ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 5030 ಕೋಟಿ ರೂ. ಅನುದಾನಕ್ಕಾಗಿ ಮುಖ್ಯಮಂತ್ರಿ ಮನವಿ
Team Udayavani, Feb 7, 2022, 7:53 PM IST
ನವದೆಹಲಿ : ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಕೇಂದ್ರ ಪುರಸ್ಕೃತ ಯೋಜನೆಗಳಡಿ ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗಕ್ಕೆ 5030 ಕೋಟಿ ರೂ. ಅನುದಾನ ಒದಗಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದರು.
ಇತ್ತೀಚೆಗೆ ತಿರುಪತಿಯಲ್ಲಿ ನಡೆದ ದಕ್ಷಿಣ ವಲಯ ಮಂಡಳಿ ಸಭೆಯಲ್ಲಿ ಚರ್ಚಿಸಿದಂತೆ, ಆಂಧ್ರ ಪ್ರದೇಶ ರಾಜ್ಯವು ತನ್ನ ಹಿಂದುಳಿದ ಜಿಲ್ಲೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಒದಗಿಸುವಂತೆ ಮನವಿ ಮಾಡಿತ್ತು. ಅಂತೆಯೇ ಕರ್ನಾಟಕ ರಾಜ್ಯದಲ್ಲಿಯೂ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ದೇಶದಲ್ಲಿಯೇ ಹಿಂದುಳಿದ ಜಿಲ್ಲೆಗಳ ಸಾಲಿನಲ್ಲಿ ಸೇರಿವೆ. 371(ಜೆ) ವಿಧಿಯನ್ವಯ ಸಂವಿಧಾನ ತಿದ್ದುಪಡಿಯ ಮೂಲಕ ಈ ಭಾಗಕ್ಕೆ ವಿಶೇಷ ಸ್ಥಾನ ನೀಡಲಾಗಿದ್ದು, ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಒದಗಿಸಲಾಗಿದೆ. ಆದರೆ ಈ ಭಾಗವು ಅಭಿವೃದ್ಧಿಯಲ್ಲಿ ಬಹಳ ಹಿಂದುಳಿದಿರುವುದರಿಂದ ವಿಶೇಷ ಗಮನ ನೀಡುವ ಅಗತ್ಯವಿದೆ. ನೀತಿ ಆಯೋಗದ ಬಹು ಆಯಾಮದ ಬಡತನ ಸೂಚ್ಯಂಕದಲ್ಲಿಯೂ ಈ ಜಿಲ್ಲೆಗಳು ಹಿಂದುಳಿದಿರುವುದರಿಂದ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿವಿಧ ಕೇಂದ್ರ ಪುರಸ್ಕೃತ ಯೋಜನೆಗಳಡಿ 5030 ಕೋಟಿ ರೂ. ಅನುದಾನ ಒದಗಿಸಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.
ಇದನ್ನೂ ಓದಿ : ಜಿ.ಎಸ್.ಟಿ. ಪರಿಹಾರ ಅವಧಿ ವಿಸ್ತರಣೆಗೆ ಮುಖ್ಯಮಂತ್ರಿ ಮನವಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.