ಹೊಸಕೋಟೆ: ಶರತ್ ಬಚ್ಚೇಗೌಡ ವಿರುದ್ಧ ಸಿಡಿದೆದ್ದ ಮೂಲ ಕಾಂಗ್ರೆಸ್ಸಿಗರು
ಸಚಿವ ಎಂಟಿಬಿ ನಾಗರಾಜ್ ರನ್ನು ಮತ್ತೆ ಕಾಂಗ್ರೆಸ್ ಗೆ ಕರೆ ತರುವಂತೆ ಒತ್ತಡ!
Team Udayavani, Feb 5, 2022, 12:56 PM IST
ಹೊಸಕೋಟೆ : ಶಾಸಕ ಶರತ್ ಬಚ್ಚೇಗೌಡ ವಿರುದ್ಧ ಮೂಲ ಕಾಂಗ್ರೆಸ್ಸಿಗರು ಸಿಡಿದೆದ್ದಿದ್ದು, ಸಚಿವ ರಾಗಿರುವ ಎಂಟಿಬಿ ನಾಗರಾಜ್ ಅವರನ್ನು ಮತ್ತೆ ಕಾಂಗ್ರೆಸ್ ಗೆ ಕರೆ ತರುವಂತೆ ಕಾಂಗ್ರೆಸ್ ನಾಯಕರಿಗೆ ಒತ್ತಡ ಹಾಕಿದ್ದಾರೆ.
ಸ್ವಾಭಿಮಾನಿ ವರ್ಸಸ್ ಮೂಲ ಕಾಂಗ್ರೆಸ್ಸಿಗರ ಫೈಟ್ ತೀವ್ರವಾಗಿದ್ದು, ಮುಂದಿನ ವಿಧಾನಸಭಾ ಚುನಾವಣಾ ವೇಳೆ ಹೊಸ ಸ್ವರೂಪ ಪಡೆದುಕೊಳ್ಳುವುದು ಖಚಿತವಾಗಿದೆ.
ಈಗಾಗಲೇ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹಾಕಿರುವ ಮೂಲ ಕಾಂಗ್ರೆಸ್ಸಿಗರು ಎಂಟಿಬಿ ನಾಗರಾಜ್ ಅವರನ್ನು ಮತ್ತೆ ಪಕ್ಷಕ್ಕೆ ಕರೆ ತರುವಂತೆ ಪಟ್ಟು ಹಿಡಿದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕ್ಷೇತ್ರದಲ್ಲಿ ಮೂಲ ಕಾಂಗ್ರೆಸ್ ನಾಯಕರನ್ನು ಕಡಗಣನೆ ಮಾಡಲಾಗುತ್ತಿದೆ ಎಂದು ಆರೋಪ ಮಾಡಲಾಗಿದ್ದು, ಶಾಸಕ ಶರತ್ ಬಚ್ಚೇಗೌಡ ವಿರುದ್ದ ದೂರನ್ನೂ ನೀಡಲಾಗಿದೆ.
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸೇರಿ ಹಲವು ಮೂಲ ಕಾಂಗ್ರೆಸ್ ನಾಯಕರು ಶರತ್ ಬಚ್ಚೇಗೌಡ ವಿರುದ್ಧ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಸಂಸದ ಬಚ್ಚೇಗೌಡ ಅವರ ಪುತ್ರ ಶರತ್ ಪಕ್ಷೇತರರಾಗಿ ಸ್ವಾಭಿಮಾನದ ಹೆಸರಿನಲ್ಲಿ ಕಣಕ್ಕಿಳಿದು ಗೆಲುವು ದಕ್ಕಿಸಿಕೊಂಡಿದ್ದರು. ಆ ಬಳಿಕ ಕಾಂಗ್ರೆಸ್ ಗೆ ಬೆಂಬಲ ಸೂಚಿಸಿದ್ದರು. 2018ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿದು ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಎಂಟಿಬಿ ನಾಗರಾಜ್ ವಿರುದ್ಧ ಸೋಲು ಅನುಭವಿಸಿದ್ದ ಅವರು,ಒಂದೂವರೆ ವರ್ಷದ ನಂತರ ಉಪಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನಾಗರಾಜ್ ಅವರನ್ನು ಸೋಲಿಸಿ ಸೇಡು ತೀರಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.