿದೆ. ನೆರವು ಪಡೆದವರಲ್ಲಿ ಶೇ.65ರಷ್ಟು ಮಂದಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಅಪ್ರಾಪ್ತ ವಯಸ್ಸಿನ ಯುವತಿಯರು.

ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ ನೆರವು, ಆಪ್ತ ಸಮಾಲೋಚನೆ, ಪೊಲೀಸ್‌, ಕಾನೂನು ನೆರವು, ತಾತ್ಕಾಲಿಕ ವಸತಿ ಸೌಲಭ್ಯ ಒದಗಿಸುವ ಉದ್ದೇಶದಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಮಂಗಳೂರಿನ ಸರಕಾರಿ ಲೇಡಿಗೋಶನ್‌ ಸರಕಾರಿ ಆಸ್ಪತ್ರೆಯ ಕಟ್ಟಡದಲ್ಲಿ “ಸಖಿ’ ಕೇಂದ್ರವು 2019ರ ಜ. 26ರಿಂದ ಕಾರ್ಯನಿರ್ವಹಿಸುತ್ತಿದ್ದು, ಇದೀಗ ನೂತನ ಸ್ವಂತ ಕಟ್ಟಡದಲ್ಲಿ ಕಾರ್ಯಾಚರಿಸಲು ಸಿದ್ಧವಾಗಿದೆ.

ತಿಂಗಳಿಗೆ 20ರಿಂದ 25
ಮಂದಿಗೆ ನೆರವು
ಲೈಂಗಿಕ ದೌರ್ಜನ್ಯಕ್ಕೊಳಗಾದ ಅಪ್ರಾಪ್ತ ವಯಸ್ಸಿನ ಯುವತಿಯರು ಅತ್ಯಧಿಕ ಸಂಖೆಯಲ್ಲಿ ಸಖಿಯ ನೆರವು ಪಡೆದಿದ್ದಾರೆ. ಉಳಿದಂತೆ ಕೌಟುಂಬಿಕ ಕಲಹಗಳಲ್ಲಿ ಹಾಗೂ ಇತರ ರೀತಿಯಲ್ಲಿ ದೌರ್ಜನ್ಯಕ್ಕೊಳಗಾಗಿ ನೊಂದವರಿಗೆ ನೆರವು ಒದಗಿಸಲಾಗಿದೆ. ಕೇಂದ್ರದಲ್ಲಿ ಒಟ್ಟು 2019ರ ಎಪ್ರಿಲ್‌ನಿಂದ 2020ರ ಮಾರ್ಚ್‌ವರೆಗೆ 121 ಮಹಿಳೆಯರಿಗೆ ವೈದ್ಯಕೀಯ, 42 ಮಹಿಳೆಯರಿಗೆ ಪೊಲೀಸ್‌, 87 ಮಹಿಳೆಯರಿಗೆ ಆಪ್ತ ಸಮಾಲೋಚನೆ, 38 ಮಹಿಳೆಯರಿಗೆ ಕಾನೂನು ನೆರವು, 5 ಮಂದಿಗೆ ತಾತ್ಕಾಲಿಕ ವಸತಿ ಒದಗಿಸಲಾಗಿದೆ. 2020ರ ಎಪ್ರಿಲ್‌ನಿಂದ 2021ರ ಮಾರ್ಚ್‌ವರೆಗೆ 129 ಮಹಿಳೆಯರಿಗೆ ವೈದ್ಯಕೀಯ, 9 ಮಹಿಳೆಯರಿಗೆ ಪೊಲೀಸ್‌, 128 ಮಹಿಳೆಯರಿಗೆ ಆಪ್ತ ಸಮಾಲೋಚನೆ, 71 ಮಹಿಳೆಯರಿಗೆ ಕಾನೂನು ನೆರವು, 11 ಮಂದಿಗೆ ತಾತ್ಕಾಲಿಕ ವಸತಿ ಒದಗಿಸಲಾಗಿದೆ. 2021ರ ಎಪ್ರಿಲ್‌ನಿಂದ 2021ರ ಡಿಸೆಂಬರ್‌ವರೆಗೆ 99 ಮಹಿಳೆಯರಿಗೆ ವೈದ್ಯಕೀಯ, 8 ಮಹಿಳೆಯರಿಗೆ ಪೊಲೀಸ್‌ ನೆರವು, 145 ಮಹಿಳೆಯರಿಗೆ ಆಪ್ತ ಸಮಾಲೋಚನೆ, 81 ಮಹಿಳೆಯರಿಗೆ ಕಾನೂನು ನೆರವು, 10 ಮಹಿಳೆಯರಿಗೆ ವಸತಿ ಒದಗಿಸಲಾಗಿದೆ.

24 ಗಂಟೆಯೂ ಸೇವೆ
“ಸಖಿ’ ಕೇಂದ್ರದಲ್ಲಿ ಓರ್ವ ಸೆಂಟರ್‌ ಅಡ್ಮಿನಿಸ್ಟ್ರೇಟರ್‌, ಓರ್ವ ಆಪ್ತ ಸಮಾಲೋಚಕಿ, ಓರ್ವ ಮಹಿಳಾ ಪೊಲೀಸ್‌ ಸಿಬಂದಿ, ಇಬ್ಬರು ಸಮಾಜ ಸೇವಾ ಕಾರ್ಯಕರ್ತರು, ಇಬ್ಬರು ಕಾನೂನು ಸಮಾಲೋಚಕರಿದ್ದು, ದಿನದ 24 ಗಂಟೆಯೂ ಸೇವೆ ದೊರೆಯುತ್ತದೆ. ದೌರ್ಜನ್ಯಕ್ಕೊಳಗಾದ ಮಹಿಳೆಗೆ ವೈದ್ಯಕೀಯ ತುರ್ತುಸೇವೆಗಳ ಅಗತ್ಯವಿದ್ದರೆ ತತ್‌ಕ್ಷಣ ವೈದ್ಯಕೀಯ ಪರೀಕ್ಷೆ, ಸಮಾಲೋಚನೆ ಮಾಡಲಾಗುತ್ತದೆ. ಪ್ರಥಮ ವರ್ತಮಾನ ವರದಿ ಬಗ್ಗೆ ಮಾಹಿತಿ, ಸಹಾಯ ನೀಡಲಾಗುತ್ತದೆ. 5 ದಿನಗಳವರೆಗೆ ತಾತ್ಕಾಲಿಕ ಆಶ್ರಯ ನೀಡಲಾಗುತ್ತದೆ. ಮಹಿಳೆಯ ಬಗ್ಗೆ ಗೌಪ್ಯತೆಯನ್ನು ಕಾಪಾಡಲಾಗುತ್ತದೆ. ನೆರವಿಗಾಗಿ ಮಹಿಳಾ ಸಹಾಯವಾಣಿ 181 ಅಥವಾ 7259107284 ಸಂಪರ್ಕಿಸಬಹುದಾಗಿದೆ.

ನೆರವು ಪಡೆಯುವವರ ಸಂಖ್ಯೆ ಹೆಚ್ಚಳ
“ಸಖಿ’ ಸೆಂಟರ್‌ನಿಂದ ನೆರವು ಪಡೆಯುತ್ತಿರುವ ಮಹಿಳೆಯರ ಸಂಖ್ಯೆ ಅಧಿಕವಾಗಿದೆ. ಒಂದೇ ಸೂರಿನಡಿ ದಿನದ 24 ಗಂಟೆಯೂ ವಿವಿಧ ರೀತಿಯ ನೆರವು ಒದಗಿಸಲಾಗುತ್ತಿದೆ..
-ಪಾಪ ಬೋವಿ,
ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ.

ತುರ್ತು ನೆರವು ಅತ್ಯಗತ್ಯ
ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆಯುವುದು ಅಗತ್ಯ. ಒಂದು ವೇಳೆ ದೌರ್ಜನ್ಯಕ್ಕೊಳಗಾದರೆ ಅವರಿಗೆ ಸಕಾಲದಲ್ಲಿ ಅಗತ್ಯ ನೆರವು ಒದಗಿಸುವುದು ಕೂಡ ಅಷ್ಟೇ ಅಗತ್ಯ. ಈ ನಿಟ್ಟಿನಲ್ಲಿ “ಸಖಿ” ನೊಂದವರಲ್ಲಿ ಹೊಸ ಭರವಸೆ, ಧೈರ್ಯ ಮೂಡಿಸುವ ಕೆಲಸ ಮಾಡುತ್ತಿದೆ.
ಡಾ| ದುರ್ಗಾಪ್ರಸಾದ್‌,
ವೈದ್ಯಕೀಯ ಅಧೀಕ್ಷಕರು, ಲೇಡಿಗೋಶನ್‌ ಆಸ್ಪತ್ರೆ

- ಸಂತೋಷ್‌ ಬೊಳ್ಳೆಟ್ಟು

ಟಾಪ್ ನ್ಯೂಸ್

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

4(1

Mangaluru: ಪಂಪ್‌ವೆಲ್‌-ಪಡೀಲ್‌ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.