ಮಾಣಿಕನಗರದಲ್ಲಿ ಗಾನಸುಧೆ ಹರಿಸಿದ್ದ ಲತಾ

Team Udayavani, Feb 7, 2022, 2:42 PM IST

18latha

ಬೀದರ: ಗಾನ ಸರಸ್ವತಿ ಲತಾ ಮಂಗೇಶ್ಕರ್ ಅವರು ಗಡಿ ನಾಡು ಬೀದರ ಜಿಲ್ಲೆಗೂ ಬಂದು ಹೋಗಿದ್ದರು. ಸಂಗೀತ ಕಲಾವಿದರ ಪಾಲಿಗೆ ಪವಿತ್ರ ಕ್ಷೇತ್ರ ಎನಿಸಿರುವ ಮಾಣಿಕನಗರದ ಮಾಣಿಕಪ್ರಭು ಸಂಸ್ಥಾನಕ್ಕೆ ಭೇಟಿ ನೀಡಿ, ತಮ್ಮ ಸಂಗೀತ ಸುಧೆ ಹರಿಸಿದ್ದರು. ಕಲೆ-ಕಲಾವಿದರನ್ನು ಪೋಷಿಸುತ್ತ ಬಂದಿರುವ ಕಲ್ಯಾಣ ಕರ್ನಾಟಕದ ಇತಿಹಾಸ ಪ್ರಸಿದ್ಧ ಮಾಣಿಕಪ್ರಭು ಸಂಸ್ಥಾನ ಧರ್ಮ ಸಮನ್ವಯತೆಗೆ ಹೆಸರಾಗಿದ್ದು, ಕಲಾಕ್ಷೇತ್ರದ ಮಾತೃತಾಣ ಎನಿಸಿದೆ.

ಸಂಸ್ಥಾನದಲ್ಲಿ ಸಂಗೀತ-ನೃತ್ಯ ಕಲೆ ಪ್ರದರ್ಶಿಸಿದರೆ ಕಲಾ ಬದುಕು ಸಾರ್ಥಕತೆ ಅನುಭವಿಸಿದಂತೆಯೇ ಎಂಬುದು ಕಲಾವಿದರ ನಂಬಿಕೆ. ಹಾಗಾಗಿ ದೊಡ್ಡ ದೊಡ್ಡ ದಿಗ್ಗಜರು ಮಾಣಿಕನಗರಕ್ಕೆ ಬಂದು ಕಲಾ ಸೇವೆ ನೀಡಿ ಹೋಗಿದ್ದಾರೆ. ಅದರಲ್ಲೂ ಗಾನ ಸ್ವರ ಶ್ರೀಮಂತಗೊಳಿಸಿದ ಲತಾ ಮಂಗೇಶ್ಕರ್‌ ಕೂಡ ಒಬ್ಬರೆಂಬುದು ವಿಶೇಷ.

1981ರಲ್ಲಿ ಭೇಟಿ

ಎರಡು ಶತಮಾನಗಳ ಇತಿಹಾಸವುಳ್ಳ ಮಾಣಿಕನಗರವು ದತ್ತ ಪೀಠವಾಗಿದ್ದು, ಗುರು ಪರಂಪರೆ ಅಸ್ತಿತ್ವದಲ್ಲಿದೆ. 1945ರಿಂದ ಪೀಠಾಧಿಪತಿಗಳಾಗಿದ್ದ ಶ್ರೀಸಿದ್ಧರಾಜ್‌ ಮಾಣಿಕ ಪ್ರಭುಗಳು ಸಂಸ್ಥಾನವನ್ನು ಆಧ್ಯಾತ್ಮಿಕ-ಸಾಮಾಜಿಕ ಚಟುವಟಿಕೆಗಳ ಕೇಂದ್ರವಾಗಿ ಪರಿವರ್ತಿಸಿದ್ದಾರೆ. ಭಜನೆ, ಅಭಂಗಗಳನ್ನು ರಚಿಸಿರುವ ಅವರು ಭಾರತೀಯ ಶಾಸ್ತ್ರೀಯ ಸಂಗೀತದಲ್ಲಿ ವಿಶೇಷ ಆಸಕ್ತಿ ಹೊಂದಿದ್ದರು. ಪ್ರಭುಗಳ ಜಯಂತಿಯನ್ನು ಡಿಸೆಂಬರ್‌ನಲ್ಲಿ ಮಹೋತ್ಸವವಾಗಿ ಆಚರಿಸಲಾಗುತ್ತಿದ್ದು, ಪ್ರತಿ ವರ್ಷ ಸಂಗೀತ ದರ್ಬಾರ್‌ ನಡೆಸಿಕೊಂಡು ಬರಲಾಗುತ್ತಿದೆ.

ಈ ದರ್ಬಾರ್‌ದಲ್ಲಿ ಸಂಗೀತ ದಿಗ್ಗಜರಾದ ಭಾರತರತ್ನ ಭೀಮಸೇನ್‌ ಜೋಶಿ, ಉಸ್ತಾದ್‌ ಜಾಕೀರ್‌ ಹುಸೇನ್‌, ಪಂ|ಮಲ್ಲಿಕಾರ್ಜುನ್‌ ಮನ್ಸೂರ್‌, ಅನುರಾಧಾ ಪೌಡ್ವಲ್‌ ಅವರಿಂದ ಹಿಡಿದು ಸಂಗೀತಾ ಕಟ್ಟಿವರೆಗೂ ಖ್ಯಾತನಾಮ ಕಲಾವಿದರು ಪ್ರಭುಗಳ ಸನ್ನಿಧಿಯಲ್ಲಿ ಸಂಗೀತ ಸೇವೆಗೈದಿದ್ದಾರೆ. ಅದರಂತೆ 1981ರಲ್ಲಿ ಲತಾ ಮಂಗೇಶ್ಕರ್‌ ಅವರು ಸಂಸ್ಥಾನಕ್ಕೆ ಬಂದು ಪ್ರಭುಗಳ ದರ್ಶನ ಪಡೆದು ಶ್ರೀ ಸಿದ್ಧರಾಜ್‌ ಪ್ರಭುಗಳ ಸಮ್ಮುಖದಲ್ಲಿ ಗಾನ ಸುಧೆ ಹರಿಸಿದ್ದರು. ಮಹಾರಾಷ್ಟ್ರದ ಶಹಾಜನಿ ಔರಾದನಲ್ಲಿ ದಿ|ಲತಾ ಅವರು ತಮ್ಮ ತಂದೆ ದಿನಾನಾಥ ಮಂಗೇಶ್ಕರ್‌ ಅವರ ಹೆಸರಿನಲ್ಲಿ ಸ್ಥಾಪಿಸಿರುವ ವೈದ್ಯ ಕಾಲೇಜು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಣಿಕ ನಗರಕ್ಕೆ ಭೇಟಿ ನೀಡಿದ್ದು ಸ್ಮರಣೀಯ.

ಭಜನೆ ಪದ ಹಾಡಿದ್ದ ಲತಾ

ಲತಾ ಅವರು ಸಿದ್ಧರಾಜ್‌ ಪ್ರಭುಗಳ ಆಶಯದಂತೆ “ಪಾಯೋಜಿ ಮೈನೆ ರಾಮ ರತನ ಧನ ಪಾಯೋ’, ಶಿವಶಂಕರ ಗಂಗಾಧರ ಗೀತೆ ಮತ್ತು ಮರಾಠಿ ನಾಟ್ಯಗೀತೆ ಸೇರಿ ಐದು ಭಜನೆ ಪದಗಳನ್ನು ಹಾಡಿ ತಮ್ಮ ಭಕ್ತಿ ಸಮರ್ಪಿಸಿದ್ದರು. ಸಂಸ್ಥಾನದಲ್ಲಿನ ಸಂಗೀತ ಪರಂಪರೆ ಮತ್ತು ಕಲೆಯನ್ನು ಪೋಷಿಸುವ ಚಟುವಟಿಕೆಗಳನ್ನು ಕೇಳಿ ಹರ್ಷ ವ್ಯಕ್ತಪಡಿಸಿದ್ದರು.

ಅಂದು ಲತಾ ಅವರ ಸಹೋದರಿ ಮೀನಾ ಮತ್ತು ಸಹೋದರ ಹೃದಯನಾಥ ಮಂಗೇಶ್ಕರ್‌ ಸಹ ಜತೆಗಿದ್ದರು. ಅಷ್ಟೇ ಅಲ್ಲ ಇದಕ್ಕೂ ಮುನ್ನ 1965ರಲ್ಲಿ ಶ್ರೀ ಸಿದ್ಧರಾಜ್‌ ಪ್ರಭುಗಳನ್ನು ಲತಾ ಅವರು ತಮ್ಮ ಮುಂಬಯಿನ “ಪ್ರಭು ಕುಂಜ’ ನಿವಾಸಕ್ಕೆ ಆಹ್ವಾನಿಸಿದ್ದರು ಎನ್ನುತ್ತಾರೆ ಸಂಸ್ಥಾನದ ಕಾರ್ಯದರ್ಶಿಗಳಾದ ಶ್ರೀ ಆನಂದರಾಜ್‌ ಮಾಣಿಕ ಪ್ರಭುಗಳು.

ಭಾರತದ ಗಾನ ಕೋಗಿಲೆ ಎಂದೇ ಪ್ರಸಿದ್ಧಿ ಪಡೆದಿದ್ದ ಲತಾ ಮಂಗೇಶ್ಕರ್‌ ಅವರ ನಿಧನ ಸಂಗೀತ ಜಗತ್ತಿಗೆ ದೊಡ್ಡ ಆಘಾತ. ಲತಾ ಅವರು ಹಾಡಿದರೆ ಸ್ವರಗಳು ದೇವತೆಯ ರೂಪ ಪಡೆಯುತ್ತಿದ್ದವು ಎಂದು ಶ್ರೀ ಸಿದ್ಧರಾಜ್‌ ಪ್ರಭುಗಳು ಹೊಗಳಿದ್ದರು. ನಮ್ಮೆಲ್ಲರ ಪಾಲಿಗೆ ಗಾನ ಸರಸ್ವತಿಯಾಗಿ ಹೃದಯದಲ್ಲಿ ನೆಲೆಸಿದ್ದಾರೆ. ಎಲ್ಲಿವರೆಗೂ ಭೂಮಿಯ ಮೇಲೆ ಸಂಗೀತ, ಹಾಡುಗಾರಿಕೆ ಇರುತದೆಯೋ, ಅಲ್ಲಿಯವರೆಗೂ ಅವರ ಹೆಸರು ಚಿರಸ್ಥಾಯಿಯಾಗಿರುತ್ತದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. -ಶ್ರೀ ಆನಂದರಾಜ್‌ ಮಾಣಿಕಪ್ರಭು, ಕಾರ್ಯದರ್ಶಿ, ಮಾಣಿಕಪ್ರಭು ಸಂಸ್ಥಾನ, ಮಾಣಿಕನಗರ

-ಶಶಿಕಾಂತ ಬಂಬುಳಗ

ಟಾಪ್ ನ್ಯೂಸ್

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

ಗುತ್ತಿಗೆದಾರ ಸಚಿನ್‌ ಕೇಸ್:‌ ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ

4-bidar

Bidar: ಸಚಿನ್ ಆತ್ಮಹತ್ಯೆ ಪ್ರಕರಣ; ನಿಗೂಢ ಸಾವಿನ ತನಿಖೆ, ಮೃತ ಕುಟುಂಬಕ್ಕೆ ಪರಿಹಾರ:ಆಗ್ರಹ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

POlice

Kokkada: ಕಳ್ಳತನ; ಇಬ್ಬರು ಆರೋಪಿಗಳು ವಶಕ್ಕೆ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.