ಕರಾಟೆ ಕಲಿಕೆಯಿಂದ ಹೆಣ್ಮಕ್ಕಳ ಶೋಷಣೆ ತಡೆ

Team Udayavani, Feb 10, 2022, 2:34 PM IST

21karate

ಬೀದರ: ಯಾವುದೇ ಶಸ್ತ್ರ ಇಲ್ಲದೆ ತಮ್ಮನ್ನು ರಕ್ಷಣೆ ಮಾಡಿಕೊಳ್ಳುವ ತಂತ್ರ ಕರಾಟೆ ಕಲಿಸುತ್ತದೆ. ಇಂದು ಹೆಚ್ಚಾಗುತ್ತಿರುವ ಹೆಣ್ಣು ಮಕ್ಕಳ ಶೋಷಣೆ ಇದರಿಂದ ತಡೆಯಲು ಸಾಧ್ಯವಾಗುತ್ತದೆ ಎಂದು ಎಂಎಲ್‌ಸಿ ಅರವಿಂದಕುಮಾರ ಅರಳಿ ಹೇಳಿದರು.

ಸಮಾಜ ಕಲ್ಯಾಣ ಇಲಾಖೆ, ಬಿಸಿಎಂ ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಆಶ್ರಯದಲ್ಲಿ ತಾಲೂಕಿನ ಬಗದಲ್‌ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಓಬವ್ವ ಆತ್ಮ ರಕ್ಷಣಾ ಕಲೆಯ ಕೌಶಲಗಳ ತರಬೇತಿಗೆ ಚಾಲನೆ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಸ್ವರಕ್ಷಣೆ ಕಲೆಯ ತರಬೇತಿ ಮೂಲಕ ಕರ್ನಾಟಕದ ಇತಿಹಾಸದಲ್ಲಿ ಕನಸಿನ ಅಧ್ಯಾಯ ಆರಂಭವಾಗಿದೆ ಎಂದರು.

ಐಎಎಸ್‌ ಪ್ರೋಬೆಷನರಿ ಅಧಿಕಾರಿ ಕೀರ್ತನಾ ಮಾತನಾಡಿ, ಮಕ್ಕಳು ಸಶಕ್ತರಾದರೆ ಮಾತ್ರ ಸ್ವರಕ್ಷಣೆ ಸಾಧ್ಯ. ತಮ್ಮನ್ನು ತಾವು ರಕ್ಷಿಸುವ ಕಲೆ ಕಲಿತಾಗ ಆತ್ಮವಿಶ್ವಾಸ ವೃದ್ಧಿಯಾಗುತ್ತದೆ. ಇಂತಹ ಸ್ವ ರಕ್ಷಣಾ ಕಲೆ ಹೆಣ್ಣು ಮಕ್ಕಳಲ್ಲಿದೆ ಎಂದು ಅರಿವಾದರೆ ಯಾವ ದುರುಳನ್ನು ಹೆಣ್ಣು ಮಕ್ಕಳನ್ನು ಚುಡಾಯಿಸಲು ಕನಸಿನಲ್ಲೂ ಯೋಚಿಸಲಾರರು. ಈ ಕಲೆ ಹೆಣ್ಣು ಮಕ್ಕಳ ಆತ್ಮವಿಶ್ವಾಸ ವೃದ್ಧಿಗೆ ಪೂರಕವಾಗಿ ನಮ್ಮತನ ಉಳಿಸಿಕೊಳ್ಳಲು ಸಹಾಯ ಮಾಡುತ್ತದೆ ಎಂದು ನುಡಿದರು.

ಬಿಸಿಎಂ ಇಲಾಖೆ ಜಿಲ್ಲಾ ಅಧಿಕಾರಿ ಬಸವರಾಜ ಬಡಿಗೇರ್‌ ಮಾತನಾಡಿ, ಮಕ್ಕಳಿಗೆ ಕಲಿಕೆಯ ಉತ್ತಮ ವಾತಾವರಣ ನಿರ್ಮಿಸಿ, ಎಲ್ಲ ಅವಕಾಶ ಒದಗಿಸಿ ನಾಡಿಗೆ ಸತ್ಪ್ರಜೆ ನಿರ್ಮಿಸಿಕೊಡುವ ಸದುದ್ದೇಶದಿಂದ ಈ ವಸತಿ ಶಾಲೆಗಳು ಆರಂಭವಾಗಿವೆ. ಈ ಶಾಲೆಗಳಿಂದ ನಾಯಕತ್ವ ಗುಣ ಬೆಳೆಸಿಕೊಂಡು, ಶ್ರದ್ಧೆ ಮತ್ತು ಸಮರ್ಪಣಾ ಭಾವದಿಂದ ಅಭ್ಯಾಸಿಸಿ ಸಮಾಜಕ್ಕೆ ಕೊಡುಗೆಯಾಗಿ ನಿಲ್ಲಬೇಕೆಂದು ಮಕ್ಕಳಿಗೆ ಕರೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಎಸ್‌.ಬಿ ಯೋಗೀಶ್‌, ಬಿಸಿಎಂ ಇಲಾಖೆಯ ವ್ಯವಸ್ಥಾಪಕ ಅಶೋಕ ಸೇರಿಕಾರ, ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಮನ್ವಯಾಧಿಕಾರಿ ಶರಣಪ್ಪ ಬಿರಾದಾರ ಇದ್ದರು. ಶಾಲೆಯ ಪ್ರಾಚಾರ್ಯ ಚೆನ್ನಬಸವ ಹೇಡೆ ಮಾತನಾಡಿದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕರಾಟೆ ಕಲೆ ಪ್ರದರ್ಶಿಸಿದರು. ಶಿಕ್ಷಕರಾದ ಶ್ರೀಕಾಂತ ರಾಜಗೀರಾ, ಮಾರುತಿ ಸುಂಕಾ, ಸಿದ್ಧಲಿಂಗಯ್ಯ ಮಠಪತಿ, ಸವಿತಾ ಕಲ್ಲೂರ, ತ್ರಿವೇಣಿ ಮಠಪತಿ, ಪ್ರಶಾಂತ ಹೊನ್ನಾ, ಸಂತೋಷ ಚೆನ್ನವೀರೆ, ಕೃಷ್ಣಾಚಾರಿ, ತುಕಾರಾಮ, ತಿಪ್ಪಣ್ಣಾ ಚಿಂತಾಲೆ, ಮಾಣಿಕ ಸಾಗರ, ಶ್ರೀಕಾಂತ ಭೋಸ್ಲೆ, ಹಾರಿಕಾ ಬಿರಾದಾರ, ಸುವರ್ಣಾ ಬಸವರಾಜ, ಸುಮೀತ ಗಾಯಕವಾಡ, ವಸಂತ ರಾಠೊಡ ಇನ್ನಿತರರಿದ್ದರು.

ಟಾಪ್ ನ್ಯೂಸ್

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

1-remo

Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ

ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.