ಆರೋಗ್ಯಕ್ಕಾಗಿ ದುಶ್ಚಟ ದೂರವಿಡಿ
Team Udayavani, Feb 5, 2022, 11:56 AM IST
ವಾಡಿ: ಮನುಷ್ಯ ದೇಹ ರೋಗಗಳಿಂದ ನರಳಲು ದುಶ್ಚಟಗಳೇ ಪ್ರಮುಖ ಕಾರಣವಾಗಿದ್ದು, ಪ್ರಾಣ ಕಂಟಕ ಕಾಯಿಲೆಗಳಿಂದ ಸುರಕ್ಷಿತವಾಗಿರಲು ದುರಭ್ಯಾಸಗಳನ್ನು ದೂರವಿಡುವ ಮೂಲಕ ಉತ್ತಮ ಜೀವನಶೈಲಿ ರೂಢಿಸಿಕೊಳ್ಳಿ ಎಂದು ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಅನಿತಾ ಮಲಗೊಂಡ ಹೇಳಿದರು.
ವಿಶ್ವ ಕ್ಯಾನ್ಸರ್ ದಿನಾಚರಣೆ ನಿಮಿತ್ತ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಮೀಕ್ಷಣಾ ಘಟಕ, ಜಿಲ್ಲಾ ಎನ್‌ಸಿಡಿ ಕೋಶದ ಸಹಯೋಗದಲ್ಲಿ ಶುಕ್ರವಾರ ಪಟ್ಟಣದ ರೆಸ್ಟ್ ಕ್ಯಾಂಪ್ ತಾಂಡಾದಲ್ಲಿ ಏರ್ಪಡಿಸಲಾಗಿದ್ದ ಕ್ಯಾನ್ಸರ್ ತಪಾಸಣಾ ಸಪ್ತಾಹ, ರೋಗ ಜಾಗೃತಿ ಅಭಿಯಾನ ಉದ್ದೇಶಿಸಿ ಅವರು ಮಾತನಾಡಿದರು.
ಕಾಯಿಲೆ ಲಕ್ಷಣ ಕಾಣಿಸಿಕೊಂಡಾಗ ತಜ್ಞ ವೈದ್ಯರನ್ನು ಕಾಣಬೇಕು. ಯಾವುದೇ ರೋಗವಿರಲಿ ಅದು ಆರಂಭಿಕವಾಗಿದ್ದರೆ ಸೂಕ್ತ ಚಿಕಿತ್ಸೆ ಮೂಲಕ ಗುಣಪಡಿಸಬಹುದು ಎಂದರು.
ಕ್ಯಾನ್ಸರ್ ಕಾಯಿಲೆ ತಪಾಸಣೆ ಸೇರಿದಂತೆ ರಕ್ತದೊತ್ತಡ, ಸಕ್ಕರೆ ಕಾಯಿಲೆ ಸೇರಿದಂತೆ ಇತರ ರೋಗಗಳನ್ನು ಪತ್ತೆ ಹಚ್ಚಲು ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಫೆ.4ರಿಂದ ಫೆ.10ರ ವರೆಗೆ ಜಾಗೃತಿ ಅಭಿಯಾನ ಮತ್ತು ರೋಗ ತಪಾಸಣೆ ನಡೆಸಲಾಗುತ್ತಿದೆ. ಪುರಸಭೆ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ಆಶಾ-ಅಂಗನವಾಡಿ ಕಾರ್ಯಕರ್ತೆಯರು ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಹೇಳಿದರು.
ಎನ್‌ಸಿಡಿ ಕೌಂನ್ಸಿಲರ್ ಮಂಜುಳಾ ಗುಡುಬಾ, ಭಾಗ್ಯಶ್ರೀ ಇಂಗಳಗಿ, ಆಶಾ, ರೇಣುಕಾ ಹಾಗೂ ತಾಂಡಾದ ಮಹಿಳೆಯರು ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಇದೇ ವೇಳೆ ಕ್ಯಾನ್ಸರ್ ಮತ್ತು ಅಸಾಂಕ್ರಾಮಿಕ ರೋಗಗಳ ಗುರಿತು ಜಾಗೃತಿ ಮೂಡಿಸುವ ಪೋಸ್ಟರ್ ಪ್ರದರ್ಶಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.