ಮ್ಯೂಸಿಯಂ, ಬಳೇಮಂಟಪ ಸುತ್ತ ಸರ್ವೆ ನಡೆಸಿ


Team Udayavani, Feb 5, 2022, 2:12 PM IST

ಮ್ಯೂಸಿಯಂ, ಬಳೇಮಂಟಪ ಸುತ್ತ ಸರ್ವೆ ನಡೆಸಿ

ಯಳಂದೂರು: ಪಟ್ಟಣದಲ್ಲಿರುವ ಐತಿಹಾಸಿಕ ಬಳೇಮಂಟಪ, ಗೌರೇಶ್ವರ ದೇಗುಲ ಹಾಗೂ ದಿವಾನ್‌ ಪೂರ್ಣಯ್ಯ ವಸ್ತು ಸಂಗ್ರಹಾಲಯಕ್ಕೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್‌ ಶುಕ್ರವಾರ ಭೇಟಿ ನೀಡಿ ಇದರ ಸುತ್ತಲೂ ಇರುವ ಸ್ಥಳವನ್ನು ಸರ್ವೆ ನಡೆಸಿ, ವರದಿ ನೀಡಬೇಕು ಎಂದು ತಹಶೀಲ್ದಾರ್‌ಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಪ್ರಾಚ್ಯ ಇಲಾಖೆಯ ವ್ಯಾಪ್ತಿಯಲ್ಲಿರುವ ದಿವಾನ್‌ ಪೂರ್ಣಯ್ಯ ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡಿ, ಇಲ್ಲಿ ಸಂಗ್ರಹಿಸಿರುವ ವಸ್ತುಗಳನ್ನು ವೀಕ್ಷಿಸಿ ಮಾಹಿತಿ ಪಡೆದರು. ಇದರ ಮುಂಭಾಗ ದಲ್ಲಿರುವ ಖಾಲಿ ಸ್ಥಳವು ನ್ಯಾಯಾಲಯದಲ್ಲಿದೆ. ಪಕ್ಕದಲ್ಲಿರುವ ಖಾಲಿ ನಿವೇಶನದ ತೀರ್ಪು ಸರ್ಕಾರದ ಪರವಾಗಿದೆ ಎಂದು ಪ್ರಾಚ್ಯ ಇಲಾಖೆಯ ಸುನೀಲ್‌ ಕುಮಾರ್‌ ಮಾಹಿತಿ ನೀಡಿದರು.

ನಂತರ ಪಕ್ಕದಲ್ಲಿರುವ ಗೌರೇಶ್ವರ ದೇಗುಲ ಹಾಗೂ ಬಳೇಮಂಪಟವನ್ನು ವೀಕ್ಷಿಸಿ ಮಾಹಿತಿ ಪಡೆದರು. ಇಲ್ಲಿನ ಅರ್ಚಕ ಮಹೇಶ್‌ ಚಂದ್ರಮೌಳಿ ದೀಕ್ಷೀತ್‌, ಇದರ ಮುಂಭಾಗದಲ್ಲಿರುವ ರಾಷ್ಟ್ರೀಯ ಹೆದ್ದಾರಿ 209 ಎತ್ತರಿಸಿದ ಬಳಿಕೆ ದೇಗುಲ ಕೆಳಕ್ಕೆ ಇದೆ. ಇದನ್ನು ವೀಕ್ಷಿಸಲು ಬರುವ ವೃದ್ಧರು ಹಾಗೂ ಮಹಿಳೆಯರು, ಮಕ್ಕಳು ಕಷ್ಟ ಪಡುವ ಸ್ಥಿತಿ ಇದೆ. ಹೀಗಾಗಿ ಇದಕ್ಕೆ ಮೆಟ್ಟಿಲುಗಳನ್ನು ನಿರ್ಮಿಸಿಕೊಡಬೇಕೆಂದು ಕೋರಿದರು.

ಕೂಡಲೇ ನಗರೋತ್ಥಾನ ಇಲಾಖೆಯ ಯೋಜನಾ ನಿರ್ದೇಶಕ ಸುರೇಶ್‌ ಅವರಿಗೆ ಈ ಬಗ್ಗೆ ಪಪಂ ಎಂಜಿನಿಯರ್‌ ಬಳಿ ಚರ್ಚಿಸಿ ಇದಕ್ಕೆ ಮೆಟ್ಟಿಲು ನಿರ್ಮಿಸಲು ಕೂಡಲೇ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಪಟ್ಟಣದ ಬಸ್‌ ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿ 209ರ ನಡುವೆ ಇರುವ ಖಾಸಗಿವ್ಯಕ್ತಿಯೊಬ್ಬರ ಕಟ್ಟಡವನ್ನು ತೆರವುಗೊಳಿಸಿಲ್ಲ. ಇದರ ಬಗ್ಗೆ ನ್ಯಾಯಾಲಯವೂ ಆದೇಶಿಸಿದ್ದರೂ ಕ್ರಮವಹಿಸಿಲ್ಲ. ಇದರಿಂದ ಈ ಭಾಗದಲ್ಲಿ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿದ್ದು ಕೂಡಲೇ ಈ ಬಗ್ಗೆ ಕ್ರಮವಹಿಸಬೇಕು ಎಂದು ಮೀರೆಸಿದ್ದರಾಜು ಸೇರಿದಂತೆ ಕೆಲವು ಮನವಿ ಮಾಡಿದರು. ಈ ಬಗ್ಗೆ ಪರಿಶೀಲಿಸಿಕ್ರಮ ವಹಿಸುವ ಭರವಸೆಯನ್ನು ಜಿಲ್ಲಾಧಿಕಾರಿ ನೀಡಿದರು.

ಈ ವೇಳೆ ತಹಶೀಲ್ದಾರ್‌ ಆನಂದಪ್ಪ ನಾಯಕ್‌, ಪಪಂ ರಾಜಸ್ವ ನಿರೀಕ್ಷಕ ನಂಜುಂಡಶೆಟ್ಟಿ,ಆರೋಗ್ಯಾಧಿಕಾರಿ ಮಹೇಶ್‌ಕುಮಾರ್‌,ಪರಶಿವಮೂರ್ತಿ, ಮಲ್ಲಿಕಾರ್ಜುನ, ಮುಖಂಡರಾದ ನಿಂಗರಾಜು ಸೇರಿಂದತೆ ಮತ್ತಿತರರು ಹಾಜರಿದ್ದರು.

 

 

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಕಾರು ಡಿಕ್ಕಿ ಹೊಡೆದು ಪಾದಾಚಾರಿ ಸಾವು

Kollegala-Archaka

Kollegala: ತೀರ್ಥ ಸ್ನಾನಕ್ಕೆ ಹೋದ ಅರ್ಚಕ ಕಾವೇರಿಯಲ್ಲಿ ಮುಳುಗಿ ಸಾವು

7-hanur

Hanur: ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಒಣ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯ ಬಂಧನ

5

Hanur: ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿ ಬಂಧನ

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

Bandipur: ಕಾಡಾನೆ ಮುಂದೆ ಫೋಟೋ ಕ್ಲಿಕ್ಕಿಸಿಕೊಂಡಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.