ಕಬ್ಬು ಬೆಳೆಗಾರರ ಸಮಸ್ಯೆಗೆ ಸ್ಪಂದಿಸಲು ಡಿಸಿಗೆ ಮನವಿ

Team Udayavani, Feb 1, 2022, 2:36 PM IST

21DC

ಬೀದರ: ಕಬ್ಬಿಗೆ ವೈಜ್ಞಾನಿಕ ಬೆಲೆ ಪಾವತಿ ಸೇರಿದಂತೆ ಜಿಲ್ಲೆಯ ರೈತರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಜಿಲ್ಲಾ ರೈತ ಸಂಘ ಮತ್ತು ಹಸಿರು ಆಗ್ರಹಿಸಿದೆ.

ಸಂಘದ ಜಿಲ್ಲಾಧ್ಯಕ್ಷ ಸಿದ್ರಾಮಪ್ಪ ಆಣದೂರೆ ನೇತೃತ್ವದಲ್ಲಿ ಪ್ರಮುಖರು ಜಿಲ್ಲಾಧಿಕಾರಿ ರಾಮಚಂದ್ರನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಕಬ್ಬು ಸಾಗಿಸಿದ ನಾಲ್ಕೈದು ತಿಂಗಳ ನಂತರ ಕಾರ್ಖಾನೆಯವರು ಕಬ್ಬಿನ ಹಣ ಪಾವತಿಸುತ್ತಿದ್ದಾರೆ. ಅದು ಸಹ ಮನಬಂದಂತೆ ದರ ನೀಡುತ್ತಿದ್ದಾರೆ. ಕಳೆದ ಸಾಲಿನಲ್ಲಿ ಪ್ರತಿ ಟನ್‌ಗೆ 2400 ರೂ. ನೀಡುವುದಾಗಿ ವಾಗ್ಧಾನ ಮಾಡಿದರೂ ಕೂಡ 1950 ರೂ. ಮಾತ್ರ ನೀಡಲಾಗಿದೆ ಎಂದು ತಮ್ಮ ಅಳಲು ತೊಡಿಕೊಂಡಿದ್ದಾರೆ.

ಈ ವರ್ಷ ರಾಜ್ಯದಲ್ಲಿ ಎಲ್ಲ ಕಾರ್ಖಾನೆಯವರು 2500 ರೂ. ಕ್ಕಿಂತ ಹೆಚ್ಚಿನ ಹಣವನ್ನು ಸಂದಾಯ ಮಾಡುತ್ತಿದ್ದಾರೆ. ಆದರೆ, ಬೀದರ ಜಿಲ್ಲೆಯ ಕೇವಲ 2,000 ರೂ. ನೀಡುತ್ತಿರುವುದು ನಾಚಿಕೆಗೇಡು ವಿಷಯ. ಈ ಬಗ್ಗೆ ವಿಚಾರಿಸಿದರೆ ಎಫ್‌ಆರ್‌ಪಿ ಪ್ರಕಾರ ದರ ಇದಾಗಿದೆ ಎನ್ನುತ್ತಿದ್ದರೆ. ಕಾರ್ಖಾನೆಯವರು ಕೇವಲ ಶೇ.9ರಷ್ಟು ಕಬ್ಬು ರಿಕವರಿ ತೋರಿಸಿ ರೈತರಿಗೆ ಮೋಸ ಮಾಡುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ನಮ್ಮ ಜಿಲ್ಲೆಯ ಕಬ್ಬಿಗೆ ಶೇ.11ರಷ್ಟು ರಿಕವರಿ ಬರುತ್ತಿದೆ. ಹಾಗಾಗಿ ಜಿಲ್ಲೆಯ ಎಲ್ಲಾ ಕಾರ್ಖಾನೆಗಳಿಗೆ ಒಳ್ಳೆಯ ಕೇಮಿಸ್ಟ್‌ ರವರನ್ನು ನೇಮಕ ಮಾಡಿ ರಿಕವರಿ ಚೆಕ್‌ ಮಾಡಿ, ರೈತರಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕಬ್ಬಿನ ನಂತರ ತೊಗರಿ ವಾಣಿಜ್ಯ ಬೆಳೆ ಆಗಿದ್ದು, ಈ ವರ್ಷ ಅತಿವೃಷ್ಠಿ ಹಾಗೂ ರೋಗದಿಂದ ಬೆಳೆ ನಾಶವಾಗಿ ಸುಮಾರು 8-10 ಕ್ವಿಂಟಲ್‌ ಬದಲು ಕೇವಲ 2-3 ಕ್ವಿಂಟಲ್‌ ಬರುತ್ತಿದೆ. ಇದರಿಂದ ರೈತರು ಸಂಕಷ್ಟದಲ್ಲಿದ್ದು, ತಾವು ಸರಕಾರಕ್ಕೆ ಒತ್ತಾಯ ಮಾಡಿ ಪರಿಹಾರ ಒದಗಿಸಬೇಕು. ರೈತರು ಸಾಲ-ಸೂಲ ಮಾಡಿ ಬೆಳೆವಿಮೆ ಕಟ್ಟಿದ್ದಾರೆ. ಆದರೆ, ಸಂಕಷ್ಟದಲ್ಲಿರುವ ರೈತರಿಗೆ ಕಡಲೇ ವಿಮೆ ಪಾವತಿಗೆ ಕ್ರಮ ವಹಿಸಬೇಕು. ಕಳೆದ ಸಾಲಿನಲ್ಲಿ ಬಾಕಿ ಉಳಿದಿರುವ ವಿಮೆ ಹಣ ಸಹ ಜಮೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಈ ಸಮಸ್ಯೆಗಳಿಗೆ ಒಂದು ವಾರದಲ್ಲಿ ಸ್ಪಂದಿಸದಿದ್ದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ವೇಳೆ ಶ್ರೀಮಂತ ಬಿರಾದಾರ, ದಯಾನಂದ ಸ್ವಾಮಿ ಸಿರ್ಸಿ, ಶಂಕ್ರೆಪ್ಪ ಪಾರಾ, ಬಾಬುರಾವ ಜೋಳದಾಬಕ, ಪ್ರವೀಣ ಕುಲಕಣಿ, ನಾಗಯ್ಯ ಸ್ವಾಮಿ ಇದ್ದರು.

ಟಾಪ್ ನ್ಯೂಸ್

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.