ಪದವಿ ಪರೀಕ್ಷೆಗೆ ಎದುರಾಗಿದೆ ಅನಿಶ್ಚಿತತೆ! ಮುಗಿಯದ ಪಠ್ಯ; ಕಾಲೇಜು ವಿದ್ಯಾರ್ಥಿಗಳಿಗೆ ಸಂಕಷ್ಟ

Team Udayavani, Feb 8, 2022, 6:25 AM IST

ಪದವಿ ಪರೀಕ್ಷೆಗೆ ಎದುರಾಗಿದೆ ಅನಿಶ್ಚಿತತೆ! ಮುಗಿಯದ ಪಠ್ಯ; ಕಾಲೇಜು ವಿದ್ಯಾರ್ಥಿಗಳಿಗೆ ಸಂಕಷ್ಟ

ಮಂಗಳೂರು: ಸರಕಾರಿ ಪದವಿ ಕಾಲೇಜುಗಳಲ್ಲಿ ಉಪನ್ಯಾಸಕರ ನೇಮಕಾತಿ ವಿಳಂಬ ಹಾಗೂ ಅತಿಥಿ ಉಪನ್ಯಾಸಕರ ಪ್ರತಿಭಟನೆಯ ಬಿಸಿ ಇದೀಗ ವಿದ್ಯಾರ್ಥಿಗಳ ಪರೀಕ್ಷೆಗೆ ತಟ್ಟಲಿದ್ದು, ಅನಿಶ್ಚಿತತೆ ಕಾಡಲಾರಂಭಿಸಿದೆ.
ಸರಕಾರಿ ಕಾಲೇಜುಗಳಲ್ಲಿ ಪಾಠವೇ ಮುಗಿದಿಲ್ಲ; ಆದರೆ ಪರೀಕ್ಷೆಗೆ ತಯಾರಿ ನಡೆಸುವ ಅನಿವಾರ್ಯ ವಿದ್ಯಾರ್ಥಿಗಳದ್ದು. ಒಂದು ವೇಳೆ ಈ ಕಾರಣಕ್ಕೆ ಪರೀಕ್ಷೆಯನ್ನು ಮುಂದೂಡಿದರೆ, ಪಠ್ಯ ಬಹುತೇಕ ಪೂರ್ಣವಾಗಿರುವ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೆ ಅಡಕತ್ತರಿಯಲ್ಲಿ ಸಿಲುಕಿದಂತಾಗಲಿದ್ದಾರೆ.

ಸರಕಾರಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಿಗೆ ಸಂಬಂಧಿಸಿದಂತೆ ಶೇ. 75ಕ್ಕೂ ಅಧಿಕ ಪಠ್ಯ ಬೋಧನೆಗೆ ಬಾಕಿ ಉಳಿದಿವೆ. ಆದರೆ ವಿ.ವಿ. ವ್ಯಾಪ್ತಿಯ ಖಾಸಗಿ ಕಾಲೇಜುಗಳಲ್ಲಿ ಶೇ. 90ಕ್ಕೂ ಅಧಿಕ ಪಠ್ಯ ಬೋಧನೆ ಪೂರ್ಣವಾಗಿದ್ದು, ಪರೀಕ್ಷೆಗೆ ತಯಾರಿಯೂ ನಡೆಯುತ್ತಿದೆ. ಇದು ಪರೀಕ್ಷೆ ಪ್ರಕ್ರಿಯೆಗೆ ಬಹುದೊಡ್ಡ ಸವಾಲು ತಂದಿರಿಸಿದೆ.
ಮಂಗಳೂರು ವಿ.ವಿ.ಯಲ್ಲಿ ಮಾ. 5ಕ್ಕೆ ಈ ಸಾಲಿನ ಶೈಕ್ಷಣಿಕ ಕ್ಯಾಲೆಂಡರ್‌ ಅಂತ್ಯಗೊಳ್ಳಲಿದೆ. ವಿ.ವಿ. ವ್ಯಾಪ್ತಿಯಲ್ಲಿ 38 ಸರಕಾರಿ ಕಾಲೇಜುಗಳಿದ್ದು, ಉಳಿದ ಶೇ. 75ರಷ್ಟು ಖಾಸಗಿ ಕಾಲೇಜುಗಳು. ಇನ್ನು ಒಂದು ತಿಂಗಳೊಳಗೆ ಖಾಸಗಿ ಕಾಲೇಜುಗಳಲ್ಲಿ ಎಲ್ಲ ಪಠ್ಯ ಪೂರ್ಣವಾಗುವ ನಿರೀಕ್ಷೆಯಿದೆ. ಆದರೆ ಸರಕಾರಿ ಕಾಲೇಜಿನಲ್ಲಿ ಪಠ್ಯ ಮುಗಿಯದ ಕಾರಣ ಶೈಕ್ಷಣಿಕ ವರ್ಷವನ್ನು ಮುಂದೂಡುವಂತೆ ಆಗ್ರಹಿಸಿ ಕೆಲವು ಕಾಲೇಜಿನವರು ವಿ.ವಿ.ಗೆ ಮನವಿ ಮಾಡಿದ್ದಾರೆ.
ಅತಿಥಿ ಉಪನ್ಯಾಸಕರ ಹಿತರಕ್ಷಣ ಸಮಿತಿ ದ.ಕ. ಜಿಲ್ಲಾಧ್ಯಕ್ಷ ಧೀರಜ್‌ ಕುಮಾರ್‌ “ಉದಯವಾಣಿ’ ಜತೆಗೆ ಮಾತನಾಡಿ, ಸರಕಾರದ ನೀತಿಯಿಂದಾಗಿ ಇಂದು ವಿದ್ಯಾರ್ಥಿಗಳ ಪರೀಕ್ಷೆ ವಿಚಾರ ಅನಿಶ್ಚಿತವಾಗಿದೆ. ಅತಿಥಿ ಉಪನ್ಯಾಸಕರ ಕೆಲಸ ಕಿತ್ತುಕೊಂಡು ಅನ್ಯಾಯ ಮಾಡುತ್ತಿರುವುದು ಸರಿಯಲ್ಲ. ಆದರೂ ಶೈಕ್ಷಣಿಕ ಅವಧಿ ವಿಸ್ತರಿಸಿದರೆ ಬಾಕಿಯಾದ ಪಠ್ಯ ಪೂರ್ಣಗೊಳಿಸಲು ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದ್ದಾರೆ.

ಶೇ. 25 ಪಠ್ಯ ಕಡಿತ?
ಪ್ರಸಕ್ತ ಶೈಕ್ಷಣಿಕ ಕ್ಯಾಲೆಂಡರನ್ನು ಮುಂದೂಡಲು ಸದ್ಯಕ್ಕೆ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಮನಸ್ಸಿಲ್ಲ. ಒಂದು ವೇಳೆ ಕಷ್ಟವಾದರೆ ಶೇ. 25ರಷ್ಟು ಪಠ್ಯ ಕಡಿತ ಮಾಡಿಯಾದರೂ ನಿಗದಿತ ದಿನಾಂಕ ದಲ್ಲೇ ಪರೀಕ್ಷೆ ಮಾಡಲೇ ಬೇಕು ಎಂಬ ಉತ್ಸಾಹದಲ್ಲಿದೆ. ಇದೇ ಸಲಹೆಯನ್ನು ಸರಕಾರಕ್ಕೆ ನೀಡಿದೆ. ಮುಂದೇನು? ಎಂಬ ಪ್ರಶ್ನೆಗೆ ಉತ್ತರ ಸಿಗಬೇಕಿದೆ.

ಇದನ್ನೂ ಓದಿ:ಜೆಎನ್‌ಯುಗೆ ಶಾಂತಿ ಪಂಡಿತ್‌ ಕುಲಪತಿ; ಇದೇ ಮೊದಲ ಬಾರಿಗೆ ಮಹಿಳಾ ಕುಲಪತಿ ನೇಮಕ

ಎಲ್ಲ ವಿ.ವಿ.ಗಳಿಗೂ ಏಕಸೂತ್ರದ ವೇಳಾಪಟ್ಟಿ?
ಕಾಲೇಜು ಪರೀಕ್ಷೆಯ ಅನಿಶ್ಚಿತತೆ ಎದುರಾಗುವ ಬಗ್ಗೆ ಎಚ್ಚೆತ್ತುಕೊಂಡಿರುವ ಸರಕಾರ ರಾಜ್ಯದ 23 ವಿ.ವಿ.ಗಳ ಜತೆಗೆ ಪ್ರಥಮ ಹಂತದ ಸಭೆ ನಡೆಸಿದೆ. ಪ್ರಸ್ತುತ ಸರಕಾರಿ ಕಾಲೇಜಿನ ಪಠ್ಯ ಪೂರ್ಣವಾಗದ ಕಾರಣ ಮುಂದೇನು ಮಾಡಬಹುದು ಎಂಬ ಬಗ್ಗೆ ಚರ್ಚಿಸಲಾಗಿದೆ. ಇದರಂತೆ ಎಲ್ಲ ವಿ.ವಿ.ಗಳು ತಾವು ನಿಗದಿ ಮಾಡಿದ ಪರೀಕ್ಷಾ ವೇಳಾಪಟ್ಟಿಯ ವಿವರವನ್ನು ಸರಕಾರಕ್ಕೆ ಸಲ್ಲಿಸಲಿವೆ. ಅದರ ಆಧಾರದಲ್ಲಿ ರಾಜ್ಯಾದ್ಯಂತ ಎಲ್ಲ ವಿ.ವಿ. ವ್ಯಾಪ್ತಿಗೆ ಏಕಸೂತ್ರದಂತೆ ಹೊಸ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ಸರಕಾರದ
ತೀರ್ಮಾನದಂತೆ ಕ್ರಮ
ಮಾ. 5ಕ್ಕೆ ಮಂಗಳೂರು ವಿ.ವಿ. ವ್ಯಾಪ್ತಿಯಲ್ಲಿ ಈ ಸಾಲಿನ ಶೈಕ್ಷಣಿಕ ಕ್ಯಾಲೆಂಡರ್‌ ಅಂತ್ಯಗೊಳ್ಳಲಿದೆ. ಖಾಸಗಿ ಕಾಲೇಜುಗಳಲ್ಲಿ ಈಗಾಗಲೇ ಬಹುತೇಕ ಪಠ್ಯ ಪೂರ್ಣಗೊಂಡಿದ್ದರೆ ಸರಕಾರಿ ಕಾಲೇಜುಗಳಲ್ಲಿ ಬಾಕಿಯಿದೆ. ಆದ್ದರಿಂದ ಶೇ. 25ರಷ್ಟು ಪಠ್ಯ ಕಡಿತ ಮಾಡಿಯಾದರೂ ಪರೀಕ್ಷೆ ನಡೆಸುವ ಬಗ್ಗೆ ಸರಕಾರಕ್ಕೆ ವಿವರ ನೀಡಲಾಗಿದೆ. ಸರಕಾರದ ತೀರ್ಮಾನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು.
-  ಪ್ರೊ| ಪಿ.ಎಸ್‌. ಯಡಪಡಿತ್ತಾಯ,
ಮಂಗಳೂರು ವಿ.ವಿ. ಕುಲಪತಿ

-ದಿನೇಶ್‌ ಇರಾ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Srinivasa Hospital: 90 ವರ್ಷದ ಮಹಿಳೆಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

Mangaluru: ಬ್ಯಾರಿ ಅಭಿವೃದ್ಧಿ ನಿಗಮದ ಸಾಧಕ-ಬಾಧಕ ಚರ್ಚೆ ಅಗತ್ಯ: ಸ್ಪೀಕರ್‌ ಖಾದರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.