ದೇವಸ್ಥಾನಗಳ ಸ್ವತಂತ್ರೀಕರಣ ವಿಚಾರದಲ್ಲಿ ಇನ್ನೂ ಯಾವುದೇ ನಿರ್ಧಾರ ಇಲ್ಲ : ಶಶಿಕಲಾ ಜೊಲ್ಲೆ
Team Udayavani, Feb 4, 2022, 6:53 AM IST
ಬೆಂಗಳೂರು: ದೇವಸ್ಥಾನಗಳ ಸ್ವತಂತ್ರೀಕರಣ ವಿಚಾರದಲ್ಲಿ ಸರ್ಕಾರ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
ವಿಕಾಸಸೌಧದಲ್ಲಿ ಗುರುವಾರ ಅಖೀಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ನಿಯೋಗ ಭೇಟಿ ಮಾಡಿ ಈ ಬಗ್ಗೆ ಮನವಿ ಸಲ್ಲಿಸಿದ ಬಳಿಕ ಮಾತನಾಡಿದಅವರು, ದೇವಾಲಯಗಳ ಖಾಸಗಿಕರಣ ವಿಚಾರದಲ್ಲಿ ಸರ್ಕಾರ ಇನ್ನೂ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ.ಈ ಬಗ್ಗೆ ಸರ್ಕಾರ ಕಾನೂನು ತಜ್ಞರ ಸಲಹೆಯನ್ನು ಪಡೆಯಲಿದೆ.ಜತೆಗೆ ಧಾರ್ಮಿಕ ಮುಖಂಡರೊಂದಿಗೂ ಸಮಾಲೋಚನೆ ನಡೆಸಲಿದೆ ಎಂದು ಹೇಳಿದರು.
ದೇವಸ್ಥಾನಗಳ ಸ್ವತಂತ್ರೀಕರಣ ವಿಚಾರದಲ್ಲಿ ಸರ್ಕಾರ ಯಾವುದೇ ರೀತಿಯ ಆತುರದ ನಿರ್ಧಾರ ಕೈಗೊಳ್ಳುವುದಿಲ್ಲ. ಎಲ್ಲರ ಜತೆಗೂ ಸಮಾಲೋಚನೆ ನಡೆಸಿದ ಬಳಿಕ ಮತ್ತೂಮ್ಮೆ ಮುಖ್ಯಮಂತ್ರಿ ಬಸವರಾಜ ಅವರೊಂದಿಗೂ ಚರ್ಚೆ ನಡೆಸಲಾಗುವುದು. ಆ ಬಳಿಕ ಸೂಕ್ತವಾದ ನಿರ್ಧಾರಕ್ಕೆ ಬರಲಾಗುವುದು ಎಂದು ಹೇಳಿದರು.
ನಿವೃತ್ತಿ ಘೋಷಣೆ ಹಿಂಪಡೆಯಲು ಮನವಿ :
ಸಚಿವರ ಭೇಟಿ ನಂತರ ಮಾತನಾಡಿದ ಅಖೀಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಮುಖ್ಯಸ್ಥ ಕೆ.ಎಸ್.ದೀಕ್ಷಿತ್ , ಅರ್ಚಕರಿಗೆ 60 ವರ್ಷಕ್ಕೆ ನಿವೃತ್ತಿ ಘೋಷಣೆ ಹಿಂಪಡೆಯುವಂತೆ ಸರ್ಕಾರಕ್ಕೆ ಮನವಿ ಮಾಡಲಾಯಿತು.
ಪ್ರತಿ ತಿಂಗಳು ಪೂಜಾ ಸಾಮಗ್ರಿಗಳಿಗೆ ನೀಡುತ್ತಿರುವ ತಸ್ತೀಕ್ ಹಣವನ್ನು ಕಳೆದ ನಾಲ್ಕು ವರ್ಷಗಳಿಂದ ಸರ್ಕಾರ ಹೆಚ್ಚಳ ಮಾಡಿಲ್ಲ. ಆ ಹಿನ್ನೆಲೆಯಲ್ಲಿ ಈಗ ನೀಡಲಾಗುತ್ತಿರುವ ಮೊತ್ತ 4 ಸಾವಿರ ರೂ.ದಿಂದ 5 ಸಾವಿರ ರೂ.ಗೆ ಹೆಚ್ಚಳ ಮಾಡುವಂತೆ ಕೋರಲಾಗಿದೆ.
ದೇವಸ್ಥಾನಗಳು ಸರ್ಕಾರ ಹಿಡಿತದಲ್ಲೆ ಇರಬೇಕು ಎಂಬುವುದು ಅಖೀಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟದ ಬಯಕೆ ಆಗಿದೆ. ಈಗಾಗಲೇ ರಾಜ ಮಹಾರಾಜರು ಅರ್ಚಕರಿ ನೀಡಿದ ಭೂಮಿಯ ಸ್ವತ್ತು ಕೂಡ ನಮ್ಮ ಕೈಯಲ್ಲಿ ಇಲ್ಲ. ರಾಜ್ಯದಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಅರ್ಚಕರಿದ್ದು ಅವರ ಹಿತಕಾಪಾಡುವಂತೆ ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.