ತಹಶೀಲ್ದಾರ್ ಮೇಲಿನ ಹಲ್ಲೆಗೆ ಖಂಡನೆ
Team Udayavani, Feb 6, 2022, 12:32 PM IST
ವಿಜಯಪುರ: ಹುಮನಾಬಾದ ತಹಶೀಲ್ದಾರ್ ಡಾ| ಪ್ರದೀಪ ಹಿರೇಮಠ ಅವರ ಮೇಲೆ ನಡೆದ ಹಲ್ಲೆ ಘಟನೆ ಖಂಡಿಸಿ ಬಬಲೇಶ್ವರ ತಾಲೂಕಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಶನಿವಾರ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ಬಬಲೇಶ್ವರ ತಾಲೂಕಿನ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಎ.ಎಂ.ಬೂದಿಹಾಳ ಮಾತನಾಡಿ, ರಾಜ್ಯದಲ್ಲಿ ಇತ್ತೀಚೆಗೆ ಸರ್ಕಾರಿ ಅಧಿಕಾರಿ ಹಾಗೂ ನೌಕರರ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣಗಳು ನಡೆಯುತ್ತಿದ್ದು, ಸೂಕ್ತ ರಕ್ಷಣೆ ಇಲ್ಲದೆ ಆತಂಕದ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರಿ ನೌಕರರು ಕರ್ತವ್ಯ ನಿರ್ವಹಿಸುತ್ತಿರುವ ಪರಿಸ್ಥಿತಿ ಉದ್ಭವಿಸಿದೆ ಎಂದರು.
ತಹಶೀಲ್ದಾರ್ ಮೇಲೆ ಹಲ್ಲೆ ಮಾಡಿದವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಕರ್ತವ್ಯನಿರತ ಅಧಿಕಾರಿಗಳು ಹಾಗೂ ನೌಕರರಿಗೆ ರಕ್ಷಣೆ ನೀಡಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡಬೇಕೆಂದು ನೌಕರರ ಸಂಘ ಮನವಿ ಮಾಡಿದೆ.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕ ವಿ.ಜಿ.ದೇಸಾಯಿ, ಎಚ್.ಎ.ಮುಲ್ಲಾ, ಎಲ್ .ಜಿ.ಕೊರಬು, ಎಲ್.ಆರ್.ಮನಗೂಳಿ, ಹರೀಶ ಬಬಲೇಶ್ವರ, ರವಿ ಬಡಿಗೇರ, ಎಸ್.ಜಿ.ಗಂಗನಗೌಡರ, ಬಿ.ಎಸ್.ಕೋಟ್ಯಾಳ, ಎ.ಎ.ಗುಂದಗಿ, ಎನ್.ಪಿ.ನಾಗಠಾಣ, ಬಸವರಾಜ ಕಬಾಡೆ, ಜಿ.ಎಸ್. ಕುಲಕರ್ಣಿ, ಜಿ.ಎಸ್.ನಿಂಬಾಳಕರ, ಶಂಕರ ತಳವಾರ, ಡಾ| ಅಶೋಕ ಜಂಗಮಶೆಟ್ಟಿ, ಎಸ್.ಬಿ.ಹಲಸಗಿ, ಸಿದರಾಯ ಅಥಣಿ, ಅಶೋಕ ಕಾಗವಾಡ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.