ಚುನಾವಣೆ ಬಳಿಕ ಬೆಂಬಲ ಬೆಲೆ ಸಮಿತಿ ರಚನೆ
Team Udayavani, Feb 5, 2022, 6:50 AM IST
ಹೊಸದಿಲ್ಲಿ: ದೇಶದಲ್ಲಿ ಸದ್ಯದಲ್ಲೇ ನಡೆಯಲಿರುವ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗಳ ಅನಂತರ ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿರ್ಧರಿಸುವ ಸಲುವಾಗಿ ಸಮಿತಿಯೊಂದನ್ನು ರಚಿಸುವುದಾಗಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ತಿಳಿಸಿದ್ದಾರೆ.
ರಾಜ್ಯಸಭೆಯಲ್ಲಿ ಮಾತನಾಡಿದ ಅವರು, “ದೇಶದ ನಾನಾ ಭಾಗಗಳಲ್ಲಿ ಫಸಲು ರೈತರ ಕೈಗೆ ಬರುವ ಅವಧಿ ಹಾಗೂ ಕಾಲಘಟ್ಟ ಮುಂತಾದ ವಿಚಾರಗಳಲ್ಲಿ ವ್ಯತ್ಯಾಸಗಳಿವೆ. ಅವೆಲ್ಲವನ್ನೂ ಅಧ್ಯಯನ ಮಾಡಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಬೇಕಾಗುತ್ತದೆ. ಅದಕ್ಕಾಗಿ ಸಮಿತಿ ರಚಿಸಲು ಸಿದ್ಧರಿದ್ದೆವು. ಆದರೆ ಪಂಚರಾಜ್ಯಗಳ ಚುನಾವಣೆ ಹತ್ತಿರ ಇದ್ದಿದ್ದರಿಂದ ಸಮಿತಿ ರಚನೆಯ ಔಚಿತ್ಯದ ಬಗ್ಗೆ ಕೇಂದ್ರ ಚುನಾವಣ ಆಯೋಗಕ್ಕೆ ಪತ್ರದ ಮುಖೇನ ಕೇಳಲಾಗಿತ್ತು. ಇದಕ್ಕೆ ಉತ್ತರಿಸಿದ ಆಯೋಗ, ಚುನಾವಣೆಗಳ ಅನಂತರ ಸಮಿತಿ ರಚಿಸಬೇಕೆಂದು ಸೂಚಿಸಿತ್ತು. ಹಾಗಾಗಿ ಚುನಾವಣೆ ಮುಗಿಯುವುದನ್ನು ಕೇಂದ್ರ ಕಾಯುತ್ತಿದೆ’ ಎಂದು ತೋಮರ್ ತಿಳಿಸಿದ್ದಾರೆ.
ಇದೇ ವೇಳೆ, 2018-19ರಲ್ಲಿ ತಜ್ಞರ ಸಮಿತಿಯು ಈಗ ಚಾಲ್ತಿಯಲ್ಲಿರುವ ಕನಿಷ್ಠ ಬೆಂಬಲ ಬೆಲೆಗಳನ್ನು ಹೆಚ್ಚಿಸುವಂತೆ ನೀಡಿದ್ದ ಸಲಹೆಯನ್ನು ಅನುಷ್ಠಾನಗೊಳಿಸಲು ಪ್ರಧಾನಿ ಮೋದಿ ಒಪ್ಪಿದ್ದಾರೆ ಎಂದೂ ತಿಳಿಸಿದರು.
ಇದನ್ನೂ ಓದಿ:ಪರಿಸರ ರಕ್ಷಣೆ ತುರ್ತು ಆದ್ಯತೆಯಾಗಲಿ: ಸಿಎಂ ಬಸವರಾಜ ಬೊಮ್ಮಾಯಿ
ಜನಸಂಖ್ಯಾ ನಿಯಂತ್ರಣ ಮಸೂದೆ: ರಾಜ್ಯಸಭೆಯಲ್ಲಿ ಬಿಜೆಪಿ ಸಂಸದ ರಾಕೇಶ್ ಸಿನ್ಹಾ ಮಂಡಿಸಿರುವ 2019ರ ಜನಸಂಖ್ಯಾ ನಿಯಂತ್ರಣ ಖಾಸಗಿ ಮಸೂದೆಯ ಬಗ್ಗೆ ಚರ್ಚೆಗಳು ಶುರುವಾದವು.ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ನಾಯಕ ವಿಕಾಸ್ , ಎರಡು ಮಕ್ಕಳಾದ ಮೇಲೆ ಮೂರನೇ ಮಗು ಮಾಡಿಕೊಂಡ ವರಿಗೆ ಶಿಕ್ಷೆ ವಿಧಿಸುವ ಬಗ್ಗೆ ಮಸೂದೆಯಲ್ಲಿ ಇರುವ ಪ್ರಸ್ತಾವನೆಯನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕದ ರಾಜ್ಯಸಭಾ ಸದಸ್ಯ ಡಾ| ಎಲ್. ಹನುಮಂತಯ್ಯ, ನಿರ್ದಿಷ್ಟ ಸಮು ದಾಯದಿಂದಲೇ ದೇಶದಲ್ಲಿ ಜನಸಂಖ್ಯೆ ಅಗಾಧವಾಗಿ ಬೆಳೆದಿದೆ ಎಂದು ಹುಯಿಲೆಬ್ಬಿಸಲಾಗಿದೆ. ಇಂಥ ಅಪಪ್ರಚಾರಗಳನ್ನು ಬಿಡಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.