ಹುಣಸೂರು: ರೈಲ್ವೆ ಹಳಿ ಗೇಟ್ ಬಿದ್ದು ತೀವ್ರ ಗಾಯಗೊಂಡಿದ್ದ ವಾಚರ್ ಸಾವು
Team Udayavani, Feb 10, 2022, 2:29 PM IST
ಹುಣಸೂರು: ರೈಲ್ವೆ ಹಳಿ ಗೇಟ್ ಬಿದ್ದು ತೀವ್ರ ಗಾಯಗೊಂಡಿದ್ದ ವಾಚರ್ ವೊಬ್ಬರು ಸಾವನ್ನಪ್ಪಿರುವ ಘಟನೆ ತಾಲೂಕಿನ ಕೊಳವಿಗೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಕಲ್ಲಹಳ್ಳ ಅರಣ್ಯ ವಲಯದ ವನ್ಯಜೀವಿ ಪರಿಪಾಲಕ ಮಹಾದೇವಪ್ಪ ( 58) ಮೃತಪಟ್ಟ ದುರ್ದೈವಿ.
ಮಹದೇವಪ್ಪನವರು ಬುಧವಾರ ಸಂಜೆ ಅರಣ್ಯದೊಳಗೆ ಬೆಂಕಿ ತಡೆ ಲೈನ್ ಮಾಡಲು ಬಂದಿದ್ದ ಕೊಳವಿಗೆ ಹಾಡಿಯ ಕಾರ್ಮಿಕರನ್ನು ವಾಪಸ್ ಬಿಡಲು ಅರಣ್ಯ ಇಲಾಖೆ ಸಿಬ್ಬಂದಿ ಜೊತೆಯಲ್ಲಿ ಇಲಾಖೆ ವಾಹನದಲ್ಲಿ ಬಂದು ಕೊಳವಿಗೆ ಕ್ಯಾಂಪಿನ ಹತ್ತಿರ ಆನೆ ತಡೆಗೆ ಅಳವಡಿಸಿರುವ ರೈಲ್ವೆ ಬ್ಯಾರಿಕೇಡ್ ಗೇಟ್ ಅನ್ನು ತೆಗೆದು ಕಾರ್ಮಿಕರು ಇದ್ದ ಅರಣ್ಯ ಇಲಾಖೆಯ ವಾಹನವನ್ನು ಅರಣ್ಯದಿಂದ ಹೊರ ಬಿಡುವ ವೇಳೆ ಗೇಟ್ ಅವರ ಮೇಲೆ ಆಯತಪ್ಪಿ ಬಿದ್ದು . ಗಾಯಗೊಂಡಿದ್ದ ವಾಚರ್ ಮಹದೇವಪ್ಪರನ್ನು ಚಿಕಿತ್ಸೆಗಾಗಿ ಹನಗೋಡಿನ ಸರ್ಕಾರಿ ಆಸ್ಪತ್ರೆಗೆ ತರುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ .
ಮೃತದೇಹವನ್ನು ಹುಣಸೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಸ್ವಗ್ರಾಮ ಹೆಚ್ ಡಿ ಕೋಟೆ ತಾಲೂಕಿನ ಹೊಮ್ಮರಗಳ್ಳಿ ಗ್ರಾಮಕ್ಕೆ ಕಳುಹಿಸಿಕೊಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.