ದಕ್ಷಿಣ ಪದವೀಧರರ ಕ್ಷೇತ್ರದಲ್ಲಿ ಗೆಲುವು ನನ್ನದೆ: ಹೆಚ್.ಕೆ.ರಾಮು
Team Udayavani, Feb 5, 2022, 7:56 PM IST
ಪಿರಿಯಾಪಟ್ಟಣ: ದಕ್ಷಿಣ ಪದವೀಧರರ ಕ್ಷೇತ್ರವು ಜೆಡಿಎಸ್ ಭದ್ರಕೋಟೆಯಾಗಿದ್ದು, ಜೂನ್ ತಿಂಗಳಲ್ಲಿ ನಡೆಯುವ ಚುವಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಹೆಚ್.ಕೆ.ರಾಮು ಜಯಗಳಿಸಲಿದ್ದಾರೆ ಎಂದು ಶಾಸಕ ಕೆ.ಮಹದೇವ್ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದ ತಾಪಂನಲ್ಲಿರುವ ಶಾಸಕರ ಕಛೇರಿಯಲ್ಲಿ ದಕ್ಷಿಣ ಪದವೀಧರ ಕ್ಷೇತ್ರ ಚುನಾವಣೆ ಸಂಬoಧ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಯನ್ನೊಳಗೊಂಡ ದಕ್ಷಿಣ ಪದವೀಧರರ ಕ್ಷೇತ್ರವು ಜೆಡಿಎಸ್ ಭದ್ರಕೋಟೆಯಾಗಿದ್ದು, ಕಳೆದ ಬಾರಿಯೂ ನಮ್ಮ ಪಕ್ಷದ ಅಭ್ಯರ್ಥಿ ಜಯಗಳಿಸಿದ್ದರು,ಈ ಬಾರಿ ನಮ್ಮ ಪಕ್ಷದ ಅಭ್ಯರ್ಥಿ ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಹೆಚ್ ಕೆ ರಾಮು ಅವರನ್ನು ಜೆಡಿಎಸ್ ನ ಅಧಿಕೃತ ಅಭ್ಯರ್ಥಿಯೆಂದು ಪಕ್ಷದ ವರೀಷ್ಠ, ಹೆಚ್.ಡಿ.ದೇವೇಗೌಡ, ರಾಜ್ಯಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಈಗಾಗಗಲೇ ಘೋಷಣೆ ಮಾಡಿದ್ದು, ಈ ಬಾರಿಯೂ ನಮ್ಮ ಪಕ್ಷದ ಅಭ್ಯರ್ಥಿಯನ್ನು ಜಯಶಾಲಿಯರನ್ನಾಗಿ ಮಾಡುವ ಮೂಲಕ ಕುಮಾರಸ್ವಾಮಿಯವರ ಕೈ ಬಲಪಡಿಸಬೇಕು ಎಂದರು.
ಜೆಡಿಎಸ್ ಅಭ್ಯರ್ಥಿ ಹೆಚ್.ಕೆ.ರಾಮು ಮಾತನಾಡಿ ದಕ್ಷಿಣ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ಗೆ ನಡೆಯಲಿರುವ ಚುನಾವಣೆಯಲ್ಲಿ ಜಯಗಳಿಸಲು ಅಗತ್ಯವಿರುವ ಪಕ್ಷ ಸಂಘಟನೆ ಮತ್ತು ಬಲವರ್ಧನೆ ಒಳಗೊಂಡಂತೆ ಇತರ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಶಿಕ್ಷಕರು, ಸರ್ಕಾರಿ ನೌಕರರು, ಖಾಸಗಿ ಶಾಲಾ ಕಾಲೇಜು ಶಿಕ್ಷಕರು, ಉಪನ್ಯಾಸಕರನ್ನು ಭೇಟಿಯಾಗಿ ನೊಂದಣಿ ಮಾಡಿದ್ದೇವೆ. ಈ ವ್ಯಾಪ್ತಿಯ ಮೈಸೂರು, ಮಂಡ್ಯ, ಹಾಸನ ಹಾಗೂ ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಕಛೇರಿ ತೆರೆದು ಸ್ಥಳಿಯವಾಗಿಯೇ ಬಗೆಹರಿಯುವಂತೆ ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ ನೌಕರರು ಹಾಗೂ ಖಾಸಗಿ ಶಿಕ್ಷಕರು ಹಾಗೂ ಪದವೀಧರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದು ಮತ್ತು ನಿರುದ್ಯೋಗಿ ಪದವೀದರರಿಗೆ ಸ್ಟೈಫಂಡ್ ಕೊಡಿಸುವ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡುವುದು ಹಾಗೂ ಸರ್ಕಾರಿ ಅರೆ ಸರ್ಕಾರಿ ವಲಯದಲ್ಲಿ ಖಾಲಿ ಇರುವ ಶೇ 45 ರಷ್ಟು ಉದ್ಯೋಗಗಳನ್ನು ಭರ್ತಿ ಮಾಡಿಸಲು ಪ್ರಯತ್ನಿಸುವುದು. ಸರ್ಕಾರಿ ನೌಕರರ ಬಹುದಿನದ ಬೇಡಿಕೆಯಾದ ಎನ್ಪಿಎಸ್ ಅನ್ನು ಹೋಗಲಾಡಿಸುವ ಬಗ್ಗೆ ಹಾಗೂ ಓಪಿಎಸ್ ವ್ಯವಸ್ಥೆಯನ್ನು ಜಾರಿಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಈ ವ್ಯಾಪ್ತಿಯ 4 ಜಿಲ್ಲೆಗಳ ಉದ್ಯೋಗ ವಂಚಿತ ಪದವೀಧರರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಶ್ರಮಿಸಲಾಗುವುದು. ಸ್ವಯಂ ಉದ್ಯೋಗ ಕೈಗೊಳ್ಳಲು ಸರ್ಕಾರದ ವಿವಿಧ ಯೋಜನೆಗಳನ್ನು ದೊರಕಿಸಿಕೊಡಲು ಆಧ್ಯತೆ ನೀಡಲಾಗುವುದು ಹಾಗೂ ಅರ್ಹರಿಗೆ ಖಾಸಗಿ ಮತ್ತು ಸರ್ಕಾರಿ ವಲಯದಲ್ಲಿ ಉದ್ಯೋಗ ದೊರಕುವಂತೆ ಶ್ರಮಿಸಿ ಮಹಿಳೆಯರು, ವಿಕಲಚೇತನರು, ಹಿರಿಯ ನಾಗರೀಕರು, ನಿವೃತ್ತ ನೌಕರರ ಕ್ಷೇಮಾಭಿವೃದ್ಧಿಯ ಬಗ್ಗೆ ಕಾರ್ಯಕ್ರಮ ರೂಪಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಅಣ್ಣಯ್ಯ ಶಟ್ಟಿ, ಮುಖಂಡರಾದ ಎಂ.ಪಿ.ನಾಗರಾಜು, ರಘುನಾಥ್, ಜಲೇಂದ್ರ, ಸಂಒಶೇಖರ್, ಅಶೋಕ್, ರವಿ, ಮೋಹನ್ ಕುಮಾರ್, ಕೆಂಪೇಗೌಡ, ವಿಶ್ವಾಸ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.