ಮಹಿಳೆ ಸಬಲಳಾದರೆ ಕುಟುಂಬ ಸಶಕ್ತ: ಅಜಿತ ಪ್ರಸಾದ

ಯಾವುದೇ ಉದ್ಯೋಗವಿರಲಿ ಪ್ರಾಮಾಣಿಕತೆ, ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ.

Team Udayavani, Feb 7, 2022, 6:21 PM IST

ಮಹಿಳೆ ಸಬಲಳಾದರೆ ಕುಟುಂಬ ಸಶಕ್ತ: ಅಜಿತ ಪ್ರಸಾದ

ಧಾರವಾಡ: ಮಹಿಳೆ ಸಬಲಳಾದರೆ ಕುಟುಂಬವೇ ಸಶಕ್ತವಾಗುತ್ತದೆ. ಮೊದಲು ಉದ್ಯೋಗಂ ಪುರುಷ ಲಕ್ಷಣಂ ಎಂಬ ಮಾತು ಚಾಲ್ತಿಯಲ್ಲಿತ್ತು. ಆದರೆ ಇಂದು ಪ್ರತಿಯೊಂದು ಕುಟುಂಬದಲ್ಲೂ ಮಹಿಳೆಯರು ಉದ್ಯೋಗ ಮಾಡುತ್ತಿದ್ದು, ಮಹಿಳೆ ಉದ್ಯೋಗ ಮಾಡಿ ಆರ್ಥಿಕವಾಗಿ ಕುಟುಂಬಕ್ಕೆ ಸಹಾಯ ಮಾಡುತ್ತಿದ್ದಾಳೆ ಎಂದು ಜೆಎಸ್ಸೆಸ್‌ ವಿತ್ತಾಧಿಕಾರಿ ಡಾ| ಅಜಿತ ಪ್ರಸಾದ ಹೇಳಿದರು.

ವಿದ್ಯಾಗಿರಿಯ ಜೆಎಸ್ಸೆಸ್‌ ಆವರಣದಲ್ಲಿ ರಾಪಿಡ್‌ ಸಂಸ್ಥೆ, ಜೆಎಸ್ಸೆಸ್‌ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆ, ಜಿಲ್ಲಾ ಕೌಶಲ್ಯಾಭಿವೃದ್ಧಿ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಮತ್ತು ರೋಟರಿ ಕ್ಲಬ್‌ ಸೆಂಟ್ರಲ್‌-ಹುಬ್ಬಳ್ಳಿ ಆಶ್ರಯದಲ್ಲಿ ಮಹಿಳೆಯರಿಗಾಗಿ ಆಯೋಜಿಸಿದ್ದ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

ಯಾವುದೇ ದುಶ್ಚಟಗಳಿಲ್ಲದೆ ಹಣ ಉಳಿತಾಯ ಮಾಡುವ ಪ್ರವೃತ್ತಿ ಮಹಿಳೆಯಲ್ಲಿ ಇರುವುದರಿಂದ, ಕುಟುಂಬ ಆರ್ಥಿಕವಾಗಿ, ಸಾಮಾಜಿಕ ಪ್ರಗತಿ ಸಾಧಿಸುತ್ತಿದೆ. ಪ್ರತಿಯೊಂದು ಕಂಪನಿಯು ಮಹಿಳೆಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುತ್ತವೆ. ಯಾವುದೇ ಉದ್ಯೋಗವಿರಲಿ ಪ್ರಾಮಾಣಿಕತೆ, ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ. ಉತ್ತರ ಕರ್ನಾಟಕದ ವಿದ್ಯಾರ್ಥಿಗಳು ಸಂಕೋಚ ಸ್ವಭಾವದಿಂದ ಹೊರಬಂದು ತಮ್ಮಲ್ಲಿನ ಕೌಶಲ್ಯಗಳನ್ನು ಹೊರ ಹಾಕಬೇಕು ಎಂದರು.

ಬೆಂಗಳೂರಿನ ಕಲೆ-ನೆಲೆ ಸಂಸ್ಥೆಯ ಸಂಸ್ಥಾಪಕ ಜಾಹ್ನವಿ ಕುಲಕರ್ಣಿ ಮಾತನಾಡಿ, ಯಾವುದೇ ಕೆಲಸವನ್ನು ಅತ್ಯಂತ ಶ್ರದ್ಧೆಯಿಂದ ನಿರ್ವಹಿಸಿದಲ್ಲಿ ಯಶಸ್ಸು ಸಾಧ್ಯ. ವಿದ್ಯಾರ್ಹತೆ ಒಂದೇ ಮಾನದಂಡವಲ್ಲ. ಬದಲಾಗಿ ಕೌಶಲ್ಯವೇ ನಿರ್ಣಾಯಕ ಎಂದು ಹೇಳಿದರು.

ಕ್ಲಾಸಿಕ್‌ ಎಜುಕೇಶನ್‌ ಗ್ರೂಪ್‌ನ ಮುಖ್ಯಸ್ಥ ಲಕ್ಷ್ಮಣ ಉಪ್ಪಾರ ಮಾತನಾಡಿ, ಸ್ವ-ಸಾಮರ್ಥ್ಯದಿಂದ ಕೆಲಸ ಪಡೆದುಕೊಂಡು ಅರ್ಹತೆ ಸಾಬೀತುಪಡಿಸಬೇಕು. ಕೇವಲ ಸಂಬಳಕ್ಕಾಗಿ ಕೆಲಸ ಮಾಡಬೇಡಿ. ಆತ್ಮ ಸಂತೋಷವಿರಲಿ ಎಂದರು. ಉದ್ಯೋಗದಾತರ ಪರವಾಗಿ ಸೇಫ್‌ ಹ್ಯಾಂಡ್ಸ್‌ ಶ್ರಾವಣಿ ಹಾಗೂ ವಾಲ್‌ ಚಂದ್‌ ಇಂಡಸ್ಟ್ರೀಜ್‌ನ ಲಕ್ಷ್ಮೀ ಅನಿಸಿಕೆಗಳನ್ನು ಹಂಚಿಕೊಂಡರು.

ಶ್ರೇಯಾ ದೇಶಪಾಂಡೆ ಪ್ರಾರ್ಥಿಸಿದರು. ಮಹಾವೀರ ಉಪಾಧ್ಯೆ ಸ್ವಾಗತಿಸಿದರು. ಮಾಳವಿಕಾ ಕಡಕೋಳ ಪ್ರಾಸ್ತಾವಿಕ ಮಾತನಾಡಿದರು. ಡಾ| ಅಜಿತ್‌ ಪ್ರಸಾದ್‌, ಮಹಾವೀರ ಉಪಾಧ್ಯೆ ಹಾಗೂ ಮಾಳವಿಕಾ ಕಡಕೋಳ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ಕೌಶಲ್ಯಾಭಿವೃದ್ಧಿ ಅ ಧಿಕಾರಿ ಚಂದ್ರಪ್ಪ, ಎಸ್‌ಕೆಡಿಆರ್‌ಡಿಪಿಯ ಮಮತಾ ಭಟ್‌, ರೋಟರಿ ಕ್ಲಬ್‌ ಹುಬ್ಬಳ್ಳಿ ಸೆಂಟ್ರಲ್‌ನ ಸಂಜನಾ ಮಹೇಶ್ವರಿ, ಸೂರಜ್‌ ಜೈನ್‌ ಇದ್ದರು. ಮಾಯಾ ರಾಮನ್‌ ನಿರೂಪಿಸಿದರು. ಸಹನಾ ದೇಶಪಾಂಡೆ ವಂದಿಸಿದರು.

85 ಅಭ್ಯರ್ಥಿಗಳಿಗೆ ಆದೇಶ ಪತ್ರ
ಉದ್ಯೋಗ ಮೇಳದಲ್ಲಿ 45 ಕಂಪನಿಗಳು 6500ಕ್ಕೂ ಹೆಚ್ಚು ವಿವಿಧ ರೀತಿಯ ಹುದ್ದೆಗಳಿಗೆ ಸಂದರ್ಶನ ನಡೆಸಿದವು. ಒಟ್ಟು 2000 ಮಹಿಳಾ ಅಭ್ಯರ್ಥಿಗಳು ಹೆಸರನ್ನು ನೋಂದಾಯಿಸಿಕೊಂಡಿದ್ದರು. ಈ ಪೈಕಿ 979 ಅಭ್ಯರ್ಥಿಗಳು ಕೊನೆಯ ಸುತ್ತಿನ ಸಂದರ್ಶನಕ್ಕೆ ಆಯ್ಕೆಯಾದರು. 85 ಮಹಿಳಾ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ಆದೇಶ ಪತ್ರಗಳನ್ನು ನೀಡಲಾಯಿತು.

ಟಾಪ್ ನ್ಯೂಸ್

BGT 2024: Gill Injured: Lucky for Kannadiga in third position

BGT 2024: ಗಾಯಗೊಂಡ ಗಿಲ್:‌ ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

7

Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ

BGT 2024: Gill Injured: Lucky for Kannadiga in third position

BGT 2024: ಗಾಯಗೊಂಡ ಗಿಲ್:‌ ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

6

Malpe ಬೀಚ್‌ ಸ್ವಚ್ಛತೆ: 3 ದಿನದಲ್ಲಿ 26 ಲೋಡ್‌ ಕಸ ಸಂಗ್ರಹ

5

Sasthan: ಪಾಂಡೇಶ್ವರ; ಲಿಂಗ ಮುದ್ರೆ ಕಲ್ಲು ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.