![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 7, 2022, 6:25 AM IST
ಮಂಗಳೂರು: ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಸೂಚನೆಯಂತೆ ಫೆ. 19ರಿಂದ ಫೆ. 28ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ ಕಡತ ವಿಲೇವಾರಿ ಸಪ್ತಾಹಕ್ಕೆ ಜಿಲ್ಲಾಡಳಿತ ಮತ್ತು ಜಿ.ಪಂ. ವ್ಯಾಪಕ ಸಿದ್ಧತೆಗಳನ್ನು ನಡೆಸುತ್ತಿದ್ದು, ಎಲ್ಲ ಅವಶ್ಯ ಪೂರ್ವಭಾವಿ ಕ್ರಮಗಳನ್ನು ಕೈಗೊಳ್ಳುವಂತೆ ಇಲಾಖೆಗಳಿಗೆ ಸೂಚಿಸಿದೆ.
ಎಲ್ಲ ಇಲಾಖೆಯವರು ಜಿಲ್ಲಾ ಮಟ್ಟ, ಉಪವಿಭಾಗ ಮಟ್ಟ, ತಾಲೂಕು ಮಟ್ಟ, ಹೋಬಳಿ ಮಟ್ಟ ಮತ್ತು ಗ್ರಾಮ ಮಟ್ಟದಲ್ಲಿ ಕಡತ ವಿಲೇವಾರಿ ಸಪ್ತಾಹವನ್ನು ವ್ಯವಸ್ಥಿತವಾಗಿ ಹಮ್ಮಿಕೊಳ್ಳಬೇಕು. ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಅಥವಾ ಗ್ರಾಮ ಮಟ್ಟದ ಅಧಿಕಾರಿಗಳೊಂದಿಗೆ ಕೂಡಲೇ ಸಭೆ ನಡೆಸಿ ಸಪ್ತಾಹಕ್ಕೆ ಸಂಬಂಧಿಸಿ ಸಮರ್ಪಕವಾದ ಕ್ರಿಯಾಯೋಜನೆ ತಯಾರಿಸುವಂತೆ ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಮತ್ತು ಜಿ.ಪಂ. ಸಿಇಒ ಡಾ| ಕುಮಾರ್ ಎಲ್ಲ ಇಲಾಖೆಗಳಿಗೆ ಸುತ್ತೋಲೆ ಮೂಲಕ ಸೂಚಿಸಿದ್ದಾರೆ.
3 ಹಂತಗಳಲ್ಲಿ ವರ್ಗಿಕರಣ
ಸಪ್ತಾಹ ಫೆ. 19ರಂದು ಪ್ರಾರಂಭವಾಗುತ್ತದೆ. ಇದಕ್ಕೆ ಮುನ್ನ ಎಲ್ಲ ಇಲಾಖೆಯವರು ಬಾಕಿ ಇರುವ ಹಳೆಯ ಕಡತಗಳು, ದೂರು ಅರ್ಜಿಗಳು ಮತ್ತು ಸೇವೆಗಳ ವಿತರಣ ಅರ್ಜಿಗಳು ಎಂಬುದಾಗಿ 3 ಹಂತಗಳಲ್ಲಿ ವರ್ಗೀಕರಿಸಬೇಕು. ಬಳಿಕ ಅವುಗಳ ಪ್ರತ್ಯೇಕ ಪಟ್ಟಿ ಮಾಡಿಕೊಳ್ಳಬೇಕು. ಇದರ ವಿವರವನ್ನು ಜಿಲ್ಲಾಮಟ್ಟದ ಅಧಿಕಾರಿಗಳು ತಾಲೂಕು ಮಟ್ಟದ ಅಧಿಕಾರಿಗಳಿಂದ ಸಂಗ್ರಹಿಸಿ ಜಿಲ್ಲಾಧಿಕಾರಿ ಮತ್ತು ಜಿ.ಪಂ. ಸಿಇಒಗೆ ಸಲ್ಲಿಸಬೇಕು. ಕಡತ ವಿಲೇವಾರಿ ಸಪ್ತಾಹದ ಕುರಿತು ಪ್ರಚಾರ ನೀಡಬೇಕು ಎಂದು ಸೂಚಿಸಲಾಗಿದೆ.
ಸಪ್ತಾಹ ಫೆ. 19ರಂದು ಸಚಿವರಿಂದ ಉದ್ಘಾಟನೆಗೊಳ್ಳಲಿದೆ. ಸಪ್ತಾಹ ಆರಂಭಗೊಂಡ ಬಳಿಕ ಪ್ರತೀ ದಿನದ ವಿಲೇವಾರಿ ಪ್ರಗತಿಯನ್ನು ಜಿಲ್ಲಾಮಟ್ಟದ ಅಧಿಕಾರಿ ಸಂಗ್ರಹಿಸಿ ನೀಡಬೇಕು. ಸಪ್ತಾಹದಲ್ಲಿ ಎಲ್ಲ ಇಲಾಖೆಗಳ ಸಿಬಂದಿ, ಅಧಿಕಾರಿಗಳು ಭಾಗವಹಿಸಿ ವಿಶೇಷ ಪ್ರಗತಿ ಸಾಧಿಸಬೇಕು ಎಂದು ಸೂಚಿಸಲಾಗಿದೆ.
ಪ್ರಗತಿ ಪರಿಶೀಲನ ಸಭೆಯಲ್ಲಿ ಸೂಚನೆ
ಸಚಿವ ಸುನಿಲ್ ಕುಮಾರ್ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಜ. 28 ರಂದು ಮಂಗಳೂರಿನಲ್ಲಿ ನಡೆದ ಪ್ರಗತಿ ಪರಿಶೀಲನ ಸಭೆಯಲ್ಲಿ ಬಾಕಿ ಇರುವ ಕಡತಗಳನ್ನು ವೇಳಾಪಟ್ಟಿ ನಿಗದಿಪಡಿಸಿ ವಿಲೇವಾರಿ ಮಾಡಲು ಸೂಚಿಸಿದ್ದರು. ಅದರಂತೆ ಕಡತ ವಿಲೇವಾರಿ ಸಪ್ತಾಹ ಹಮ್ಮಿಕೊಳ್ಳಲಾಗುತ್ತಿದೆ.
ದ.ಕ. ಜಿಲ್ಲೆಗೆ ಸಂಬಂಧಿಸಿ ತುಂಬಾ ಕಡತಗಳು ಬಾಕಿ ಇವೆ ಎಂಬುದನ್ನು ಉಸ್ತುವಾರಿ ಸಚಿವನಾದ ಬಳಿಕ ಹಲವರು ಗಮನಕ್ಕೆ ತಂದಿದ್ದಾರೆ. ಹೀಗಾಗಿ ಕಡತ ವಿಲೇವಾರಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡುವಂತೆ ಜಿಲ್ಲಾಧಿಕಾರಿ ಮತ್ತು ಜಿ.ಪಂ. ಸಿಇಒ ಅವರಿಗೆ ಸೂಚಿಸಿದ್ದೇನೆ.
-ಸುನಿಲ್ ಕುಮಾರ್,
ಜಿಲ್ಲಾ ಉಸ್ತುವಾರಿ ಸಚಿವರು
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.