ರೈತ ನಾರಿಯರಿಗೆ ಸೂರ್ಯಕಾಂತಿ ಬೀಜೋತ್ಪಾದನೆ ತರಬೇತಿ
Team Udayavani, Feb 1, 2022, 3:03 PM IST
ಶಹಾಪುರ: ಸಮೀಪದ ಭೀಮರಾಯನ ಗುಡಿಯ ಕೃಷಿ ಸಂಶೋಧನಾ ಕೇಂದ್ರದಲ್ಲಿ ಸೂರ್ಯಕಾಂತಿ ಹೆಚ್ಚು ಇಳುವರಿ ಬರುವ ಸಂಕೀರ್ಣ ತಳಿ ಬೀಜೋತ್ಪಾದನೆ (ಆರ್ ಎಸ್‌ಎಫ್‌ಎಚ್ 1887) ಬಗ್ಗೆ ಸುಮಾರು 30 ರೈತ ಮಹಿಳೆಯರಿಗೆ ಸೂಕ್ತ ತರಬೇತಿ ನೀಡಲಾಯಿತು.
ಕಲಬುರಗಿಯ ಪಾಕಲ ಗ್ರಾಮದಿಂದ ಆಗಮಿಸಿದ್ದ ಸುಮಾರು 30 ರೈತ ಮಹಿಳೆಯರಿಗೆ ಇಲ್ಲಿನ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಕಲ ವ್ಯವಸ್ಥೆ ಒದಗಿಸುವ ಮೂಲಕ ಸೂಕ್ತ ತರಬೇತಿ ನೀಡುವ ವ್ಯವಸ್ಥೆ ಮಾಡಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಕೃಷಿ ಸಂಶೋಧನಾ ಕೇಂದ್ರದ ಮುಖ್ಯಸ್ಥ ಡಾ| ದಯಾನಂದ, ರೈತರು ತಮ್ಮ ಆದಾಯವನ್ನು ಹೆಚ್ಚಿಸಿಕೊಳ್ಳಲು ವಿವಿಧ ರೀತಿಯ ತಂತ್ರಜ್ಞಾನ ಬಳಸಿಕೊಳ್ಳುವ ಅಗತ್ಯವಿದೆ. ಹೊಸ ಹೊಸ ತಂತ್ರಜ್ಞಾನ ಬಳಸಿಕೊಂಡು ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡು ಸಾಮಾನ್ಯ ಬೆಳೆ ಬಿಟ್ಟು ಲಾಭದಾಯಕವಾದ ವಿನೂತನ ಪದ್ಧತಿ ಅಳವಡಿಸಿಕೊಂಡು ಕೃಷಿ ಆದಾಯ ಹೆಚ್ಚಿಸಿಕೊಳ್ಳಬೇಕೆಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಸೂರ್ಯಕಾಂತಿಯ ತಳಿಯ ಬೀಜೋತ್ಪಾದನಾ ತಾಕುಗಳ ಕುರಿತು ಮಾಹಿತಿ ನೀಡಲಾಯಿತು. ಬೀಜೋತ್ಪಾದನಾ ವಿಜ್ಞಾನಿ ಡಾ| ಬಸವರಾಜ ಗಾಣಿಗೇರ ಅವರು ರೈತರಿಗೆ ಬೀಜೋತ್ಪಾದನಾ ತಂತ್ರಜ್ಞಾನದ ಮಾಹಿತಿ ನೀಡಿ ರೈತರಿಗೂ ಮತ್ತು ಕೃಷಿ ಅಭಿವೃದ್ಧಿಯಲ್ಲಿ ಆಗುವ ಲಾಭಗಳ ಕುರಿತು ತಿಳಿಸಿದರು.
ಸುವರ್ಣ ಹೊನ್ನಳ್ಳಿಯವರು ಮಾತನಾಡಿ, ರೈತರು ಮೇಲಿಂದ ಮೇಲೆ ಕೃಷಿ ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ ಹೊಸ ಹೊಸ ವಿಷಯಗಳನ್ನು ತಿಳಿದುಕೊಂಡು ಉತ್ತಮ ಲಾಭದಾಯಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು. ಕೇಂದ್ರ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.