ಬಡತನ ಹೋಗಲಾಡಿಸಲು ಆರ್ಥಿಕ ಚಟುವಟಿಕೆಗಳಲ್ಲಿ ಸರ್ಕಾರದ ಮಧ್ಯಸ್ಥಿಕೆ ಅಗತ್ಯ: ಸಿಎಂ


Team Udayavani, Feb 6, 2022, 7:45 AM IST

ಬಡತನ ಹೋಗಲಾಡಿಸಲು ಆರ್ಥಿಕ ಚಟುವಟಿಕೆಗಳಲ್ಲಿ ಸರ್ಕಾರದ ಮಧ್ಯಸ್ಥಿಕೆ ಅಗತ್ಯ: ಸಿಎಂ

ಬೆಂಗಳೂರು: ಬಡತನ ಹೋಗಲಾಡಿಸಲು ಆರ್ಥಿಕ ಚಟುವಟಿಕೆಗಳಲ್ಲಿ ಸರ್ಕಾರದ ಮಧ್ಯಪ್ರವೇಶ ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಂಜೀವಿನಿ- ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಉತ್ತೇಜನ ಸಂಸ್ಥೆ ಹಾಗೂ ಅಮೆಜಾನ್‌ನೊಂದಿಗೆ ನಡೆದ ಒಡಂಬಡಿಕೆಗೆ ಸಹಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಮಾತನಾಡಿದರು.

ಪ್ರಸ್ತುತ ಸ್ಥಿತಿಯಲ್ಲಿ ಬಡತನ ನಮ್ಮ ಬಹು ದೊಡ್ಡ ಶತ್ರು. ಗ್ರಾಮೀಣ ಜನರನ್ನು ಮೇಲೆತ್ತುವುದು ಮಾತ್ರವಲ್ಲ, ಬಡತನವನ್ನು ನಾವು ಸೋಲಿಸಬೇಕಿದೆ. ಬಡಜನರಿಗೆ ಎಲ್ಲಾ ರೀತಿಯ ನೆರವಿನ ವ್ಯವಸ್ಥೆಯನ್ನು ಕಲ್ಪಿಸಿ ಅವರನ್ನು ಸಬಲರನ್ನಾಗಿಸಬೇಕಿದೆ ಎಂದರು.

ಸಾಮರ್ಥ್ಯ ಮತ್ತು ವ್ಯಾಪಕತೆಯನ್ನು ಹೊಂದಿರುವ ಅಮೆಜಾನ್‌ ಸಂಸ್ಥೆಯೊಂದಿಗೆ ಮಾಡಿಕೊಂಡಿರುವ ಒಪ್ಪಂದವೇ ಬಹು ದೊಡ್ಡ ಮಧ್ಯಸ್ಥಿಕೆಯಾಗಿ ಪರಿಣಮಿಸಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಂಸ್ಕೃತಿಯ ವಿನಿಮಯ:
ಈ ಒಪ್ಪಂದದಿಂದ ಬ್ರಾಂಡಿಂಗ್‌ ಹಾಗೂ ಉತ್ಪನ್ನಗಳ ಸಂಸ್ಕೃತಿಯ ವಿನಿಮಯ ಮಾಡುವ ದೊಡ್ಡ ಹೊಣೆಗಾರಿಕೆ ನಮ್ಮ ಮೇಲಿದೆ. ಪರಿವರ್ತನೆಯನ್ನು ನಾವು ಉಸಿರಾಗಿಸಿಕೊಳ್ಳಬೇಕು. ಉತ್ತಮ ಹಾಗೂ ಸುಸ್ಥಿರ ಮಾರುಕಟ್ಟೆ ಯೊಂದಿಗೆ ಕೌಶಲ್ಯ, ಅರ್ಹತೆ ಹಾಗೂ ಛಲವನ್ನು ಹೊಂದಿರುವ ಗ್ರಾಮೀಣ ಮಹಿಳೆಯರಿಗೆ ಉತ್ತಮವಾದ ಕಾರ್ಯವಿಧಾನದ ಅಗತ್ಯವಿದೆ ಎಂದು ತಿಳಿಸಿದರು. ಈ ನಿಟ್ಟಿನಲ್ಲಿ ಸಂಜೀವಿನಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕಿದೆ. ಇದರ ಯಶೋಗಾಥೆಯ ಮುಖಾಂತರ ಇತರೆ ಸಣ್ಣ ಉದ್ಯಮ ಹಾಗೂ ಚಟುವಟಿಕೆಗಳಿಗೆ ಇದೇ ಮಾದರಿಯನ್ನು ಅನುಸರಿಸಲು ಸಾಧ್ಯವಾಗಲಿದೆ. ಕರ್ನಾಟಕ ರಾಜ್ಯವು ಪ್ರತಿಭೆ, ಉತ್ಪನ್ನ ಹಾಗೂ ಉದ್ಯಮಗಳಲ್ಲಿ ಪರಿಣಿತಿಯನ್ನು ಹೊಂದಿರುವ ರಾಜ್ಯ ವಾಗಿದ್ದು, ಪ್ರಾಮಾಣಿಕವಾಗಿ ಕೆಲಸ ಮಾಡುವ ಜನರಿದ್ದಾರೆ. ಕರ್ನಾಟಕ ಸರ್ಕಾರ ಮತ್ತು ಅಮೆಜಾನ್‌ ಸಂಸ್ಥೆ ಒಟ್ಟಾಗಿ ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ಶ್ರಮಿಸಬೇಕಿದೆ ಎಂದರು.

ಕೌಶಲ್ಯಾಭಿವೃದ್ಧಿ ಸಚಿವ ಡಾ: ಅಶ್ವಥ್‌ನಾರಾಯಣ್‌ ಮಾತನಾಡಿ ಸಂಜೀವಿನಿ ಕಾರ್ಯಕ್ರಮದಡಿ ಮಾಡಿಕೊಂಡಿರುವ ಒಪ್ಪಂದ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲಿದೆ ಎಂದರು. ಅಮೆಜಾನ್‌ ಸಂಸ್ಥೆಯ ಮುಖ್ಯಸ್ಥ ಚೇತನ್‌ ಕೃಷ್ಣಸ್ವಾಮಿ ಮಾತನಾಡಿ ಸಣ್ಣ ಹಾಗೂ ಮಧ್ಯಮ ಉದ್ಯಮಗಳನ್ನು ಬೆಂಬಲಿಸಲು ಅಮೆಜಾನ್‌ ಬದ್ಧವಾಗಿದೆ. ರಾಜ್ಯದಲ್ಲಿ ಮಹಿಳೆಯರು ತಯಾರಿಸುವ ವಿಶಿಷ್ಟ ಉತ್ಪನ್ನಗಳಿಗೆ ಅತ್ಯುತ್ತಮ ಮಾರುಕಟ್ಟೆ ಒದಗಿಸಲು ಅಮೆಜಾನ್‌ ನೆರವು ನೀಡಲಿದೆ ಎಂದರು.

ಮುಖ್ಯ ಕಾರ್ಯದರ್ಶಿ ಪಿ.ರವಿ ಕುಮಾರ್‌, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಕೌಶಲ್ಯಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಸೆಲ್ವಕುಮಾರ್‌, ಆಯುಕ್ತೆ ಮಂಜುಶ್ರೀಉಪಸ್ಥಿತರಿದ್ದರು.

ಒಂದು ಜಿಲ್ಲೆ – ಒಂದು ಉತ್ಪನ್ನ
ಕಾರ್ಯಕ್ರಮದಡಿ ಸ್ಥಳೀಯ ಪ್ರತಿಭೆ ಮತ್ತು ಉತ್ಪನ್ನಗಳನ್ನು ರಾಷ್ಟ್ರ ಮಟ್ಟಕ್ಕೆ ಕೊಂಡೊಯ್ಯಬೇಕಿದೆ ಚನ್ನಪಟ್ಟಣದ ಗೊಂಬೆಗಳು, ಇಳಕಲ್‌ ಹಾಗೂ, ಮೊಳಕಾಳೂ¾ರು ಸೀರೆಗಳು ಆಹಾರ ಉತ್ಪನ್ನಗಳಿಗೆ ಪೋ›ತ್ಸಾಹ ನೀಡಿ ಆಧುನಿಕತೆಯ ಸ್ಪರ್ಶವನ್ನು ಒದಗಿಸಲು ಇದು ಸಹಕಾರಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Vaishnodevi-Temple

Famous Goddess Temple: ಗುಹಾಲಯ ಶ್ರೀಮಾತಾ ವೈಷ್ಣೋದೇವಿ ದೇಗುಲ, ಜಮ್ಮು-ಕಾಶ್ಮೀರ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.