ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ: ನಾಳೆ ರಬಕವಿ ಬನಹಟ್ಟಿ ಬಂದ್‌ಗೆ ಕರೆ
Team Udayavani, Jan 30, 2022, 7:31 PM IST
ರಬಕವಿ-ಬನಹಟ್ಟಿ: ರಾಯಚೂರಿನ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನಿಸಿದ್ದು ಖಂಡಿಸಿ ಇದೇ 31 ರಂದು ರಬಕವಿ ಬನಹಟ್ಟಿ ತಾಲ್ಲೂಕು ಸಂಪೂರ್ಣ ಬಂದ್ ಗೆ ಕರೆಯನ್ನು ನೀಡಲಾಗಿದೆ ಎಂದು ಮುಖಂಡರಾದ ಶಿವಲಿಂಗ ಗೊಂಬಿಗುಡ್ಡ ಮತ್ತು ರಾಜು ಸರಿಕರ್ ತಿಳಿಸಿದರು.
ಅವರು ಭಾನುವಾರ ಬನಹಟ್ಟಿಯ ನಿರೀಕ್ಷಣಾ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರನ್ನು ಕೂಡಲೇ ಸೇವೆಯಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ರಬಕವಿಯ ಹೊಸ ಬಸ್ ನಿಲ್ದಾಣದಿಂದ ಬನಹಟ್ಟಿಯ ಗಾಂಧಿ ಸರ್ಕಲ್ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗುವುದು. ಬೆಳಗ್ಗೆ 7 ರಿಂದ ಸಂಜೆ 5 ರವರೆಗೆ ಎಲ್ಲ ಅಂಗಡಿ ಮುಗ್ಗಟ್ಟಗಳನ್ನು ಬಂದ್ ಮಾಡಲಾಗುವುದು. ಅದೇ ರೀತಿಯಾಗಿ ಸಂಚಾರವನ್ನು ಕೂಡಾ ಬಂದ್ ಮಾಡಲಾಗುವುದು ಎಂದು ಮುಖಂಡರು ತಿಳಿಸಿದರು.
ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿಗಳು, ಪ್ರಗತಿಪರ ಸಂಘಟನೆಗಳ ಒಕ್ಕೂಟ, ಕರವೇ, ಅಟೊ ಚಾಲಕರ ಸಂಘ, ಅಲ್ಪ ಸಂಖ್ಯಾತರ ಘಟಕ ಸೇರಿದಂತೆ ಅನೇಕ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗವಹಿಸಲಿವೆ ಶಿವಲಿಂಗ ಗೊಂಬಿಗುಡ್ಡ ತಿಳಿಸಿದರು.
ಈ ಸಂದರ್ಭದಲ್ಲಿ ಪ್ರಭಾಕರ ಚಲಾವಾದಿ, ಸುನೀಲ ಹರಿಜನ, ಶಿವಾನಂದ ಕಾಂಬಳೆ ಮತ್ತು ಶ್ರೀಧರ ಕಿತ್ತೂರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
India: ಒಂದು ದೇಶ ಒಂದು ಚುನಾವಣೆ ಜಾರಿ ಆಗಲಿ: ಪೇಜಾವರ ಸ್ವಾಮೀಜಿ
Rabkavi Banahatti: ಲೋಕ ಅದಾಲತ್ ನಲ್ಲಿ ಒಂದಾದ ದಂಪತಿಗಳು
ವಿಳಾಸ ಕೇಳುವ ನೆಪದಲ್ಲಿ ವ್ಯಕ್ತಿಯ ಕೊರಳಲ್ಲಿದ್ದ ಚಿನ್ನದ ಚೈನ್ ಕದ್ದ ಅಪರಿಚಿತ ವ್ಯಕ್ತಿ
Mudhol: ಬಸ್ ಗೆ ಡಿಕ್ಕಿ ಹೊಡೆದ ಬೈಕ್… ಸವಾರರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.