![WTC 25; India’s Test Championship finals road gets tough; Here’s the calculation](https://www.udayavani.com/wp-content/uploads/2024/12/rahul-2-415x241.jpg)
“ಸಿದ್ದರಾಮಯ್ಯ ಆತ್ಮಾವಲೋಕನ ಮಾಡಿಕೊಂಡು ಮಾತನಾಡಲಿ’
Team Udayavani, Feb 6, 2022, 6:55 AM IST
![“ಸಿದ್ದರಾಮಯ್ಯ ಆತ್ಮಾವಲೋಕನ ಮಾಡಿಕೊಂಡು ಮಾತನಾಡಲಿ’](https://www.udayavani.com/wp-content/uploads/2022/02/Nalin-1-620x389.jpg)
ಮಂಗಳೂರು: ಹಿಜಾಬ್ ಬಗ್ಗೆ ಸಿದ್ದರಾಮಯ್ಯ ನೀಡಿರುವ ಹೇಳಿಕೆಗಳನ್ನು ಗಮನಿಸಿದ್ದೇನೆ. ಇದರ ಬಗ್ಗೆ ಮಾತನಾಡುವ ಮೊದಲು ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಮಾಜದಲ್ಲಿ ಸಾಮರಸ್ಯ ಕೆಡಿಸುವ ಎಷ್ಟು ನಿರ್ಧಾರಗಳನ್ನು ಮಾಡಿದ್ದರು ಎಂಬ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಟಿಪ್ಪು ಜಯಂತಿ ಮೂಲಕ ಸಾಮರಸ್ಯವನ್ನು ಕೆಡಿಸುವ ಯತ್ನ ಮಾಡಿದರು. ಶಾದಿ ಭಾಗ್ಯದ ಹೆಸರಿನಲ್ಲಿ ಕೆಲವೇ ಸಮುದಾಯಕ್ಕೆ ಅವಕಾಶ ಮಾಡಿಕೊಟ್ಟವರು. ಈ ರೀತಿಯ ನಿರ್ಧಾರಗಳು ಸಮಾಜದ ಸಾಮರಸ್ಯಕ್ಕೆ ಹೇಗೆ ಧಕ್ಕೆ ತಂದಿವೆ ಎಂಬುದನ್ನು ಈಗ ಹಿಜಾಬ್ ಕುರಿತು ಮಾತನಾಡುವ ಅವರು ಅರ್ಥಮಾಡಿಕೊಳ್ಳಲಿ ಎಂದರು.
ತಾಲಿಬಾನೀಕರಣಕ್ಕೆ ಅವಕಾಶ ನೀಡೆವು
ಶಾಲೆಯ ನಿಯಮ ಹಾಗೂ ಅನುಶಾಸನ ಪಾಲಿಸಿಕೊಂಡು ಕಲಿಯಬೇಕಾದದ್ದು ಧರ್ಮ. ಅದರೊಂದಿಗೆ ಬೇರೆ ಧರ್ಮ ಬರುವುದು ಸರಿಯಲ್ಲ. ಶಾಲೆಯ ನಿಯಮದಡಿಯಲ್ಲಿಯೇ ಎಲ್ಲರೂ ಕಲಿಯಬೇಕು. ಯಾರಿಗೆ ಈ ಶಾಲೆಗಳಲ್ಲಿ ಶಿಕ್ಷಣ ಪಡೆಯಲು ಸಾಧ್ಯ ಇಲ್ಲವೋ ಅವರು ಬೇರೆ ದಾರಿ ನೋಡಿಕೊಳ್ಳಬಹುದು. ಇಲ್ಲಿ ತಾಲಿಬಾನ್ ಮಾಡಲು ಅವಕಾಶ ನೀಡುವುದಿಲ್ಲ ಎಂದರು.
ದನ ಕಳ್ಳತನ, ದನ ಆಕ್ರಮ ಸಾಗಾಟದ ವಿರುದ್ಧ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಿದೆ. ಮುಖ್ಯಮಂತ್ರಿಯವರು, ಗೃಹಸಚಿವರು ಹಾಗೂ ಉಸ್ತುವಾರಿ ಸಚಿವರ ಸಭೆ ನಡೆಸಿ ಸ್ಪಷ್ಟ ನಿರ್ದೇಶನ ನೀಡಿದ್ದಾರೆ ಎಂದು ನಳಿನ್ ತಿಳಿಸಿದರು.
ಇದನ್ನೂ ಓದಿ:ನಾರಾಯಣಗುರುಗಳ ಟ್ಯಾಬ್ಲೋ ನಿರಾಕರಣೆ ಸರಿಪಡಿಸಲು ಹಿಜಾಬ್ ಹುಟ್ಟಿಕೊಂಡಿದೆ: ರೆಡ್ಡಿ
ಸಂಪುಟ: ಸಿಎಂ ವಿವೇಚನೆ
ಸಚಿವ ಸಂಪುಟದ ಪುನಾರಚನೆ ವಿಚಾರ ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟ ವಿಚಾರ. ಸಂದರ್ಭ ಬಂದಾಗ ರಾಷ್ಟ್ರೀಯ ನಾಯಕರ ಜತೆ ಮಾತನಾಡಿ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಸುದ್ದಿಗಾರರ ಪ್ರಶ್ನೆಗೆ ನಳಿನ್ ಕುಮಾರ್ ಉತ್ತರಿಸಿದರು.
ಮಂತ್ರಿಮಂಡಲದಲ್ಲಿ ಇರಬೇಕು ಎಂದು ಅಪೇಕ್ಷೆ ಪಡುವುದು ತಪ್ಪಲ್ಲ. ಆದರೆ ಎಲ್ಲ ಶಾಸಕರಿಗೂ ಮಂತ್ರಿ ಸ್ಥಾನ ನೀಡಲು ಸಾಧ್ಯವಿಲ್ಲ. ಅದಕ್ಕೆ ನಿಯಮಗಳಿವೆ. ರಾಷ್ಟ್ರೀಯ ನಾಯಕರು ಹಾಗೂ ನಾವು ಚರ್ಚೆ ಮಾಡಿ ಯಾರಿಗೆ ಅವಕಾಶ ನೀಡಬೇಕು ಎನ್ನುವುದನ್ನು ತೀರ್ಮಾನ ಮಾಡುತ್ತೇವೆ. ಹಾದಿಬೀದಿಯಲ್ಲಿ ಚರ್ಚೆ ಮಾಡುವುದು ಸರಿಯಲ್ಲ ಎಂದರು.
ಟಾಪ್ ನ್ಯೂಸ್
![WTC 25; India’s Test Championship finals road gets tough; Here’s the calculation](https://www.udayavani.com/wp-content/uploads/2024/12/rahul-2-415x241.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Mangalore_Airport-NewTerminal](https://www.udayavani.com/wp-content/uploads/2024/12/Mangalore_Airport-NewTerminal-150x90.jpg)
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
![Frud](https://www.udayavani.com/wp-content/uploads/2024/12/Frud-1-150x90.jpg)
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
![MCC-BankArrest](https://www.udayavani.com/wp-content/uploads/2024/12/MCC-BankArrest-150x90.jpg)
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
![Surthkal-Spota](https://www.udayavani.com/wp-content/uploads/2024/12/Surthkal-Spota-150x90.jpg)
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
![Traffic-UPI](https://www.udayavani.com/wp-content/uploads/2024/12/Traffic-UPI-150x90.jpg)
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
![WTC 25; India’s Test Championship finals road gets tough; Here’s the calculation](https://www.udayavani.com/wp-content/uploads/2024/12/rahul-2-150x87.jpg)
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
![Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ](https://www.udayavani.com/wp-content/uploads/2024/12/sc-19-150x90.jpg)
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
![Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್… 5 ಭಯೋತ್ಪಾದಕರು ಹತ](https://www.udayavani.com/wp-content/uploads/2024/12/kashmir-1-150x84.jpg)
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
![22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?](https://www.udayavani.com/wp-content/uploads/2024/12/DOKLAM-150x79.jpg)
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
![Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್](https://www.udayavani.com/wp-content/uploads/2024/12/mallya-150x89.jpg)
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.