ಸಂಗೀತದಿಂದ ಜೀವನಕ್ಕೆ ಉಲ್ಲಾಸ ಸಾಧ್ಯ
Team Udayavani, Feb 7, 2022, 3:17 PM IST
ಬೀದರ: ಮನಸ್ಸಿಗೆ ಚೈತನ್ಯ ನೀಡಿ, ಜೀವನಕ್ಕೆ ಉಲ್ಲಾಸ ತುಂಬುವ ಶಕ್ತಿ ಸಂಗೀತಕ್ಕಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸುರೇಶ ಚನಶೆಟ್ಟಿ ಹೇಳಿದರು.
ಅಕ್ಕಮಹಾದೇವಿ ಮಹಿಳಾ ಜಾನಪದ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಬುಧವಾರ ತಾಲೂಕಿನ ಕಂಗನಕೋಟ ಗ್ರಾಮದ ಅಕ್ಕಮಹಾದೇವಿ ಮಂದಿರದಲ್ಲಿ ನಡೆದ ಸಂಗೀತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಳ್ಳಿಗಳಲ್ಲಿ ಸಂಗೀತ ಕಾರ್ಯಕ್ರಮ ಏರ್ಪಡಿಸಿ ಮನರಂಜನೆಯ ಜೊತೆಗೆ ಕನ್ನಡ ಭಾಷೆ ಬೆಳೆಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.
ಕಸಾಪ ಜಿಲ್ಲಾ ಕೋಶಾಧ್ಯಕ್ಷ ಶಿವಶಂಕರ ಟೋಕರೆ ಮಾತನಾಡಿ, ಅಕ್ಕಮಹಾದೇವಿ ಮಹಿಳಾ ಸಂಸ್ಥೆ ಉತ್ತಮ ಸಾಂಸ್ಕೃತಿಕ ಚಟುವಟಿಕೆಗಳು ನಡೆಸುತ್ತಿದೆ ಎಂದು ಹೇಳಿದರು.
ಹಿರಿಯ ಕಲಾವಿದ ಶಂಭುಲಿಂಗ ವಾಲ್ದೊಡ್ಡಿ ಮಾತನಾಡಿದರು. ಸಾಹಿತಿ ಓಂಕಾರ ಪಾಟೀಲ, ಗ್ರಾಪಂ ಸದಸ್ಯರಾದ ಅವೀರ ಸಾವಂತ, ಕೃಷ್ಣಮ್ಮ ಪುಂಡಲಿಕ, ಸುರೇಶ ಪಾಟೀಲ ಇದ್ದರು. ಗಣಪತಿ ಶಂಭು ಪ್ರಾಸ್ತಾವಿಕ ಮಾತನಾಡಿದರು. ಗೀತಾ ಭುಳ್ಳಾ ತಂಡದಿಂದ ಸಂಗೀತ, ಪುತಳಾಬಾಯಿ ತಂಡದಿಂದ ಸಂಪ್ರದಾಯಿಕ ಪದ, ನಿರ್ಮಲಾಬಾಯಿ ಶಂಭು ತಂಡದಿಂದ ತತ್ವಪದ, ಶಂಕರಯ್ನಾ ಸ್ವಾಮಿ ತಂಡದಿಂದ ಭಜನೆ ಕಾರ್ಯಕ್ರಮ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
Waqf Issue: ಬೀದರ್ ರೈತ ಸಂಘ, ಬಿಜೆಪಿಯಿಂದ ಬೃಹತ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.