ಮಾಸಾಂತ್ಯದೊಳಗೆ ಕಾರ್ಯಕ್ರಮ ಮುಗಿಸಿ

Team Udayavani, Feb 1, 2022, 1:31 PM IST

17programme

ರಾಯಚೂರು: ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆಗೆ ಸಂಬಂಧಿಸಿದ ಬಾಕಿ ಕಾರ್ಯಕ್ರಮಗಳನ್ನು ಫೆಬ್ರವರಿ ತಿಂಗಳ ಅಂತ್ಯದೊಳಗೆ ಮುಗಿಸುವಂತೆ ಅಪರ ಜಿಲ್ಲಾಧಿಕಾರಿ ಕೆ.ಆರ್‌.ದುರುಗೇಶ್‌ ಹೇಳಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ 2021-22ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದವರು ವಾಸಿಸುತ್ತಿರುವ ಕಾಲೋನಿಗಳ ಅಭಿವೃದ್ಧಿಗೆ ಬಿಡುಗಡೆಯಾಗುವ ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನವನ್ನು ಸಮರ್ಪಕವಾಗಿ ಬಳಸಬೇಕು. ನಿಗದಿತ ಅವಧಿಯಲ್ಲಿ ಕಾರ್ಯಕ್ರಮ ಮುಗಿಸಬೇಕು. ಈ ಸಮುದಾಯಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಸಿಗುವ ವಿವಿಧ ಯೋಜನೆಗಳ ಸೌಲಭ್ಯ ವಿತರಿಸಬೇಕು. ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನ ಸರಿಯಾಗಿ ಬಳಸದಿದ್ದಲ್ಲಿ, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಎಚ್ಚರಿಸಿದರು.

ಪರಿಶಿಷ್ಟ ಜಾತಿ ಮತ್ತು ಗಿರಿಜನ ಉಪಯೋಜನೆಯಲ್ಲಿ ಬಿಡುಗಡೆಯಾದ ಅನುದಾನವನ್ನು ನಿಗದಿತ ಅವಧಿಯಲ್ಲಿ ಖರ್ಚು ಮಾಡಬೇಕು. ಇಲ್ಲದಿದ್ದಲ್ಲಿ ಆ ಅನುದಾನ ವಾಪಸಾಗಲಿದೆ. ಆದಕಾರಣ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಹಕಾರ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಸೇರಿದಂತೆ ಇತರೆ ಇಲಾಖೆಗಳು ಎಸ್‌ ಸಿಪಿ ಮತ್ತು ಟಿಎಸ್‌ಪಿ ಯೊಜನೆಯಡಿ ಶೇ.100 ರಷ್ಟು ಪ್ರಗತಿ ಸಾಧಿಸಬೇಕು ಎಂದು ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಸತೀಶ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಮಕೃಷ್ಣ, ಡಿಡಿಪಿಐ ವೃಷಭೇಂದ್ರಯ್ಯ ಸ್ವಾಮಿ, ನಗರಸಭೆ ಪೌರಾಯುಕ್ತ ಕೆ.ಮುನಿಸ್ವಾಮಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಶರಣಪ್ಪ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ನಯಿಂ ಹುಸೇನ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳಾ ವಿ.ನಾಯಕ ಇದ್ದರು.

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.