ತಹಶೀಲ್ದಾರ್ ಮೇಲಿನ ಹಲ್ಲೆ ಖಂಡಿಸಿ ಮೆರವಣಿಗೆ
Team Udayavani, Feb 1, 2022, 2:57 PM IST
ಗುರುಮಠಕಲ್: ಬೀದರ ಜಿಲ್ಲೆಯ ಹುಮನಬಾದ್ ತಾಲೂಕಿನಲ್ಲಿ ತಹಶೀಲ್ದಾರ್ ಮೇಲೆ ನಡೆದ ಹಲ್ಲೆ ಖಂಡಿಸಿ, ತಪ್ಪಿಸ್ಥರಿಗೆ ಕಠಿಣ ಶಿಕ್ಷೆ ಮತ್ತು ಸರಕಾರಿ ನೌಕರರಿಗೆ ಸೂಕ್ತ ಭದ್ರತೆ ಕಲ್ಪಿಸಬೇಕು ಎಂದು ಆಗ್ರಹಿಸಿ ತಾಲೂಕು ಸರ್ಕಾರಿ ನೌಕರರ ಸಂಘದಿಂದ ಬಸವೇಶ್ವರ ವೃತ್ತದಿಂದ ತಹಶೀಲ್ದಾರ್ ಕಚೇರಿಯವರೆಗೆ ಮೌನ ರ್ಯಾಲಿ ನಡೆಸಿ, ತಹಶೀಲ್ದಾರ್ ಶರಣಬಸವ ಅವರಿಗೆ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷಕುಮಾರ ನಿರೇಟಿ, ಸರಕಾರಿ ಕೆಲಸ ದೇವರ ಕೆಲಸ ಎನ್ನುತ್ತಾರೆ. ಇಂತಹ ಹಲ್ಲೆಗಳಿಂದ ಸರ್ಕಾರಿ ನೌಕರರಿಗೆ ಅಭದ್ರತೆ ಕಾಡುತ್ತಿದೆ. ಸರಕಾರಿ ನೌಕರರು ಭಯದ ವಾತಾವರಣದಲ್ಲಿ ಕಾರ್ಯನಿರ್ವಹಿಸುವಂತೆ ಆಗಿದೆ. ಸರಕಾರಿ ನೌಕರರಿಗೆ ಭದ್ರತೆ ಕಲ್ಪಿಸಬೇಕಾಗಿದೆ. ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ನೀಡಿ ಸರಕಾರಿ ನೌಕರರಿಗೆ ಆತ್ಮವಿಶ್ವಾಸ ಹೆಚ್ಚಿಸುವ ಕ್ರಮ ತೆಗೆದುಕೊಳ್ಳಬೇಕು ಎಂದರು.
ವಿಶೇಷವಾಗಿ, ಕಂದಾಯ ಇಲಾಖೆ, ಗ್ರಾಪಂ, ಆರೋಗ್ಯ ಇಲಾಖೆ, ಭೂ ಇಲಾಖೆಯಲ್ಲಿರುವ ಸರಕಾರಿ ನೌಕರರು ಪ್ರತಿಸಲ ಹಲ್ಲೆಗೊಳಗಾಗುತ್ತಿರುತ್ತಾರೆ. ಕಠಿಣ ಕಾನೂನು ಜಾರಿಗೆ ತರಬೇಕೆಂದು ಅವರು ಮನವಿ ಮಾಡಿದರು.
ಸಂಘದ ಕಾರ್ಯದರ್ಶಿ ಕಿಷ್ಟರೆಡ್ಡಿ ಪಾಟೀಲ್ ದಂತಾಪುರ, ಉಪಾಧ್ಯಕ್ಷ ಭೀಮರಾಯ ಮತ್ತು ಅಂಜನೇಯ, ಕ್ರೀಡಾ ಕಾರ್ಯದರ್ಶಿಗಾಳದ ಸಾಯಬಣ್ಣ ಗಾಳ, ನಾಗೇಶ, ತಾಲೂಕು ಗ್ರಾಮ ಲೆಕ್ಕಿಗರ ಸಂಘದ ಅಧ್ಯಕ್ಷ ದೊಡ್ಡ ಬಸವರಾಜ, ತಾಲೂಕು ಆರೋಗ್ಯ ಇಲಾಖೆ ಸಂಘದ ಅಧ್ಯಕ್ಷ ಹರಿಬಾಬು, ಗ್ರೇಡ್-2 ಉಪತಹಶೀಲ್ದಾರ್ ನರಸಿಂಹ ಸ್ವಾಮಿ, ಶಿಕ್ಷಕರ ಸಂಘದ ಖಚಾಂಚಿ ಗಾಯತ್ರಿ ನಾಯಕಿನ್, ಶಿಕ್ಷಕರಾದ ಬಾಲರಾಜ, ಮೋನಪ್ಪ ಬಡಿಗೇರ, ವೆಂಕಟರಾಮುಲು ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.