11 ರಾಜ್ಯಗಳಲ್ಲಿ ಶಾಲೆ ಆರಂಭ
Team Udayavani, Feb 4, 2022, 6:40 AM IST
ಹೊಸದಿಲ್ಲಿ: ದೇಶದಲ್ಲಿ 11 ರಾಜ್ಯಗಳು ಶಾಲೆಗಳನ್ನು ಸಂಪೂರ್ಣ ಪ್ರಮಾಣದಲ್ಲಿ ತೆರೆದಿವೆ. 16 ರಾಜ್ಯಗಳಲ್ಲಿ ಭಾಗಶಃ ತೆರೆಯಲಾಗಿದ್ದರೆ ಉಳಿದ 9 ರಾಜ್ಯಗಳಲ್ಲಿ ಸಂಪೂ ರ್ಣವಾಗಿ ಮುಚ್ಚಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾ ಲಯ ಗುರುವಾರ ತಿಳಿಸಿದೆ.
ಹೊಸದಿಲ್ಲಿಯಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಶಿಕ್ಷಣ ಸಚಿವಾಲಯ ಜಂಟಿ ಕಾರ್ಯದರ್ಶಿ ಸ್ವೀಟಿ ಚಂಗ್ಸಾನ್, ಎಲ್ಲ ರಾಜ್ಯಗಳಲ್ಲಿ ಕನಿಷ್ಠ ಶೇ.95 ಬೋಧಕ ಮತ್ತು ಬೋಧಕೇತರ ಸಿಬಂದಿ ಕೊರೊನಾ ಲಸಿಕೆ ಪಡೆದಿದ್ದಾರೆ ಎಂದೂ ಸಚಿವಾಲಯ ತಿಳಿಸಿದೆ.
ಇದೇ ವೇಳೆ ಕರ್ನಾಟಕ ಸೇರಿ ದೇಶದ 34 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ಮತ್ತು ಪಾಸಿಟಿವಿಟಿ ದರ ಇಳಿಕೆಯಾಗುತ್ತಿದೆ. ಕೇರಳ ಮತ್ತು ಮಿಜೋರಾಂನಲ್ಲಿ ಮಾತ್ರ ಏರಿಕೆ ದಾಖಲಾ ಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರ್ವಾಲ್ ಹೇಳಿದ್ದಾರೆ.
ಮೂರನೇ ಅಲೆಯಲ್ಲಿ ಸೋಂಕು ಯುವಜನತೆಗೇ ಹೆಚ್ಚಾಗಿ ಕಾಡಿದೆ. ಸೋಂಕಿತರ ಸರಾಸರಿ ವಯಸ್ಸು 44 ವರ್ಷವಾಗಿದೆ. ಈ ಹಿಂದಿನ ಅಲೆಗಳಲ್ಲಿ ಸೋಂಕಿತರ ಸರಾಸರಿ ವಯಸ್ಸು 55 ವರ್ಷವಾಗಿತ್ತು ಎಂದು ಅವರು ಹೇಳಿದ್ದಾರೆ. ಕೊರೊನಾ ಲಸಿಕೆ ಅಭಿಯಾನದಲ್ಲಿ ಅಕ್ರಮ ನಡೆಯುತ್ತಿದೆ ಎಂದು ಕೆಲವು ಮಾಧ್ಯಮಗಳು ಪ್ರಕಟಿಸಿದ ಸುದ್ದಿಯನ್ನು ಸುಳ್ಳೆಂದು ಅವರು ತಿಳಿಸಿದರು.
ದೈನಂದಿನ ಪ್ರಕರಣ: ಬುಧವಾರದಿಂದ ಗುರುವಾರದ ಅವಧಿಯಲ್ಲಿ ದೇಶದಲ್ಲಿ 1,72,433 ಕೊರೊನಾ ಪ್ರಕರಣ ದೃಢವಾಗಿದೆ. ಒಟ್ಟಾರೆ ಸೋಂಕಿತರ ಸಂಖ್ಯೆ 4.18 ಕೋಟಿಗೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 15,33, 921ಕ್ಕೆ ಇಳಿದಿದೆ. 24 ಗಂಟೆಗಳಲ್ಲಿ 1,008 ಸೋಂಕಿತರು ಸಾವನ್ನಪ್ಪಿದ್ದಾರೆ.
ಲಸಿಕೆಗೆ ಅನುಮೋದನೆ: ಹೈದರಾಬಾದ್‌ನ ಬಯೋಲಾಜಿ ಕಲ್ ಇ ಸಂಸ್ಥೆ ತಯಾರಿಸಿರುವ 6 ಕೋಟಿ ಡೋಸ್ ಕೋರ್ಬೆವಾಕ್ಸ್ ಲಸಿಕೆಗೆ ಕೇಂದ್ರ ಸರಕಾರದ ಅಧೀನದಲ್ಲಿ ರುವ ಕೇಂದ್ರೀಯ ಔಷಧ ಪ್ರಯೋಗಶಾಲೆ(ಸಿಡಿಎಲ್) ಅನುಮೋದನೆ ಕೊಟ್ಟಿದೆ. ಹಾಗೆಯೇ ಸೀರಂ ಇನ್‌ಸ್ಟಿಟ್ಯೂಟ್ ತಯಾರಿಸಿರುವ ಕೊವಾವ್ಯಾಕ್ಸ್‌ನ 3 ಕೋಟಿ ಡೋಸ್ ಹಾಗೂ ಜಾನ್ಸನ್ ಆ್ಯಂಡ್ ಜಾನ್ಸನ್‌ನ ಸಿಂಗಲ್ ಡೋಸ್ ಲಸಿಕೆಗೂ ಅನುಮೋದನೆ ಕೊಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.