ಬಿಜೆಪಿ ಶಾಸಕನಿಂದ ಲೈಂಗಿಕ ದೌರ್ಜನ್ಯ: ಮಹಿಳೆ ದೂರು
ಮಹಿಳೆಯಿಂದ ಬ್ಲ್ಯಾಕ್‌ಮೇಲ್: ಶಾಸಕ ರಾಜ್‌ಕುಮಾರ್ ಆರೋಪ
Team Udayavani, Feb 8, 2022, 6:45 AM IST
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯೊಬ್ಬರು ಸುಳ್ಳುಸುದ್ದಿ ಹರಿಬಿಟ್ಟು 2 ಕೋಟಿ ರೂ.ಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಲಬುರಗಿಯ ಸೇಡಂ ವಿಧಾನಸಭಾ ಕ್ಷೇತ್ರದ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ್ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಈ ಸಂಬಂಧ ಮಹಿಳೆ ಸಹಿತ ನಾಲ್ವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಮತ್ತೂಂದೆಡೆ ಮಹಿಳೆಯು ಸೋಮವಾರ ತಮ್ಮ ಪರ ವಕೀಲ ಕೆ.ಎನ್. ಜಗದೀಶ್ ಜತೆ ಹೆಚ್ಚುವರಿ ಪೊಲೀಸ್ ಆಯುಕ್ತ ಸುಬ್ರಹ್ಮಣೇಶ್ವರ್ ರಾವ್ ಅವರಿಗೆ ದೂರು ನೀಡಿದ್ದು, ಶಾಸಕರ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸುವಂತೆ ಮನವಿ ಮಾಡಿದ್ದಾರೆ.
ಅದಕ್ಕೂ ಮೊದಲು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಹಿಳೆ, ಶಾಸಕ ರಾಜಕುಮಾರ್ ಪಾಟೀಲ್ ತನ್ನ ಜತೆ ದೈಹಿಕ ಸಂಬಂಧ ಬೆಳೆಸಿದ ಪರಿಣಾಮ ನನಗೆ 14 ವರ್ಷದ ಮಗನಿದ್ದಾನೆ. ಆತನಿಗೆ ಅವರು ತಂದೆಯ ಸ್ಥಾನ ಕೊಟ್ಟು ಜೀವನಾಂಶ ನೀಡಬೇಕೆಂದು ಆಗ್ರಹಿಸಿದ್ದಾರೆ.
ರವಿವಾರ ಬೆಳಗ್ಗೆ 7 ಗಂಟೆಗೆ 8ರಿಂದ 10 ಮಂದಿ ಪೊಲೀಸರು ಬಂದು ನನ್ನನ್ನು ವಿಧಾನಸೌಧ ಪೊಲೀಸ್ ಠಾಣೆಗೆ ಕರೆದೊಯ್ದರು. ಬಳಿಕ ವಿಜಯಕುಮಾರ್ ಎಂಬವರು ಹಾಗೂ ಪೊಲೀಸರು, ಕಾಂಗ್ರೆಸ್ ಪಕ್ಷದವರು ರಾಜಕುಮಾರ್ ಪಾಟೀಲ್ ವಿರುದ್ಧ ಆರೋಪ ಮಾಡುವಂತೆ ಪ್ರಚೋದನೆ ನೀಡಿ ಈ ರೀತಿ ಆರೋಪ ಮಾಡಿಸುತ್ತಿದ್ದಾರೆ ಎಂದು ಪತ್ರದಲ್ಲಿ ಬರೆದು ಸಹಿ ಹಾಕಿಕೊಡಿ. ಈ ರೀತಿ ಪತ್ರದಲ್ಲಿ ಬರೆದು ಸಹಿ ಮಾಡಿಕೊಟ್ಟರೇ ನಿನಗೂ ಅನ್ಯಾಯವಾಗದಂತೆ ಸೆಟ್ಲಮೆಂಟ್ ಮಾಡಿಸಿಕೊಡಿಸುತ್ತೇವೆ’ ಎಂದು ಹಿಂಸೆ ನೀಡಿದ್ದರು. ನನ್ನ ಮೊಬೈಲನ್ನೂ ವಶಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.
ಇದನ್ನೂ ಓದಿ:ಜೆಎನ್‌ಯುಗೆ ಶಾಂತಿ ಪಂಡಿತ್ ಕುಲಪತಿ; ಇದೇ ಮೊದಲ ಬಾರಿಗೆ ಮಹಿಳಾ ಕುಲಪತಿ ನೇಮಕ
ಶಾಸಕರ ದೂರಿನಲ್ಲಿ ಏನಿದೆ?
ಕಲುಬುರಗಿಯ ಮಹಿಳೆ ಹಾಗೂ ಆಕೆಯ ಪತಿ 2009 ರಲ್ಲಿ ಮೊದಲಿಗೆ ಪರಿಚಯವಾಗಿದ್ದು, 2013ರಲ್ಲಿ ಜಮೀನು ವ್ಯಾಜ್ಯದ ಇತ್ಯರ್ಥಕ್ಕೆ ದಂಪತಿ ನನ್ನ ಸಹಾಯ ಪಡೆದುಕೊಂಡಿದ್ದರು. ಅನಂತರ ಅವರ ಪುತ್ರನನ್ನು ಶಾಲೆಗೆ ದಾಖಲಿಸಲು ಸಹಾಯ ಪಡೆದಿದ್ದರು. ಆದರೆ, ಮಹಿಳೆಯು 2018ರಲ್ಲಿ ಏಕಾಏಕಿ ಫೇಸ್‌ಬುಕ್ ಮೆಸೆಂಜರ್ ಮೂಲಕ ಮೊದಲ ಬಾರಿಗೆ ಸುಳ್ಳು ಆರೋಪ ಮಾಡಿ ಸಂದೇಶ ಕಳುಹಿಸಿದ್ದರು.
ಅದೇ ವರ್ಷ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ನನ್ನ ವಿರುದ್ಧ ದೂರು ನೀಡುವುದಾಗಿ ಬೆದರಿಕೆ ಹಾಕಿ, ಯಾವುದೇ ದೂರನ್ನು ನೀಡದೆ ಹಣಕ್ಕೆ ಬೇಡಿಕೆಯಿಟ್ಟಿದ್ದರು. 2021ರ ಮಾರ್ಚ್‌ನಿಂದಲೂ ಸುಮಾರು 6 ತಿಂಗಳ ಕಾಲ ತನ್ನನ್ನು ಭೇಟಿಯಾಗುವಂತೆ ಆಕೆ ನನ್ನನ್ನು ಒತ್ತಾಯಿಸುತ್ತಿದ್ದಾರೆ. ಕೋರಿಕೆಯಂತೆ ಶಾಂಗ್ರಿಲಾ ಹೊಟೇಲ್‌ನಲ್ಲಿ ನನ್ನ ಪತ್ನಿಯ ಜತೆ ತೆರಳಿ ಆಕೆಯನ್ನು ಭೇಟಿಯಾಗಿದ್ದೆ.
ಈ ವೇಳೆ ನನ್ನನಿಂದಲೇ ಮಗುವಾಗಿದ್ದು, ಅದನ್ನು ನೋಡಿಕೊಳ್ಳಲು 2 ಕೋಟಿ ರೂ. ನೀಡಬೇಕು ಎಂದು ಒತ್ತಾಯಿಸಿದ್ದಳು. ಅದನ್ನು ನಾನು ಹಾಗೂ ಪತ್ನಿ ವಿರೋಧಿಸಿದ್ದೆವು. ಅನಂತರ ಮತ್ತೂಮ್ಮೆ ಸಂದೇಶ ಕಳುಹಿಸಿ ಸರಕಾರದ ಮುಖ್ಯ ಹುದ್ದೆಯಲ್ಲಿರುವವರ ಗಮನ ಸೆಳೆದು ನನ್ನ ಗೌರವಕ್ಕೆ ಧಕ್ಕೆ ತರುವುದಾಗಿ ಬೆದರಿಸಿದ್ದಳು. ಆಕೆಯ ಪರಿಚಯಸ್ಥರಿಂದ ಕರೆ ಮಾಡಿಸಿ 2 ಕೋಟಿ ರೂ. ನೀಡುವಂತೆ ಒತ್ತಾಯಿಸಿದ್ದಳು. ನೀಡದಿದ್ದರೆ ಕೊಲೆ ಮಾಡಿಸುವುದಾಗಿ ಜೀವ ಬೆದರಿಕೆ ಹಾಕಿದ್ದಳು. ಅಲ್ಲದೇ, ನನ್ನ ಮೇಲೆ ಸುಳ್ಳು ಆರೋಪಗಳನ್ನು ಟ್ವೀಟ್ ಮಾಡಿ ಅದನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೂ ಟ್ಯಾಗ್ ಮಾಡಿದ್ದಳು. ಈ ಸಂಬಂಧ ಕಾನೂನು ಕ್ರಮಕೈಗೊಳ್ಳುವಂತೆ ಶಾಸಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ನಾನು ಯಾವುದೇ ತಪ್ಪು ಮಾಡಿಲ್ಲ. ಜನರಿಗಾಗಿ, ದೇಶಕ್ಕಾಗಿ ದುಡಿಯುವ ನನ್ನಂಥವರ ಮೇಲೆ ಆರೋಪ ಸರಿಯಲ್ಲ.
-ರಾಜಕುಮಾರ ಪಾಟೀಲ್ ತೇಲ್ಕೂರ್ ,
ಸೇಡಂ ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.