ಚಿಕನ್‌ ಫಾಕ್ಸ್‌ಗೆ ಇಬ್ಬರು ಮಕ್ಕಳು ಬಲಿ

Team Udayavani, Feb 1, 2022, 11:12 AM IST

4chickenpox

ವಾಡಿ: ಚಿಕನ್‌ ಫಾಕ್ಸ್‌ ಸಾಂಕ್ರಾಮಿಕ ರೋಗ ಉಲ್ಬಣಗೊಂಡು ಒಂದೇ ಕುಟುಂಬದ ಇಬ್ಬರು ಬಾಲಕರು ಮೃತಪಟ್ಟ ಘಟನೆ ನಾಲವಾರ ಗ್ರಾಮದಲ್ಲಿ ನಡೆದಿದೆ.

ಚಿತ್ತಾಪುರ ತಾಲೂಕಿನ ನಾಲವಾರ ಸ್ಟೇಷನ್‌ ಬಡಾವಣೆಯಲ್ಲಿ ಈ ಘಟನೆ ಸಂಭವಿಸಿದೆ. ಇಬ್ಬರು ಮಕ್ಕಳನ್ನು ಕಳೆದುಕೊಂಡಿರುವ ತಾಯಿ ಹಾಗೂ ಇನ್ನುಳಿದ ಇಬ್ಬರು ಮಕ್ಕಳು ಕೂಡ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪತಿಯನ್ನು ಕಳೆದುಕೊಂಡಿರುವ ಹಫಿಜಾ ಬೇಗಂ (44) ನಾಲವಾರ ಸ್ಟೇಷನ್‌ ಬಡಾವಣೆಯಲ್ಲಿ ವಾಸವಿದ್ದಾರೆ. ಏಕಾಏಕಿ ತನಗೂ ಮತ್ತು ತನ್ನ ನಾಲ್ವರು ಮಕ್ಕಳ ದೇಹದ ಮೇಲೆ ರಕ್ತದ ಕಲೆ ರೂಪದ ವಿಚಿತ್ರ ಚುಕ್ಕೆ ಗಾಯಗಳು ಕಾಣಿಸಿಕೊಂಡಿವೆ. ಸಾಮಾನ್ಯವಾಗಿ ತಗಲುವ ಗಣಜಲು ರೋಗ ಎಂದು ಭಾವಿಸಿ ಸ್ಥಳೀಯ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದಿದ್ದಾರೆ.

ತುರಿಕೆ, ನೋವು ಹೆಚ್ಚಾಗಿ ಇಡೀ ದೇಹಕ್ಕೆ ಹರಡುತ್ತಿರುವುದನ್ನು ಕಂಡು ಪುತ್ರರಾದ ಇಮ್ರಾನ್‌ ಪಟೇಲ್‌ (9) ಮತ್ತು ರೆಹಮಾನ್‌ ಪಟೇಲ್‌ (14) ಅವರನ್ನು ಸೊಲ್ಲಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಿದ ಹಫೀಜಾ ಬೇಗಂ, ಸ್ವತಃ ತಾನು ಕಾಯಿಲೆಯಿಂದ ನರಳಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಬಾಲಕ ಇಮ್ರಾನ್‌ ಜ.16ರಂದು ಮೃತಪಟ್ಟರೆ, ಇದೇ ಕಾಯಿಲೆಯಿಂದ ಬಳಲಿದ ಬಾಲಕ ರೆಹಮಾನ್‌ ಜ.31ರಂದು ಅಸುನೀಗಿದ್ದಾನೆ.

ನಫೀಸಾ (14) ಮತ್ತು ಅರ್ಮಾನ್‌ ಪಟೇಲ್‌ (5)ಗೂ ಇದೇ ರೋಗ ಕಾಡುತ್ತಿದ್ದು, ತಾಯಿ ಹಫೀಜಾಬೇಗಂ, ಪುತ್ರಿ ಹಾಗೂ ಪುತ್ರನ ಜತೆ ಸದ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ನಾಲವಾರ ಕುಟುಂಬಸ್ಥರ ಮನೆಗೆ ಭೇಟಿ ನೀಡಿದ ತಾಲೂಕು ವೈದ್ಯಾಧಿಕಾರಿ ಡಾ| ಅಮರದೀಪ ಪವಾರ ಹಾಗೂ ಆರೋಗ್ಯ ಸಿಬ್ಬಂದಿ, ತಾಯಿ, ಮಕ್ಕಳು ಮತ್ತು ಅಕ್ಕಪಕ್ಕದ ಮನೆಯವರ ರಕ್ತದ ಮಾದರಿ ಪಡೆದಿದ್ದಾರೆ.

ಮಹಿಳೆ ಹಫೀಜಾ ಬೇಗಂ, ಮಕ್ಕಳಾದ ನಫೀಜಾ, ಅರ್ಮಾನ್‌ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ನೀಡಲಾಗುತ್ತಿದೆ. ಮೇಲ್ನೋಟಕ್ಕೆ ಇದು ಚಿಕನ್‌ ಫಾಕ್ಸ್‌ ರೋಗದಂತೆ ಕಾಣುತ್ತಿದೆ. ಇದು ಮಾರಣಾಂತಿಕ ರೋಗವಲ್ಲ. ಅದಾಗ್ಯೂ ಇಬ್ಬರು ಬಾಲಕರು ಮೃತಪಟ್ಟಿದ್ದಾರೆ. ಇದಕ್ಕೆ ಕಾರಣವೇನು ಎಂಬುದು ಪ್ರಯೋಗಾಲಯದಿಂದ ವರದಿ ಬಂದಾಗಲೇ ಸ್ಪಷ್ಟವಾಗುತ್ತದೆ. ಆರೋಗ್ಯ ಸಿಬ್ಬಂದಿ ತಂಡದ ಮೂಲಕ ನಾಲವಾರ ಸ್ಟೇಷನ್‌ ಬಡಾವಣೆಯ ಜನರ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. -ಅಮರದೀಪ ಪವಾರ, ತಾಲೂಕು ವೈದ್ಯಾಧಿಕಾರಿ

ಟಾಪ್ ನ್ಯೂಸ್

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು

Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು

priyank kharge

Kalaburagi: ಪುನರ್‌ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ

Priyank–Kharge

Waqf Notice Issue: ಬಿಜೆಪಿ- ಕಾಂಗ್ರೆಸ್‌ ನಾಯಕರಿಂದ ರಾಜಕೀಯ ವಾಕ್ಸಮರ

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.