ರೈತರಿಗೆ ವಿಮೆ ಪರಿಹಾರ ದೂರ

ಪ್ರೀಮಿಯಂ ಕಟ್ಟಿದ್ದ‌ರೂ ಶೇ. 60ರಷ್ಟು  ರೈತರಿಗೆ ಪಾವತಿಯಾಗದ  ಬೆಳೆ ವಿಮೆ

Team Udayavani, Feb 10, 2022, 7:27 AM IST

ರೈತರಿಗೆ ವಿಮೆ ಪರಿಹಾರ ದೂರ

ಬೆಂಗಳೂರು: ಒಂದು ಕಡೆ ಪ್ರವಾಹ, ಮತ್ತೊಂದು ಕಡೆ ಬೆಳೆಹಾನಿಗೆ ಸಿಗದ ಪರಿಹಾರ. ಇದರಿಂದಾಗಿ ರಾಜ್ಯದ ರೈತರು ಬಸವಳಿದಿದ್ದಾರೆ. ಪ್ರವಾಹದಿಂದಾದ ಬೆಳೆ ಹಾನಿಗೆ ಸರಕಾರ ಪರಿಹಾರ ನೀಡಿದೆ. ಆದರೆ,  ಕಟ್ಟಿರುವ ವಿಮೆ ಪ್ರೀಮಿಯಂನಲ್ಲಿ ಶೇ.40ರಷ್ಟು ರೈತರಿಗೆ ಮಾತ್ರ ಪರಿಹಾರ ಸಿಕ್ಕಿದೆ.

ರಾಜ್ಯದ ರೈತರು ಪ್ರಧಾನ ಮಂತ್ರಿ ಫ‌ಸಲ್‌ ಬಿಮಾ ಯೋಜನೆ ಅಡಿಯಲ್ಲಿ ರೈತರು ಭತ್ತ, ರಾಗಿ, ಜೋಳ, ಸೋಯಾಬೀನ್‌, ಹೆಸರು ಸಹಿತ ವಿವಿಧ ಬೆಳೆಗಳಿಗೆ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಪ್ರತ್ಯೇಕವಾಗಿ ವಿಮೆ ಕಂತು ಪಾವತಿಸುತ್ತಾರೆ.

ಎರಡು ವರ್ಷಗಳಿಂದ ರಾಜ್ಯದಲ್ಲಿ  ನಿರಂತರ ಪ್ರವಾಹ ಉಂಟಾಗುತ್ತಿದೆ. ಮುಂಗಾರು ಹಂಗಾಮಿ ನಲ್ಲಿ  ರೈತರ ಬೆಳೆ ನಾಶವಾಗಿರುವುದನ್ನು  ಕಂದಾಯ ಇಲಾಖೆ ಮೂಲಕ ಸಮೀಕ್ಷೆ ನಡೆಸಿ, ಸಂಪೂರ್ಣ ಬೆಳೆ ಹಾನಿಗೊಳಗಾದ ರೈತರಿಗೆ ಒಣ ಬೇಸಾಯ, ನೀರಾ ವರಿ ಹಾಗೂ ತೋಟಗಾರಿಕೆ ಬೆಳೆಗಳಿಗೆ ಎನ್‌ಡಿಆರ್‌ಎಫ್ ನಿಯಮ ಪ್ರಕಾರ ಪರಿಹಾರ ನೀಡಿದೆ.

ಬಾರದ ವಿಮೆ
ಬೆಳೆ ಹಾನಿಗೆ ಸರಕಾರವೇ ಪರಿಹಾರ ನೀಡಿದ್ದರೂ ಬಹುತೇಕ ರೈತರಿಗೆ ತಮ್ಮ ಬೆಳೆಗೆ ಕಟ್ಟಿದ ವಿಮಾ ಹಣಕ್ಕೆ ಪರಿಹಾರ ಮಾತ್ರ ಬಂದಿಲ್ಲ. 2020-21ನೇ ಸಾಲಿನಲ್ಲಿ  ಶೇ. 40.10ರಷ್ಟು ರೈತರಿಗೆ ಮಾತ್ರ ಬೆಳೆ ವಿಮೆ ಪರಿಹಾರ ದೊರೆತಿದೆ. 2020-21ನೇ ಸಾಲಿನಲ್ಲಿ 15,16,014 ರೈತರು ಬೆಳೆ ವಿಮೆಗೆ ಪ್ರೀಮಿಯಂ ಕಟ್ಟಿದ್ದು, ಕಂಪೆನಿಗಳಿಗೆ 1,511.25 ಕೋಟಿ ರೂ. ಜಮೆಯಾಗಿದೆ. ಪರಿಹಾರವಾಗಿ ಇದುವರೆಗೆ  580.77 ಕೋ. ರೂ. ರೈತರ ಖಾತೆಗೆ ಜಮೆಯಾಗಿದೆ.

ರಾಜ್ಯದಲ್ಲಿ  ಸರಕಾರಿ ಒಡೆತನದ ಅಗ್ರಿಕಲ್ಚರ್‌ ಇನ್ಶೂರೆನ್ಸ್‌ ಕಂಪೆನಿ ಹಾಗೂ ಐದಾರು ಖಾಸಗಿ  ಕಂಪೆನಿಗಳು ರೈತರಿಂದ ಬೆಳೆ ವಿಮೆ  ಪ್ರೀಮಿಯಂ ಕಟ್ಟಿಸಿಕೊಳ್ಳುತ್ತವೆ.

ಸರಕಾರದ ಮೂಲಗಳ ಪ್ರಕಾರ ಸರಕಾರಿ ಸ್ವಾಮ್ಯದ ಸಂಸ್ಥೆಗೆ  ಪ್ರೀಮಿಯಂ ಕಟ್ಟಿದ ರೈತರಿಗೆ ವಿಮೆ ದೊರೆತಿದ್ದು, ಖಾಸಗಿ ಕಂಪೆನಿಗಳಿಗೆ  ಕಟ್ಟಿರುವ ರೈತರಿಗೆ ಸರಿಯಾಗಿ  ಪರಿಹಾರ ದೊರೆತಿಲ್ಲ.  ಸ್ವತಃ ಕೇಂದ್ರ ರಸಗೊಬ್ಬರ ಸಚಿವ ಭಗವಂತ ಖೂಬಾ ಹಾಗೂ ರಾಜ್ಯ ಕೃಷಿ ಸಚಿವ ಬಿ.ಸಿ. ಪಾಟೀಲ್‌ ಅವರು ಖಾಸಗಿ ವಿಮಾ ಕಂಪೆನಿಗಳು ರೈತರಿಗೆ ಸೂಕ್ತ  ಪರಿಹಾರ ನೀಡಬೇಕೆಂದು ಸೂಚಿಸಿದ್ದರು.

ಖಾಸಗಿ ವಿಮಾ ಕಂಪೆನಿಗಳು ಪ್ರತಿ ಜಿಲ್ಲೆಯಲ್ಲಿಯೂ ಸ್ವಂತ ಕಟ್ಟಡ ಹೊಂದಿರಬೇಕು ಹಾಗೂ ತಾಲೂಕು ಕೃಷಿ ಇಲಾಖೆಯ ಕಚೇರಿಯಲ್ಲಿ  ರೈತರಿಗೆ ಮಾಹಿತಿ ನೀಡಲು ಒಬ್ಬ ಕಂಪೆನಿಯ ಪ್ರತಿನಿಧಿಯನ್ನು  ನಿಯೋಜಿಸುವಂತೆ ಸೂಚನೆಯನ್ನೂ ನೀಡಿದ್ದಾರೆ.

ತಾಂತ್ರಿಕ ಕಾರಣ
ಸರಕಾರದ ಮೂಲಗಳ ಪ್ರಕಾರ, ಕಳೆದ ಐದು ವರ್ಷಗಳಲ್ಲಿ  ಶೇ. 99ರಷ್ಟು  ರೈತರಿಗೆ ವಿಮಾ ಪರಿಹಾರ ತಲುಪಿಸಲಾಗುತ್ತಿದೆ. ಐದು ವರ್ಷಗಳಲ್ಲಿ  5,500 ಕೋಟಿ ರೂ.ದಲ್ಲಿ  50 ಕೋಟಿ ಮಾತ್ರ ಬಾಕಿ ಉಳಿದುಕೊಂಡಿದೆ. ಕಳೆದ ಎರಡು ವರ್ಷದಲ್ಲಿ  ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಆಹಾರ ಉತ್ಪಾದನೆಯಾಗಿದ್ದು, ಶೇ. 60ಕ್ಕಿಂತ ಹೆಚ್ಚು ಬೆಳೆ ಹಾನಿಯಾಗಿದ್ದರೆ ಮಾತ್ರ ವಿಮಾ ಪರಿಹಾರ ದೊರೆಯಲಿದೆ. ಪರಿಹಾರ ಬಾಕಿ ಉಳಿದುಕೊಳ್ಳಲು ತಾಂತ್ರಿಕ ಕಾರಣಗಳು ಅಡ್ಡಿಯಾಗಿವೆ. ಸರಕಾರ ರೈತರ ಬ್ಯಾಂಕ್‌ ಖಾತೆಗಳಿಗೆ ಹಾಕಿರುವ ಪರಿಹಾರದ ಹಣ ಸುಮಾರು 20 ಕೋಟಿ ರೂ. ಸರಕಾರಕ್ಕೆ  ವಾಪಸ್‌ ಬಂದಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.

ಕಳೆದ ಐದು ವರ್ಷಗಳಲ್ಲಿ ಬಹುತೇಕ ರೈತರಿಗೆ ವಿಮಾ ಪರಿಹಾರ ನೀಡಲಾಗಿದೆ. ಕೆಲವು ರೈತರ ಬ್ಯಾಂಕ್‌ ಖಾತೆಗೆ ಆಧಾರ್‌ ಲಿಂಕ್‌ ಆಗದ ಕಾರಣ  ಪರಿಹಾರ ದೊರಕದಿರಬಹುದು, ಅಂಥ ಪ್ರಕರಣಗಳಿದ್ದರೆ, ಅವರ ಸಮಸ್ಯೆ ಪರಿಹರಿಸಿ ವಿಮೆ ಹಣ ವರ್ಗಾವಣೆ ಮಾಡಲಾಗುವುದು.
ಬ್ರಿಜೇಶ್‌ ಕುಮಾರ್‌ ದೀಕ್ಷಿತ್‌, ಕೃಷಿ ಇಲಾಖೆ ಆಯುಕ್ತ

-ಶಂಕರ ಪಾಗೋಜಿ

ಟಾಪ್ ನ್ಯೂಸ್

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Shiralakoppa: ಹೋರಿ ತಿವಿದು ಬೈಕ್‌ ಸವಾರ ಸಾವು

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

arest

Kumbla: ಯುವಕನನ್ನು ಅಪಹರಿಸಿ ಕೊಲೆಗೆ ಯತ್ನ; ಬಂಧನ

crime

Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.