ಉಡುಪಿ ಜಿಲ್ಲೆ: ಮಾವು ಇಳುವರಿ ಹೆಚ್ಚಾಗುವ ನಿರೀಕ್ಷೆ

Team Udayavani, Feb 6, 2022, 1:25 PM IST

ಉಡುಪಿ ಜಿಲ್ಲೆ: ಮಾವು ಇಳುವರಿ ಹೆಚ್ಚಾಗುವ ನಿರೀಕ್ಷೆ

ಕುಂದಾಪುರ: ಈ ಬಾರಿ ಮಾವಿನ ಮರಗಳು ಹೂವು ಚೆನ್ನಾಗಿ ಬಿಟ್ಟಿದ್ದು, ಬೆಳೆಗಾರರಲ್ಲಿ ಮಾವು ಇಳುವರಿ ಹೆಚ್ಚಾಗುವ ಆಶಾದಾಯಕ ಭಾವನೆ ಮೂಡಿಸಿದೆ. ಪ್ರಸಕ್ತ ಸಾಲಿನಲ್ಲಿ ಕುಂದಾಪುರ, ಬೈಂದೂರು ಸೇರಿದಂತೆ ಉಡುಪಿ ಜಿಲ್ಲೆಯಲ್ಲಿ ಒಟ್ಟು 440 ಹೆಕ್ಟೇರ್‌ ಪ್ರದೇಶದಲ್ಲಿ ರೈತರು ಮಾವು ಬೆಳೆದಿದ್ದು, ಸಾಮಾನ್ಯವಾಗಿ ಎಲ್ಲ ಕಡೆ ಮಾವಿನ ಗಿಡಗಳು ಹೂವು ಬಿಟ್ಟು ಕಂಗೊಳಿಸುತ್ತಿವೆ.

ಮಾವಿನ ಹೂವುಗಳಿಗೆ ಪೂರಕವಾದ ವಾತಾವರಣವಿದ್ದು, ಕಳೆದ ಕೆಲವು ದಿನಗಳಿಂದ ಇಬ್ಬನಿ ಕವಿದ ವಾತಾವರಣವಿದೆ. ಉಡುಪಿ ಜಿಲ್ಲೆಯಲ್ಲಿ ರತ್ನಗಿರಿ, ನೀಲಂ, ಆಪೂಸ್‌ ತಳಿಯ ಮಾವು ಹೆಚ್ಚಾಗಿ ಬೆಳೆಯುತ್ತಿದ್ದು, ಕೆಲವರು ಮಲ್ಲಿಕಾ, ಮುಂಡಪ್ಪ ತಳಿಯನ್ನು ಬೆಳೆಯುತ್ತಾರೆ.

ಮಳೆಯಿಂದ ವಿಳಂಬ :

ಈ ಸಾಲಿನಲ್ಲಿ ಕಳೆದ ಡಿಸೆಂಬರ್‌ವರೆಗೂ ಮಳೆ ಇದ್ದುದರಿಂದ, ಹೂವು ಬಿಡುವ ಪ್ರಕ್ರಿಯೆ ವಿಳಂಬವಾಗಿದೆ. ಮಳೆ ಕಡಿಮೆಯಾಗುವವರೆಗೂ ಚಿಗುರು ಬಿಡುವ ಪ್ರಕ್ರಿಯೆ ಇದ್ದುದರಿಂದ ಹೂವು ಬಿಡುವ ಪ್ರಕ್ರಿಯೆ ತಡವಾಗಿ ಆರಂಭವಾಗಿದೆ. ಇದರಿಂದಾಗಿ ಉಪ್ಪಿನಕಾಯಿ ಇನ್ನಿತರ ಬಳಕೆಗೆ ತೊಂದರೆಯಿಲ್ಲದಿದ್ದರೂ, ಹಣ್ಣು ಮಾರಾಟ ಮಾಡುವವರಿಗೆ ವಿಳಂಬದಿಂದಾಗಿ ನಷ್ಟವಾಗುವ ಸಂಭವವೂ ಇದೆ. ಕೆಲವೆಡೆಗಳಲ್ಲಿ ಮಾವಿನ ಸೀಸನ್‌ ವಿಳಂಬದಿಂದಾಗಿ ಮಾವಿನ ತೋಟಗಳು 2 ಲಕ್ಷ ರೂ. ವರೆಗೆ ಏಲಂ ಆಗುತ್ತಿದ್ದುದು, ಈ ಬಾರಿ 45 ಸಾವಿರ ರೂ.ಗೆ ಸೀಮಿತವಾಗಿದೆ.

ಕಳೆದ ವರ್ಷ ಮಾವಿನ ಇಳುವರಿ ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿತ್ತು. ಇದರಿಂದಾಗಿ ಸ್ಥಳೀಯ ಮಾವಿನ ಮಿಡಿ ಹಾಗೂ ಹಣ್ಣುಗಳು ಅಷ್ಟೊಂದು ಪ್ರಮಾಣದಲ್ಲಿ ಸಿಕ್ಕಿರಲಿಲ್ಲ. ಆದರೆ ಈ ಬಾರಿ ಜಿಲ್ಲೆಯ ಬಹುತೇಕ ಎಲ್ಲ ಕಡೆಗಳಲ್ಲಿ ಉತ್ತಮ ಪ್ರಮಾಣದಲ್ಲಿ ಹೂವು ಬಿಟ್ಟಿದ್ದು, ಈ ಬಾರಿಯ ಮಾವಿನ ಸೀಸನ್‌ ಉತ್ತಮವಾಗಿರಬಹುದು ಎನ್ನುವ ನಿರೀಕ್ಷೆ ಮಾವಿನ ಬೆಳೆಗಾರರದ್ದಾಗಿದೆ.

ಎಲ್ಲೆಲ್ಲಿ ಎಷ್ಟು ಹೆಕ್ಟೇರ್‌? :

ಉಡುಪಿ ಜಿಲ್ಲೆಯಲ್ಲಿ ವಾರ್ಷಿಕ ಒಟ್ಟಾರೆ 440.49 ಹೆಕ್ಟೇರ್‌ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಈ ಪೈಕಿ ಕಾರ್ಕಳ ತಾಲೂಕಿನಲ್ಲಿ ಗರಿಷ್ಠ 164 ಹೆಕ್ಟೇರ್‌, ಬೈಂದೂರು ತಾಲೂಕಿನಲ್ಲಿ ಕನಿಷ್ಠ 8 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಯಲಾಗುತ್ತದೆ. ಇನ್ನು ಕುಂದಾಪುರದಲ್ಲಿ 109 ಹೆಕ್ಟೇರ್‌, ಬ್ರಹ್ಮಾವರದಲ್ಲಿ 74 ಹೆಕ್ಟೇರ್‌, ಕಾಪುವಿನಲ್ಲಿ 33, ಹೆಬ್ರಿಯಲ್ಲಿ 30 ಹಾಗೂ ಉಡುಪಿ ತಾಲೂಕಿನಲ್ಲಿ 20 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಯಲಾಗಿದೆ.

ಸಾಮಾನ್ಯವಾಗಿ ಡಿಸೆಂಬರ್‌ ವೇಳೆಗೆ ಮಾವಿನ ಹೂ ಬಿಡುತ್ತದೆ. ಆದರೆ ಈ ಬಾರಿ ಡಿಸೆಂಬರ್‌ವರೆಗೂ ಮಳೆ ಇದ್ದುದರಿಂದ ಹೂವು ಬಿಡುವ ಪ್ರಕ್ರಿಯೆ ತಡವಾಗಿ ಆರಂಭಗೊಂಡಿದೆ. ಆದರೆ ಈ ಬಾರಿ ಎಲ್ಲ ಕಡೆಗಳಲ್ಲಿ ಉತ್ತಮ ಹೂ ಬಿಟ್ಟಿದೆ. ಹವಾಮಾನ ಸಹ ಉತ್ತಮವಾಗಿರುವುದರಿಂದ ಈ ಬಾರಿ ಹೆಚ್ಚಿನ ಮಾವು ಇಳುವರಿ ಬರುವ ನಿರೀಕ್ಷೆಯಿದೆ. – ಡಾ| ಧನಂಜಯ ಬಿ.,  ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರು,  ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

Women’s T20: ದಾಖಲೆ ಮೊತ್ತ… ಭಾರತಕ್ಕೆ ಟಿ20 ಸರಣಿ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

death

Gangolli: ಲಾರಿ ಪ್ರಯಾಣದ ವೇಳೆ ಕ್ಲೀನರ್‌ ಸಾವು

accident

Kundapura: ಕಾರು ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

10-sc-1

Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್‌

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.