ಕಪ್ಪು ಚುಕ್ಕೆಯಿಲ್ಲದೇ ಕೆಲಸ ನಿರ್ವಹಿಸುವೆ


Team Udayavani, Feb 10, 2022, 1:25 PM IST

18work

ಸಿಂಧನೂರು: ಪಕ್ಷ ಹಾಗೂ ನಮ್ಮ ನಾಯಕರು ನನ್ನ ಮೇಲೆ ವಿಶ್ವಾಸವಿಟ್ಟು ಜವಾಬ್ದಾರಿಯನ್ನು ವಹಿಸಿದ್ದು, ಯಾವುದೇ ಕಪ್ಪುಚುಕ್ಕೆಯಿಲ್ಲದ ರೀತಿ ಆಡಳಿತ ನಿಭಾಯಿಸುವೆ ಎಂದು ನಗರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷ ಮಧ್ವರಾಜ್‌ ಆಚಾರ್‌ ಹೇಳಿದರು.

ನಗರದ ಪ್ರಾಧಿಕಾರದ ಕಚೇರಿಯಲ್ಲಿ ಅಧ್ಯಕ್ಷರಾಗಿ ಪದಗ್ರಹಣ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಮೇರು ಗಾಯಕಿ ಲತಾ ಮಂಗೇಶ್ಕರ್‌, ಕನ್ನಡದ ಕಬೀರ ಇಬ್ರಾಹಿಂ ಸುತಾರ ನಿಧನರಾದ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ. ಯಾವುದೇ ರೀತಿಯಿಂದಲೂ ಕಾನೂನು ಬಾಹಿರ ಕೆಲಸಕ್ಕೆ ಅವಕಾಶ ನೀಡುವುದಿಲ್ಲ ಎಂದರು.

ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಮಾತನಾಡಿ, ಮಧ್ವರಾಜ್‌ ಅವರ ಪಕ್ಷ ನಿಷ್ಠೆ ಪರಿಗಣಿಸಿ ನಾಯಕರು ಜವಾಬ್ದಾರಿ ಕೊಟ್ಟಿದ್ದಾರೆ. ಅಭಿವೃದ್ಧಿಯಾಗದ ಲೇಔಟ್‌ ಗಳಿಗೆ ಬಿಡುಗಡೆ ಅವಕಾಶ ನೀಡಬಾರದು. ಸರಕಾರದ ಮಾರ್ಗಸೂಚಿ, ಕಾನೂನಿನ ಅನ್ವಯ ಕೆಲಸ ಮಾಡಲಿ. ಯಾವುದೇ ರೀತಿಯಿಂದಲೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕೆಲಸ ನಿರ್ವಹಿಸಬೇಕು ಎಂದರು.

ನಿರ್ಗಮಿತ ಅಧ್ಯಕ್ಷ ಅಮರೇಗೌಡ ವಿರೂಪಾಪುರ ಮಾತನಾಡಿ, ನನ್ನ ಅವಧಿಯಲ್ಲಿ ನಿಷ್ಪಕ್ಷಪಾತವಾಗಿ ಆಡಳಿತ ನಡೆಸಿದ್ದು, ಕೆಲವು ವಿರೋಧ ಬಂದರೂ ಅವುಗಳನ್ನು ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ನನ್ನ ಅವಧಿಯಲ್ಲಿ ನನ್ನ ಗಮನಕ್ಕೆ ಬಾರದೇ ನಗರಸಭೆಗೆ ಕಡತಗಳನ್ನು ರವಾನಿಸಿದ ಪ್ರಕರಣದಲ್ಲಿ, ಕಾನೂನು ಹೋರಾಟ ಮುಂದುವರಿಸುವೆ. ಕಾನೂನು ಬದ್ಧವಾಗಿ ಕೆಲಸ ನಿರ್ವಹಿಸಿದ ತೃಪ್ತಿಯಿದೆ ಎಂದರು.

ನೂತನವಾಗಿ ಪ್ರಾಧಿಕಾರದ ನಿರ್ದೇಶಕರಾಗಿ ನೇಮಕವಾದ ಪೂಜಪ್ಪ ಪೂಜಾರಿ, ಮಂಜುನಾಥ ಹರಸೂರು, ರಾಮನಗೌಡ ವಕೀಲರು ಅವರನ್ನು ಸನ್ಮಾನಿಸಲಾಯಿತು. ಬಿಜೆಪಿ ಮುಖಂಡರಾದ ಎನ್‌.ಶಿವನಗೌಡ ಗೋರೆಬಾಳ, ಎಂ.ದೊಡ್ಡಬಸವರಾಜ್‌, ಬಿಜೆಪಿ ಅಧ್ಯಕ್ಷ ಹನುಮೇಶ ಸಾಲಗುಂದಾ, ಅಮರೇಶ ಅಂಗಡಿ, ರಾಜಶೇಖರ ಹಿರೇಮಠ, ಯಲ್ಲೂಸಾ ಬದಿ, ವೆಂಕಟೇಶ ಪ್ರಭು ಇದ್ದರು.

ಟಾಪ್ ನ್ಯೂಸ್

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.