ರೇಷ್ಮೆ ಉದ್ಯಮ ಅಭಿವೃದ್ಧಿಗೆ ಕೇಂದ್ರ ಬದ್ಧ


Team Udayavani, Feb 7, 2022, 1:04 PM IST

ರೇಷ್ಮೆ ಉದ್ಯಮ ಅಭಿವೃದ್ಧಿಗೆ ಕೇಂದ್ರ ಬದ್ಧ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ರೇಷ್ಮೆ ಉದ್ದಿಮೆಯಲ್ಲಿ ತೊಡಗಿಸಿಕೊಂಡಿರುವ ನೂಲು ಬಿಚ್ಚಾಣಿಕೆದಾರರು, ಬೆಳೆಗಾರರು, ನೇಕಾರರು ಮತ್ತು ಹುರಿಕಾರರ ರಕ್ಷಣೆಗೆಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಮಾಜಿ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು.

ಯುವ ಮುಖಂಡರಾದ ಚೇತನ್‌ಗೌಡ ನೇತೃತ್ವದಲ್ಲಿ ರೇಷ್ಮೆ ನೂಲು ಬಿಚ್ಚಾಣಿಕೆದಾರರು ಮತ್ತು ಬೆಳೆಗಾರರ ನಿಯೋಗದ ಮನವಿ ಸ್ವೀಕರಿಸಿ ಮಾತನಾಡಿದ ಅವರು, ರೇಷ್ಮೆ ಉದ್ದಿಮೆ ನೆಚ್ಚಿಕೊಂಡು ಜೀವನ ನಡೆಸುತ್ತಿರುವ ಜನರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರದಿಂದ ಅಗತ್ಯ ನೆರವು ಮತ್ತು ಸಹಕಾರ ನೀಡಲು ಬದ್ಧರಾಗಿದ್ದು, 10 ದಿನದೊಳಗೆ ರೇಷ್ಮೆ ಉದ್ದಿಮೆ ಅಭಿವೃದ್ಧಿಗಾಗಿ ಮತ್ತು ಉದ್ದಿಮೆ ನೆಚ್ಚಿಕೊಂಡಿರುವ ಜನರ ಸಮಸ್ಯೆ ಆಲಿಸಲು ರೇಷ್ಮೆ ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಹುದ್ದಿಮೆ ಮೇಲ್ದರ್ಜೆಗೇರಿಸಲು ಕ್ರಮ: ರೇಷ್ಮೆ ಉದ್ದಿಮೆಯಲ್ಲಿ ಬೆಳೆಗಾರರು ಮತ್ತು ನೂಲುಬಿಚ್ಚಾಣಿಕೆದಾರರು ಸಹಿತ ಎಲ್ಲರ ಸಮಸ್ಯೆಗಳನ್ನು ಆಲಿಸಿ ಪರಿಹಾರವನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಉದ್ದಿಮೆಯನ್ನು ಮತ್ತಷ್ಟು ಮೇಲ್ದರ್ಜೆಗೇರಿಸಲು ಮತ್ತು ಈ ಉದ್ದಿಮೆಯ ಮೂಲಕ ನಿರುದ್ಯೋಗದ ಸಮಸ್ಯೆ ನಿವಾರಿಸಲು ವಿಶೇಷ ಆದ್ಯತೆ ನೀಡಲಾಗುವುದು ಎಂದ ಮಾಜಿ ಸಿಎಂ, ಈ ಸಂಬಂಧ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಿ ಸೂಕ್ತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಹೇಳಿದರು.

ರಾಜ್ಯ ರೇಷ್ಮೆ ನೂಲು ಬಿಚ್ಚಾಣಿಕೆದಾರರ ಸಂಘದ ಕಾರ್ಯಾಧ್ಯಕ್ಷ ಮೊಹಮ್ಮದ್‌ ಅನ್ವರ್‌ ಮಾತನಾಡಿ, ರಾಜ್ಯದಲ್ಲಿ 27 ಸರ್ಕಾರಿ ರೇಷ್ಮೆ ಗೂಡಿನಮಾರುಕಟ್ಟೆಗಳಿದ್ದು, ಅದರಲ್ಲಿ ಮೊದಲು 150 ರಿಂದ 200 ಟನ್‌ ರೇಷ್ಮೆಗೂಡು ಬರುತ್ತಿತ್ತು. ಟ್ರೇಡರ್‌ಗಳ ಮಧ್ಯಪ್ರವೇಶದಿಂದ ಪ್ರಸ್ತುತ ರೇಷ್ಮೆಗೂಡು ವಹಿವಾಟು 50-60 ಟನ್‌ಗೆ ಕುಸಿದಿದೆ ಎಂದು ವಿವರಿಸಿದರು.

ನೂಲು ಬಿಚ್ಚಾಣಿಕೆದಾರರ ಸಂಖ್ಯೆ ಕ್ಷೀಣ: ರೇಷ್ಮೆಗೂಡು ಮತ್ತು ನೂಲು ಖರೀದಿ ಮಾಡಲು ಮುಕ್ತ ಅವಕಾಶ ಕಲ್ಪಿಸಿದ ಪರಿಣಾಮ ಇಡೀ ಉದ್ದಿಮೆಯನ್ನುನೆಚ್ಚಿಕೊಂಡು ಜೀವನ ನಡೆಸುತ್ತಿರುವ ಲಕ್ಷಾಂತರ ಜನರಬದುಕು ಸಂಕಷ್ಟದಲ್ಲಿ ಸಿಲುಕಿದೆ. ಈ ಹಿಂದೆ 15 ಸಾವಿರಸಂಖ್ಯೆಯಲ್ಲಿದ್ದ ನೂಲು ಬಿಚ್ಚಾಣಿಕೆದಾರರು ಪ್ರಸ್ತುತಆರೇಳು ಸಾವಿರಕ್ಕೆ ಇಳಿದಿದ್ದಾರೆ. ಇದೇ ಪರಿಸ್ಥಿತಿಮುಂದುವರಿದರೆ ಇಡೀ ಉದ್ದಿಮೆ ನೂಲು ಬಿಚ್ಚಾಣಿಕೆದಾರರು ತ್ಯಜಿಸುವ ದಿನಗಳು ದೂರವಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ಇ ಪೇಮೆಂಟ್‌ ಸ್ವಾಗತ: ರೇಷ್ಮೆ ಬೆಳೆಗಾರರಿಗೆ ಸೂಕ್ತ ದರ ಮತ್ತು ಮಾರಾಟದ ವ್ಯವಸ್ಥೆಯನ್ನು ಕಲ್ಪಿಸುವ ಸಲುವಾಗಿಸರ್ಕಾರ ಇ-ಹರಾಜು ಮತ್ತು ಇ ಪೇಮೆಂಟ್‌ ವ್ಯವಸ್ಥೆಜಾರಿಗೊಳಿಸಿರುವುದು ರೀಲರ್ ಸ್ವಾಗತಿಸಿದ್ದಾರೆ. ಆದರೆ,ಈ ವ್ಯವಸ್ಥೆಯಲ್ಲಿ ಕೆಲವೊಂದು ಲೋಪದೋಷಗಳಿದ್ದು,ಸರಿಪಡಿಸುವ ಮೂಲಕ ರೇಷ್ಮೆಗೂಡು ಖರೀದಿಗೆ ಸುಲಭ ವ್ಯವಸ್ಥೆ ಮಾಡಬೇಕೆಂದು ಮನವಿ ಮಾಡಿದರು.

ಅಗತ್ಯ ನೆರವು ನೀಡಲು ಮನವಿ: ರಾಜ್ಯದಲ್ಲಿ 30 ಸಾವಿರ ಕಾಟೇಜ್‌ ಬೇಸಿನ್‌ ಮತ್ತು ಚರಕಗಳಿದ್ದು, ಅದರಲ್ಲಿ 50 ಸಾವಿರ ನೂಲು ಬಿಚ್ಚಾಣಿಕೆದಾರಕಾರ್ಮಿಕರು ಜೀವನ ನಡೆಸುತ್ತಿದ್ದಾರೆ. ರೇಷ್ಮೆ ನೂಲು ಬಿಚ್ಚಾಣಿಕೆದಾರರು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದು, ಅವರ ನೆರವಿಗೆ ಸರ್ಕಾರ ಧಾವಿಸಬೇಕಾಗಿದೆ. ರೇಷ್ಮೆ ಉಪಉತ್ಪನ್ನಗಳಿಗಾಗಿ ಪ್ರತ್ಯೇಕ ಯೋಜನೆಯನ್ನುರೂಪಿಸಿ ಉದ್ಯೋಗ ಅವಕಾಶವನ್ನು ಸೃಷ್ಟಿಸಲು ಅವಕಾಶ ಕಲ್ಪಿಸಬಹುದಾಗಿದೆ. ಜೊತೆಗೆ ನೂಲು ಬಿಚ್ಚಾಣಿಕೆದಾರರ ಆದಾಯ ಹೆಚ್ಚಿಸಬಹುದಾಗಿದೆ ಎಂದು ಮನವಿ ಮಾಡಿ, ರೇಷ್ಮೆಯನ್ನು ಕೃಷಿ ಉತ್ಪನ್ನ ಎಂದು ಪರಿಗಣಿಸಿ ಸೂಕ್ತ ರೀತಿಯ ರಿಯಾಯ್ತಿ ಮತ್ತು ಅಗತ್ಯ ಆರ್ಥಿಕ ನೆರವು ನೀಡಬೇಕೆಂದು ಮನವಿ ಮಾಡಿದರು.

ರೇಷ್ಮೆ ಉದ್ದಿಮೆ ನಂಬಿದವರ ರಕ್ಷಿಸಿ: ರೇಷ್ಮೆ ಬೆಳೆಗಾರರ ಹಿತರಕ್ಷಣಾ ವೇದಿಕೆಯ ರಾಜ್ಯ ಸಂಚಾಲಕ ಮಳ್ಳೂರುಶಿವಣ್ಣ ಮಾತನಾಡಿ, ರೇಷ್ಮೆ ಉದ್ದಿಮೆಯನ್ನುನೆಚ್ಚಿಕೊಂಡು ಲಕ್ಷಾಂತರ ಕುಟುಂಬಗಳು ಜೀವನ ನಡೆಸುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಈಉದ್ದಿಮೆಯನ್ನು ಉಳಿಸಿ ಅಭಿವೃದ್ಧಿಗೊಳಿಸುವ ಮೂಲಕರೇಷ್ಮೆ ಬೆಳೆಗಾರರು ನೂಲು ಬಿಚ್ಚಾಣಿಕೆದಾರರು, ಕೂಲಿಕಾರ್ಮಿಕರ ಹಿತರಕ್ಷಣೆಗೆ ಮುಂದಾಗಬೇಕು ಎಂದು ವಿವರಿಸಿದರು.

ಖಾಲಿ ಹುದ್ದೆಗಳ ಭರ್ತಿ ಮಾಡಿ: ರೇಷ್ಮೆ ಕಾಯ್ದೆ ತಿದ್ದುಪಡಿಯಿಂದ ಖಾಸಗಿ ಮಾರುಕಟ್ಟೆಗಳಿಗೆ ಅವಕಾಶಕಲ್ಪಿಸಿದ್ದರಿಂದ ಬೆಳೆಗಾರರಿಗೆ ತೊಂದರೆಯಾಗಿದ್ದು,ಅದನ್ನು ಕೂಡಲೇ ಪರಿಹಾರ ಕಲ್ಪಿಸಬೇಕೆಂದು ಮನವಿ ಮಾಡಿದರಲ್ಲದೆ, ರಾಜ್ಯದಲ್ಲಿ ರೇಷ್ಮೆ ಇಲಾಖೆಯಲ್ಲಿರುವ2344 ಹುದ್ದೆಗಳು ರದ್ದುಗೊಳಿಸಬೇಕೆಂದು ಹಣಕಾಸು ಇಲಾಖೆ ಮುಂದಾಗಿದೆ. ಅದನ್ನು ಕೂಡಲೇ ಸರ್ಕಾರಕೈ ಬಿಡಬೇಕು, ಖಾಲಿ ಹುದ್ದೆಗಳ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಬೆಂಗಳೂರು ರೇಷ್ಮೆ ಹಿತರಕ್ಷಣಾ ವೇದಿಕೆ ಸಂಚಾಲಕಚೇತನ್‌ಗೌಡ, ಬೆಂಗಳೂರು ಗ್ರಾಮಾಂತರ ಜಿಲ್ಲಾ ರೇಷ್ಮೆಕೃಷಿ ರಕ್ಷಣಾ ವೇದಿಕೆ ಕಾರ್ಯದರ್ಶಿ ಹರೀಶ್‌ ಮತ್ತಿತರರು ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.