ಕೋಝಿಕೋಡ್ ವಿಮಾನ ನಿಲ್ದಾಣದಲ್ಲಿ 23 ಕೆಜಿ ಚಿನ್ನ ವಶ; 22 ಮಂದಿ ಬಂಧನ
ಚಿನ್ನವನ್ನು ಪಡೆಯಲು ಕಾಯುತ್ತಿದ್ದ ಮಂಗಳೂರಿನ ವ್ಯಕ್ತಿ !!
Team Udayavani, Feb 4, 2022, 4:48 PM IST
ಮಂಗಳೂರು/ಕೋಝಿಕೋಡ್ : ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಕಸ್ಟಮ್ಸ್ ಅಧಿಕಾರಿಗಳು,ಪ್ರತ್ಯೇಕ ಪ್ರಕರಣಗಳಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ನಾಲ್ವರು ಮಹಿಳೆಯರು ಸೇರಿದಂತೆ 22 ಮಂದಿಯನ್ನು ಕೋಝಿಕ್ಕೋಡ್ನ ಕಾರಿಪುರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಫೆಬ್ರವರಿ 3 ಗುರುವಾರದಂದು ಬಂಧಿಸಿದ್ದಾರೆ.
ಪ್ರಯಾಣಿಕರು ದುಬೈನಿಂದ ಹಿಂದಿರುಗಿದವರಾಗಿದ್ದು, ವಿವಿಧ ವಿಮಾನಗಳಲ್ಲಿ ಇಲ್ಲಿಗೆ ಬಂದಿದ್ದರು. ತಪಾಸಣೆ ಮತ್ತು ಭದ್ರತಾ ತಪಾಸಣೆ ವೇಳೆ ಅಧಿಕಾರಿಗಳು ಅವರ ಬಳಿಯಿದ್ದ ಬರೋಬ್ಬರಿ 23 ಕೆಜಿ ಚಿನ್ನವನ್ನು ಜಪ್ತಿ ಮಾಡಿದ್ದಾರೆ.
ಬಂಧನಕ್ಕೊಳಗಾದ ಮಂಗಳೂರಿನ ವ್ಯಕ್ತಿ ಚಿನ್ನವನ್ನು ಪಡೆಯಲು ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದ ಎಂದು ವರದಿಯಾಗಿದೆ. ಈ ಸಂಬಂಧ ಚಿನ್ನಾಭರಣ ಹೊರತುಪಡಿಸಿ ಎರಡು ಕಾರುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ವಿಚಾರಣೆ ನಡೆಸಿದಾಗ ಕಳ್ಳಸಾಗಣೆ ದಂಧೆಯಲ್ಲಿ ಹಲವರು ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಅಂತರ್ ರಾಷ್ಟ್ರೀಯ ವಿಮಾನ ಸಂಚಾರ ನಿರ್ಬಂಧಗಳನ್ನು ಸಡಿಲಿಸಿದ ನಂತರ, ಕಳ್ಳಸಾಗಣೆ ಪ್ರಕರಣಗಳಲ್ಲಿ ಏರಿಕೆ ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Puttur: ಇದು ಅಜಿತರ ಸಾಹಸ : ರಬ್ಬರ್ ತೋಟದಲ್ಲಿ ಕಾಫಿ ಘಮ ಘಮ
Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.