ವಿಶ್ವಸಂಸ್ಥೆ ಭೂಪಟ… ಜಮ್ಮು-ಕಾಶ್ಮೀರ ಪಾಕ್ ಮತ್ತು ಚೀನಾ ಭಾಗವಂತೆ!ಪ್ರಧಾನಿಗೆ ಸೇನ್ ಪತ್ರ
ಚೀನಾದ ಭಾಗ ಎಂದು ಬಿಂಬಿಸಿರುವ ಬಗ್ಗೆ ಕೇಂದ್ರ ಸರ್ಕಾರ ಕೂಡಲೇ ಕ್ರಮ ತೆಗೆದುಕೊಳ್ಳಬೇಕಾಗಿದೆ.
Team Udayavani, Jan 31, 2022, 2:49 PM IST
ನವದೆಹಲಿ:ವಿಶ್ವ ಆರೋಗ್ಯ ಸಂಸ್ಥೆಯ(ಡಬ್ಲ್ಹುಎಚ್ ಒ) ಕೋವಿಡ್ ಡ್ಯಾಶ್ ಬೋರ್ಡ್ ನ ಭಾರತದ ನಕ್ಷೆಯಲ್ಲಿ ಜಮ್ಮು-ಕಾಶ್ಮೀರವನ್ನು ಪಾಕಿಸ್ತಾನ ಮತ್ತು ಚೀನಾದ ಭಾಗ ಎಂದು ತೋರಿಸಿದ್ದು, ಈ ಬಗ್ಗೆ ಕೇಂದ್ರ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ತೃಣಮೂಲ ಕಾಂಗ್ರೆಸ್ ಸಂಸದ ಒತ್ತಾಯಿಸಿದ್ದಾರೆ.
ಇದನ್ನೂ ಓದಿ:ಎಲ್.ಆರ್. ಶಿವರಾಮೇಗೌಡರನ್ನು ಪಕ್ಷದಿಂದ ಹೊರ ಹಾಕಿ: ಗುಡುಗಿದ ಹೆಚ್ ಡಿಕೆ
ಟಿಎಂಸಿ ಸಂಸದ ಸಂತನು ಸೇನ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವುದಾಗಿ ವರದಿ ತಿಳಿಸಿದೆ. ಅಲ್ಲದೇ ಈ ಕುರಿತು ಭಾನುವಾರ ಟ್ವೀಟ್ ಮಾಡಿರುವುದಾಗಿ ಹೇಳಿದೆ.
WHO COVID http://19.in ಸೈಟ್ ನಲ್ಲಿನ ಭಾರತದ ಭೂಪಟದಲ್ಲಿ ಜಮ್ಮು-ಕಾಶ್ಮೀರವನ್ನು ಪ್ರತ್ಯೇಕ ಬಣ್ಣದಲ್ಲಿ ತೋರಿಸಿದ್ದು, ಒಂದು ಭಾಗ ಪಾಕಿಸ್ತಾನ ಹಾಗೂ ಮತ್ತೊಂದು ಭಾಗವನ್ನು ಚೀನಾ ಎಂಬಂತೆ ಬಿಂಬಿಸಲಾಗಿದೆ ಎಂದು ಸೇನ್ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ವಿಶ್ವಸಂಸ್ಥೆಯ ಕೋವಿಡ್ ಡ್ಯಾಶ್ ಬೋರ್ಡ್ ನ ಭಾರತದ ಭೂಪಟದಲ್ಲಿ ಜಮ್ಮು ಕಾಶ್ಮೀರವನ್ನು ಪಾಕಿಸ್ತಾನ ಮತ್ತು ಚೀನಾದ ಭಾಗ ಎಂದು ಬಿಂಬಿಸಿರುವ ಬಗ್ಗೆ ಕೇಂದ್ರ ಸರ್ಕಾರ ಕೂಡಲೇ ಕ್ರಮ ತೆಗೆದುಕೊಳ್ಳಬೇಕಾಗಿದೆ. ಇಂತಹ ದೊಡ್ಡ ಪ್ರಮಾದವನ್ನು ಇಷ್ಟು ದಿನಗಳ ಕಾಲ ಹೇಗೆ ನಿರ್ಲಕ್ಷಿಸಲಾಯಿತು ಎಂದು ಕೇಂದ್ರ ಸರ್ಕಾರ ಜನತೆಗೆ ಮಾಹಿತಿ ನೀಡಬೇಕೆಂದು ಸೇನ್ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.