ಮನೆಯಲ್ಲಿ ಅಕ್ರಮ ಗ್ಯಾಸ್ ರೀಫಿಲ್ಲಿಂಗ್ : ಪೊಲೀಸರ ದಾಳಿ, 1,92,000 ಮೌಲ್ಯದ ಸೊತ್ತು ವಶ
Team Udayavani, Feb 7, 2022, 12:11 PM IST
ಮಂಗಳೂರು: ಇಲ್ಲಿನ ಪೆರ್ಮನ್ನೂರು ಗ್ರಾಮದ ಚೆಂಬುಗುಡ ಪ್ರದೇಶದ ಮನೆಯೊಂದರಲ್ಲಿ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ಘಟಕಕ್ಕೆ ಪೊಲೀಸರು ದಾಳಿ ನಡೆಸಿರುವ ಘಟನೆ ನಡೆದಿದೆ.
ಫ್ರಾನ್ಸಿಸ್ ಎಂಬುವವರು ತಮ್ಮ ಮನೆಗೆ ತಾಗಿಕೊಂಡು ತಗಡು ಶೀಟಿನಿಂದ ನಿರ್ಮಿಸಿದ ಕೋಣೆಯಲ್ಲಿ ಆಡುಗೆ ಅನಿಲದ ಸಿಲಿಂಡರ್ ನಿಂದ ರೆಗ್ಯುಲೇಟರ್ ಮುಖಾಂತರ ಗ್ಯಾಸ್ ತುಂಬಿಸಿ ಮಾರಾಟ ಮಾಡುತ್ತಿದ್ದು ಬೆಳಕಿಗೆ ಬಂದಿದೆ.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದಾಗ ಆರೋಪಿ ಗ್ಯಾಸ್ ಅಕ್ರಮವಾಗಿ ರೀಫಿಲ್ಲಿಂಗ್ ಮಾಡುತ್ತಿದ್ದು ಪೊಲೀಸರನ್ನು ಕಂಡೊಡನೆ ಸ್ಥಳದಿಂದ ಕಾಲ್ಕಿತ್ತಿದ್ದಾನೆ.
ದಾಳಿ ವೇಳೆ ಸ್ಥಳದಲ್ಲಿ ಹಲವು ಕಂಪೆನಿಗೆ ಸೇರಿದ ಡೊಮೆಸ್ಮಿಕ್ ಹಾಗೂ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಸೇರಿ ಒಟ್ಟು 128 ಸಿಲಿಂಡರ್ ಸೇರಿ 1,92,000 ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಇದನ್ನೂ ಓದಿ : ತೀರ್ಥಹಳ್ಳಿ: ಕೇಸರಿ ಶಾಲು ಧರಿಸಿ ಕಾಲೇಜಿಗೆ ಪ್ರವೇಶಿಸಲು ಅನುಮತಿ ನೀಡದಿದ್ದಕ್ಕೆ ಪ್ರತಿಭಟನೆ
ಸಹಾಯಕ ಪೊಲೀಸ್ ಆಯುಕ್ತರು, ಮಂಗಳೂರು ದಕ್ಷಿಣ ಉಪವಿಭಾಗರವರ ಮಾರ್ಗದರ್ಶನದಲ್ಲಿ ಮಂಗಳೂರು ತಾಲೂಕು ಉಳ್ಳಾಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸಂದೀಪ್, ಜಿ.ಎಸ್.ಪೊಲೀಸ್ ಉಪ – ನಿರೀಕ್ಷಕ ಶಿವಕುಮಾರ್. ಕೆ , ಹಾಗೂ ಸಿಬ್ಬಂದಿಗಳಾದ ಮಹೇಶ, ರೆಜಿ, ಉದಯ, ಸಾಗರ್ ಮತ್ತು ಉಳ್ಳಾಲ ವಲಯದ ಆಹಾರ ನಿರೀಕ್ಷಕ ಹಾರಿಸ್, ಪ್ರಭಾರ ಆಹಾರ ನಿರೀಕ್ಷಕ ರೇಖ ಹಾಗೂ ಅವರ ತಂಡ ಕಾರ್ಯಾಚರಣೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
MUST WATCH
ಹೊಸ ಸೇರ್ಪಡೆ
Karnataka: ಅರ್ಹರಿಗಷ್ಟೇ ಬಿಪಿಎಲ್ ಕಾರ್ಡ್: ಸಿಎಂ ಸಿದ್ದರಾಮಯ್ಯ
Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ
Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್
Eden Gardens; ‘ಬಿ’ ಬ್ಲಾಕ್ಗೆ ಜೂಲನ್ ಗೋಸ್ವಾಮಿ ಹೆಸರಿಡಲು ನಿರ್ಧಾರ
Karnataka Lokayukta: ನಾಲ್ವರಿಗೆ ಲೋಕಾ ಶಾಕ್: 27 ಕೋಟಿ ರೂ. ಆಸ್ತಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.