ರಾಜ್ಯಗಳ ಸಮ್ಮತಿ ಇಲ್ಲದೆ ನದಿ ಜೋಡಣೆ ಸಲ್ಲ: ಸಿದ್ದರಾಮಯ್ಯ ಪ್ರತಿಪಾದನೆ

Team Udayavani, Feb 5, 2022, 6:30 AM IST

ರಾಜ್ಯಗಳ ಸಮ್ಮತಿ ಇಲ್ಲದೆ ನದಿ ಜೋಡಣೆ ಸಲ್ಲ: ಸಿದ್ದರಾಮಯ್ಯ ಪ್ರತಿಪಾದನೆ

ಬೆಂಗಳೂರು: ರಾಜ್ಯಗಳ ಸಮ್ಮತಿ ಪಡೆಯದೆ ಚರ್ಚೆ ನಡೆಸದೆ ನದಿ ಜೋಡಣೆ ಯೋಜನೆ ಜಾರಿ ಮಾಡಿದರೆ ರಾಜ್ಯಗಳ ನಡುವೆ ಸಂಘರ್ಷ ಉಂಟಾಗಿ ಜಲ ವಿವಾದ ಉದ್ಭವವಾಗಲಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಸರ್ವಪಕ್ಷಗಳ ಸಭೆ ಕರೆದು ಯಾವ ನದಿಯಿಂದ ಎಷ್ಟು ನೀರು ಸಿಗುತ್ತದೆ, ಯಾವ ರಾಜ್ಯಗಳಿಗೆ ಎಷ್ಟು ನೀರು ಸಿಗುತ್ತದೆ ಎಂಬ ಮಾಹಿತಿ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಒಕ್ಕೂಟ ವ್ಯವಸ್ಥೆಯಲ್ಲಿ ಮಾಹಿತಿ ಪಡೆಯುವುದು ಪ್ರತಿ ರಾಜ್ಯದ ಹಕ್ಕು. ಏಕಮುಖವಾದ ನಿರ್ಧಾರ ಮಾಡಿ ರಾಜ್ಯಗಳ ಮೇಲೆ ಹೇರುವ ಪ್ರಯತ್ನ ಸರ್ವಾಧಿಕಾರಿ ಧೋರಣೆಯಾಗುತ್ತದೆ. ಇದನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದರು.

ಎರಡು ಹಂತದಲ್ಲಿ ಯೋಜನೆ ಜಾರಿ ಮಾಡ್ತೇವೆ, ಮೊದಲ ಹಂತದಲ್ಲಿ ಕರ್ನಾಟಕಕ್ಕೆ ಅನುಕೂಲ ಆಗಲ್ಲ, ಎರಡನೇ ಹಂತದಲ್ಲಿ ಸ್ವಲ್ಪ ಅನುಕೂಲ ಆಗಬಹುದು ಎಂದು ಕೇಂದ್ರ ಸರ್ಕಾರ ಹೇಳುತ್ತದೆ.. ನನ್ನ ಪ್ರಕಾರ ಶೇ. 90 ತಮಿಳುನಾಡಿಗೆ ಅನುಕೂಲವಾಗುತ್ತೆ. 1978 ರಲ್ಲಿ ಮೊರಾರ್ಜಿ ದೇಸಾಯಿ ಅವರು ಗಂಗಾ-ಕಾವೇರಿ ನದಿ ಜೋಡಣೆ ಮಾಡುತ್ತೇವೆ ಎಂದಿದ್ದರು. ಒಂದು ಹಿಮಾಲಯದಲ್ಲಿ ಹುಟ್ಟುವ ನದಿ ಆಗಿರುವುದರಿಂದ ಅನುಕೂಲವಾಗುತ್ತೆ. ವಾಜಪೇಯಿ ಅವರು ಇದೇ ಯೋಜನೆಯನ್ನು ಪ್ರಸ್ತಾಪ ಮಾಡಿದರು, ಆದರೆ ಈ ಬಗ್ಗೆ ಕ್ರಮ ಕೈಗೊಂಡಿಲ್ಲ. ಮತ್ತೆ ಈಗ ಅದೇ ಸುಳ್ಳನ್ನು ಹೇಳಲು ಆರಂಭ ಮಾಡಿದ್ದಾರೆ ಎಂದು ಟೀಕಿಸಿದರು.

ಬಜೆಟ್‌ನಲ್ಲಿ ನದಿ ಜೋಡಣೆ ವಿಚಾರವಾಗಿ 46,000 ಕೋಟಿ ರೂ. ಯೋಜನೆ ಪ್ರಸ್ತಾಪಿಸಲಾಗಿದೆ. ಆದರೆ, ಇದು ಕಾರ್ಯಸಾಧುವಾದ ಯೋಜನೆಯಲ್ಲ. ನಿರ್ಮಲಾ ಸೀತಾರಾಮನ್‌ ಅವರು ತಮಿಳುನಾಡಿನವರಾಗಿದ್ದ ಕಾರಣಕ್ಕೆ ಈ ಯೋಜನೆ ಪ್ರಸ್ತಾಪ ಮಾಡಿರಬಹುದು. ನಮ್ಮ ರಾಜ್ಯದ ಜೊತೆ ಚರ್ಚಿಸಿದಂತೆ ಕಾಣುತ್ತಿಲ್ಲ ಎಂದರು.

ಇದನ್ನೂ ಓದಿ:ಗ್ರಾಮೀಣ ಮಕ್ಕಳು ಶಿಕ್ಷಣವಂತರಾಗಿ ಸ್ವಾಭಿಮಾನದಲ್ಲಿ ಬದುಕಬೇಕು : ಸಚಿವ ಈಶ್ವರಪ್ಪ

ಕೃಷ್ಣ, ಗೋದಾವರಿ, ಪೆನ್ನಾರ್‌ ಮತ್ತು ಕಾವೇರಿ ನದಿಗಳ ಜೋಡಣೆ ಪ್ರಸ್ತಾಪವಿದೆ. ರಾಷ್ಟ್ರೀಯ ಜಲ ಅಭಿವೃದ್ಧಿ ಏಜೆನ್ಸಿ ಯಲ್ಲಿ ಚರ್ಚಿಸಲಾಗಿದೆ, ಇದರಿಂದ 347 ಟಿ.ಎಂ.ಸಿ ನೀರು ಸಿಗಲಿದೆ, ದಕ್ಷಿಣ ರಾಜ್ಯಗಳಿಗೆ ನೀರು ಕೊಡಲು ಸಾಧ್ಯ ಎಂಬುದು ಅವರ ಆಲೋಚನೆ. ನದಿಗಳ ಜೋಡಣೆಯಿಂದ ಹೆಚ್ಚು ನೀರು ತಮಿಳುನಾಡಿಗೆ ಹೋಗುತ್ತದೆ ಎಂದು ಹೇಳಿದರು.

ನದಿ ಜೋಡಣೆ ಸಾಧಕ-ಬಾಧಕ ಕುರಿತು ಮುಖ್ಯಮಂತ್ರಿ ಸಹಿತ ಯಾರೊಬ್ಬರೂ ಮಾತನಾಡುತ್ತಿಲ್ಲ. ಇವರು ರಾಜ್ಯದ ಹಿತರಕ್ಷಣೆ ಮಾಡುತ್ತಾರಾ ಎಂದು ಪ್ರಶ್ನಿಸಿದ ಅವರು, ರಾಜ್ಯ ಸರ್ಕಾರ ಕೂಡಲೇ ಸರ್ವಪಕ್ಷ ಸಭೆ ಕರೆಯಬೇಕು. ನದಿ ಜೋಡಣೆ ವಿಷಯದಲ್ಲಿ ತನ್ನ ನಿಲುವು ಹೇಳಬೇಕು ಎಂದು ಆಗ್ರಹಿಸಿದರು.ಮಾಜಿ ಸಚಿವ ಜಮೀರ್‌ ಅಹಮದ್‌, ಪ್ರತಿಪಕ್ಷದ ಉಪ ನಾಯಕ ಯು.ಟಿ.ಖಾದರ್‌ ಉಪಸ್ಥಿತರಿದ್ದರು.

ಕಾಂಗ್ರೆಸ್‌ ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿಲ್ಲ. ಎಲ್ಲ ರೀತಿಯ ಅವಕಾಶ ಮಾಡಿಕೊಟ್ಟಿದೆ. ಯಾರಿಗೂ ಅಸಮಾಧಾನವಿಲ್ಲ. ವಿಧಾನಸಭೆ ಪ್ರತಿಪಕ್ಷ ಉಪ ನಾಯಕ ಸ್ಥಾನ ಜಮೀರ್‌ ಅಹಮದ್‌ ವಹಿಸಿಕೊಳ್ಳಲು ಹೈಕಮಾಂಡ್‌ ಸೂಚಿಸಿತು. ಆದರೆ, ಅವರೇ ಯು.ಟಿ.ಖಾದರ್‌ ಅವರು ವಹಿಸಿಕೊಳ್ಳಲಿ ಎಂದು ಹೇಳಿದರು.
– ಸಿದ್ದರಾಮಯ್ಯ

ಟಾಪ್ ನ್ಯೂಸ್

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

1-jpc

One Nation, One Election: ಸಂಸದರಿಗೆ ಜೆಪಿಸಿ ಸಭೆಯಲ್ಲಿ 52 ಕೆ.ಜಿ. ತೂಕದ ಸೂಟ್‌ಕೇಸ್‌!

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್‌. ಸಂತೋಷ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

1-jpc

One Nation, One Election: ಸಂಸದರಿಗೆ ಜೆಪಿಸಿ ಸಭೆಯಲ್ಲಿ 52 ಕೆ.ಜಿ. ತೂಕದ ಸೂಟ್‌ಕೇಸ್‌!

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.