![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 8, 2022, 9:15 PM IST
ಬೆಂಗಳೂರು: ಮನೋಹರ್ ಪರಿಕ್ಕರ್ ಕಂಡಿದ್ದ ಸುವರ್ಣ ಗೋವಾದ ಕನಸನ್ನು ನನಸು ಮಾಡಿ, ಗೋಲ್ಡನ್ ಗೋವಾ ನಿರ್ಮಾಣ ಮಾಡುವುದೇ ಬಿಜೆಪಿ ಗುರಿಯಾಗಿದೆ ಎಂದು ಪಶು ಸಂಗೋಪನೆ ಮತ್ತು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಹೇಳಿದರು.
ಗೋವಾ ರಾಜ್ಯದ ಕಲ್ಲಂಗೂಟ್ ಮತ್ತು ವಾಸ್ಕೋ ವಿಧಾನಸಭಾ ಚುನಾವಣಾ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸಿದ ಸಚಿವ ಪ್ರಭು ಚವ್ಹಾಣ್, ಬಿಜೆಪಿಯು ಗೋವಾದಲ್ಲಿ ಅಭಿವೃದ್ಧಿ ಪರ್ವಕ್ಕೆ ಚಾಲನೆ ನೀಡಿದೆ. ಗೋವಾ ಸಮಗ್ರ ಅಭಿವೃದ್ಧಿಯೇ ಪ್ರಧಾನಿಮಂತ್ರಿ ನರೇಂದ್ರ ಮೋದಿ ಅವರ ಗುರಿಯಾಗಿದೆ ಎಂದರು.
ಈ ಹಿಂದೆ ಬಿಜೆಪಿ ನೀಡಿದ್ದ ಭರವಸೆಗಳನ್ನು ಈಡೇರಿಸಿದೆ. ಗೋವಾ ಜಗತ್ತಿನ ಅತಿ ದೊಡ್ಡ ಪ್ರವಾಸಿ ತಾಣವನ್ನಾಗಿ ರೂಪಿಸಲು ಬಿಜೆಪಿ ಶ್ರಮಿಸಲಿದೆ ಎಂದು ತಿಳಿಸಿದರು.
ಗೋವಾ ರಾಜ್ಯದ ಅಭಿವೃದ್ಧಿ, ಗೋವಾ ಕನ್ನಡಿಗರ ರಕ್ಷಣೆ ಹಾಗೂ ಸರ್ಕಾರದ ಸವಲತ್ತುಗಳನ್ನು ಒದಗಿಸುವಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಯಶಸ್ವಿಯಾಗಿದೆ. ಗೋವಾ ಕನ್ನಡಿಗರ ಅಭಿವೃದ್ಧಿಗೆ ಬದ್ಧವಾಗಿರುವ ಬಿಜಿಪಿ ಪಕ್ಷದ ಅಭ್ಯರ್ಥಿಗಳಿಗೆ ಮತ ಚಲಾಯಿಸುವಂತೆ ಪ್ರಭು ಚವ್ಹಾಣ್ ಇದೇ ವೇಳೆ ಕರೆ ನೀಡಿದರು.
ಇದನ್ನೂ ಓದಿ:ಸೋಂಕಿನ ಸಂಖ್ಯೆ ಶೇ. 5.1ಕ್ಕೆ ಇಳಿಕೆ : ರಾಜ್ಯಾದ್ಯಂತ 4,452 ಮಂದಿಗೆ ಪಾಸಿಟಿವ್
ಮುಖ್ಯಮಂತ್ರಿ ಪ್ರಮೊದ್ ಸಾವಂತ್ ಗೋವಾ ರಾಜ್ಯವನ್ನು ಇಡೀ ವಿಶ್ವವೇ ತನ್ನತ್ತ ತಿರುಗಿ ನೋಡುವಂತೆ ಅಭಿವೃದ್ಧಿ ಪಥದತ್ತ ಕೊಂಡೊಯ್ಯುವ ರೀತಿಯಲ್ಲಿ ಕೆಲಸ ಮಾಡಿದ್ದಾ ರೆ. ಗೋವಾದಲ್ಲಿ ಫ್ಲೈ ಓವರ್, ಐಐಟಿ, ವೈದ್ಯಕೀಯ ಕಾಲೇಜು, ಮುಂದಿನ ದಿನಗಳಲ್ಲಿ ಲೋಕಾರ್ಪಣೆಯಾಗಲಿರುವ ಏರ್‌ಪೋರ್ಟ್ ಸೇರಿದಂತೆ ಗೋವಾ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿರುವುದರಿಂದ ಇಲ್ಲಿನ ಮತದಾರರು ಬಿಜೆಪಿ ಬೆಂಬಲಿಸುತ್ತಾರೆ ಎಂದು ಪ್ರಭು ಚವ್ಹಾಣ್ ವಿಶ್ವಾಸ ವ್ಯಕ್ತಪಡಿಸಿದರು.
ಕಲ್ಲಂಗೂಟ್ ಕ್ಷೇತ್ರದ ಅಭ್ಯರ್ಥಿ ಜೋಸೇಫ್ ಸಿಕ್ವೇರಾ ಮತ್ತು ವಾಸ್ಕೋ ಅಭ್ಯರ್ಥಿ ಕೃಷ್ಣಾ ಸಾಲ್ಕರ್ ಅವರ ಪರವಾಗಿ ಪ್ರಚಾರ ನಡೆಸಿದ ಪ್ರಭು ಚವ್ಹಾಣ್ ಅವರು, ಗೋವಾ ಕನ್ನಡಿಗರು ಹಾಗೂ ಬಂಜಾರ ಸಮುದಾಯದ ಪ್ರಮುಖ ಮುಖಂಡರುಗಳೊಂದಿಗೆ ಸಭೆ ನಡೆಸುವ ಮೂಲಕ ಅಬ್ಬರದ ಪ್ರಚಾರ ಮೂಲಕ ಗಮನ ಸೆಳೆದರು.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.