ಕುಂದಾಪುರ ಕಾಲೇಜಿನಲ್ಲಿ ಸರಕಾರದ ನಿಯಮ ಪಾಲನೆಗೆ ನಿರ್ಧಾರ
ವಿದ್ಯಾರ್ಥಿಗಳಿಂದ ಮೆರವಣಿಗೆ, ಕೆಲವು ಕಾಲೇಜುಗಳಿಗೆ ರಜೆ
Team Udayavani, Feb 6, 2022, 6:20 AM IST
ಕುಂದಾಪುರ: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ 4ನೇ ದಿನವು ಮುಂದವರಿದಿದ್ದು, ಇನ್ನಷ್ಟು ಕಾಲೇಜುಗಳಿಗೆ ವಿಸ್ತರಿಸಿದೆ. ಶನಿವಾರ ಕುಂದಾಪುರ ನಗರದಲ್ಲಿ ವಿದ್ಯಾರ್ಥಿಗಳಿಂದ ಮೆರವಣಿಗೆ, ಕೆಲವು ಕಾಲೇಜುಗಳಿಗೆ ರಜೆ, ಹಿಜಾಬ್‌ಗ ಅವಕಾಶ ಕೊಡಬೇಕು ಎನ್ನುವ ಮನವಿ ಸಲ್ಲಿಕೆ ಇತ್ಯಾದಿ ವಿದ್ಯಮಾನ ನಡೆದವು. ಇದೇ ವೇಳೆ ಹಿಜಾಬ್ ಅಥವಾ ಕೇಸರಿ ಶಾಲು ಧರಿಸಿ ಬರುವವರಿಗೆ ಗೇಟಿನ ಒಳಗೆ ಪ್ರವೇಶ ನೀಡದಿರಲು ಕಾಲೇಜಿನ ಅಭಿವೃದ್ಧಿ ಸಮಿತಿ ನಿರ್ಧರಿಸಿದೆ.
ಹಿಜಾಬ್‌ಗ ಅವಕಾಶ ಕಲ್ಪಿಸಿದರೆ ನಾವು ಕೇಸರಿ ಶಾಲು ಹಾಕಿಕೊಂಡು ಬರುತ್ತೇವೆ ಎಂದು ಹೇಳಿದ ನಗರ ಭಾಗದ ಖಾಸಗಿ ಕಾಲೇಜು ವಿದ್ಯಾರ್ಥಿ/ ವಿದ್ಯಾರ್ಥಿನಿಯರು ಕುಂದೇಶ್ವರ ದೇವಸ್ಥಾನದಿಂದ ಶಾಸಿŒ ಸರ್ಕಲ್ ಮೂಲಕ ಕಾಲೇಜಿನ ವರೆಗೆ ಪ್ರತಿಭಟನ ಮೆರವಣಿಗೆ ನಡೆಸಿದರು. ಕೇಸರಿ ಶಾಲು ತೆಗೆದರೆ ಮಾತ್ರ ಅವಕಾಶ ಎಂದಾಗ ಎಲ್ಲರು ಶಾಲು ತೆಗೆದಿರಿಸ ಒಳಗೆ ತೆರಳಿದರು.
ಅವಕಾಶಕ್ಕೆ ಮನವಿ
ಇದೇ ಕಾಲೇಜಿನ ಮುಸ್ಲಿಂ ಹೆಣ್ಣು ಮಕ್ಕಳಿಗೆ ಹಿಜಾಬ್ ಧರಿಸಲು ಅವಕಾಶ ಕಲ್ಪಿಸಬೇಕು ಎಂದು ಒಂದಷ್ಟು ವಿದ್ಯಾರ್ಥಿನಿಯರು, ಅವರ ಪೋಷಕರು ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದರು. ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಪೋಷಕರು, ನಮಗೆ ಕಾಲೇಜು ಕಡೆಯಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ ಎಂದರು. ಇತ್ತ ಮನವಿ ಸ್ವೀಕರಿಸಿದ ಪ್ರಾಂಶುಪಾಲರು, ಈ ವಿಚಾರವನ್ನು ಕಾಲೇಜಿನ ಆಡಳಿತ ಮಂಡಳಿಯ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಇದನ್ನೂ ಓದಿ:ವಿವಾದದ ನಡುವೆಯೇ ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿದ ಸರಕಾರ
ಕಾಲೇಜುಗಳಿಗೆ ರಜೆ
ಕುಂದಾಪುರದ ಸರಕಾರಿ ಪ.ಪೂ.ಕಾಲೇಜಿಗೆ ಹಿಂದಿನ ದಿನವೇ ಶನಿವಾರ ರಜೆಯೆಂದು ಘೋಷಿಸಲಾ ಗಿತ್ತು. ಕುಂದಾಪುರದ ಖಾಸಗಿ ಕಾಲೇ ಜೊಂದರಲ್ಲಿ ಶನಿವಾರ ವಿದ್ಯಾರ್ಥಿಗಳು ಹಿಜಾಬ್ ಹಾಗೂ ಕೇಸರಿ ಶಾಲು ಧರಿಸಿ ಬಂದಿದ್ದರಿಂದ ಕಾಲೇಜಿಗೆ ರಜೆ ನೀಡಲಾಯಿತು. ಗಂಗೊಳ್ಳಿ, ನಾವುಂದ ಸರಕಾರಿ ಪ.ಪೂ. ಕಾಲೇಜಿಗೂ ಶನಿವಾರ ರಜೆ ನೀಡಲಾಯಿತು.
ಬಿಗಿ ಭದ್ರತೆ
ನಗರದಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಬಿಗಿ ಭದ್ರತೆ ಕಲ್ಪಿಸಲಾಗಿತ್ತು.
ಹಿಜಾಬ್, ಕೇಸರಿ ಶಾಲಿಗೆ ಅವಕಾಶವಿಲ್ಲ
ಕುಂದಾಪುರದ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ಶನಿವಾರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ನಿರ್ದೇಶನದಂತೆ ಕಾಲೇಜು ಅಭಿವೃದ್ಧಿ ಸಮಿತಿ ಸಭೆ ನಡೆಯಿತು. ಹಿಜಾಬ್ ಅಥವಾ ಕೇಸರಿ ಶಾಲು ಧರಿಸಿ ಬರುವ ವಿದ್ಯಾರ್ಥಿಗಳಿಗೆ ಗೇಟು ದಾಟಲು ಅವಕಾಶವಿಲ್ಲ ಎಂಬ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾಲೇಜಿನ ಅಭಿವೃದ್ಧಿ ಸಮಿತಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
MUST WATCH
ಹೊಸ ಸೇರ್ಪಡೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್
Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ
BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್: ಭಾರತದ ಹಿಡಿತದಲ್ಲಿ ಪರ್ತ್ ಟೆಸ್ಟ್
Bengaluru: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.