14 ಗ್ರಾಮಕ್ಕೆ ನೀರೊದಗಿಸಲು ಸಂಪುಟ ಅಸ್ತು


Team Udayavani, Feb 10, 2022, 2:50 PM IST

14 ಗ್ರಾಮಕ್ಕೆ ನೀರೊದಗಿಸಲು ಸಂಪುಟ ಅಸ್ತು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಮಂಡಿಕಲ್ಲು ಹಾಗೂ ಸುತ್ತಮುತ್ತಲಿನ ಗ್ರಾಮಗಳ ದಶಕಗಳ ಬೇಡಿಕೆ ಈಗ ಈಡೇರಿದೆ.

ಈ ಗ್ರಾಮಗಳ ಜನರ ಕುಡಿಯುವ ನೀರಿನ ಬವಣೆ ನೀಗಿಸುವ ನಿಟ್ಟಿನಲ್ಲಿ “ಭಗೀರಥ ಹೆಜ್ಜೆ’ ಇರಿಸಿರುವ ಚಿಕ್ಕಬಳ್ಳಾಪುರ ಶಾಸಕ ಹಾಗೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌, ಯದಾರ್ಲಹಳ್ಳಿ ಕೆರೆ ಮೂಲಕ ನೀರು ಹರಿಸುವ ಯೋಜನೆಗೆ ಸರ್ಕಾರದಿಂದ ಅನುಮೋದನೆ ಕೊಡಿಸಿದ್ದು ಕಾಮಗಾರಿ ಹಾದಿ ಸುಗಮವಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ಕೊಳಾಯಿ ಸಂಪರ್ಕ ಕಲ್ಪಿಸಿ ನೀರೊದಗಿಸುವ ಜಲಜೀವನ್‌ ಮಿಷನ್‌ ಜಾರಿ ಮಾಡಿದ್ದಾರೆ. ಇದೇ ಯೋಜನೆಯಡಿ, 14 ಗ್ರಾಮಗಳಿಗೆ ನೀರು ಪೂರೈಸುವ ಯೋಜನೆ ಸಿದ್ಧಪಡಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 15.48 ಕೋಟಿ ರೂ. ವೆಚ್ಚದ ಯೋಜನೆ ಕುರಿತು ಚರ್ಚೆಯಾಗಿದ್ದು, ಬಳಿಕ ಅನುಮೋದನೆ ದೊರೆತಿದೆ.

2024ರ ವೇಳೆಗೆ ದೇಶದ ಪ್ರತಿ ಮನೆಗೆ ಕೊಳಾಯಿ ನೀರು ಸೌಲಭ್ಯ ಕಲ್ಪಿಸುವುದು ಜಲಜೀವನ್‌ ಯೋಜನೆಯ ಗುರಿ. ಈಗಾಗಲೇ ಸಚಿವರ ಶ್ರಮದಿಂದ ಎಚ್‌.ಎನ್‌.ವ್ಯಾಲಿಯಿಂದ ಕೆರೆ ತುಂಬಿಸಲಾಗಿದೆ. ಇದರಿಂದಾಗಿ ಕುಡಿವ ನೀರಿನ ಸಮಸ್ಯೆಗೆ ಪರಿಹಾರದೊಂದಿಗೆ ಕೃಷಿ ಚಟುವಟಿಕೆ ನಡೆಸಲು ಅನುಕೂಲವಾಗಿದೆ. ಈ ಮೂಲಕ ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗಕ್ಕೆ ನಲ್ಲಿ ನೀರು ಪೂರೈಸಲು ಸಚಿವರು ಹೆಜ್ಜೆ ಇರಿಸಿದ್ದಾರೆ.

ಜಲಜೀವನ್‌ ಮಿಷನ್‌ನಡಿ ಜಾರಿ: ಇದೇ ಯೋಜನೆಯಡಿ, ಯದಾರ್ಲಹಳ್ಳಿ ಕೆರೆಯಿಂದ ನೀರುಪಡೆದು ಪೂರೈಸಲಾಗುತ್ತದೆ. ಸದ್ಯ ಈ ಗ್ರಾಮಗಳಲ್ಲಿ ಒಟ್ಟು 1429 ಮನೆ ಹಾಗೂ 5251 ಜನರಿದ್ದಾರೆ.2053ರ ವೇಳೆಗೆ ಈ ಜನಸಂಖ್ಯೆ 6357 ಆಗಲಿದೆ. ಈಅಂದಾಜು ಗಮನದಲ್ಲಿರಿಸಿ ಯೋಜನೆಅನುಷ್ಠಾನಗೊಳಿಸಲಾಗುತ್ತಿದೆ. ಈವರೆಗೆ ಇಲ್ಲಿನ ಜನ ಕುಡಿವ ನೀರಿಗಾಗಿ ಬಾವಿ, ಕೆರೆ ಹಾಗೂ ಬೋರ್‌ವೆಲ್‌ ಆಶ್ರಯಿಸಿದ್ದರು.

ಜನ ನೀರು ಪಡೆಯಲು ಕೆರೆ, ಬಾವಿಗಳ ಬಳಿ ಹೋಗಿ ಬರಬೇಕಿತ್ತು.ಆದರೀಗ ಮನೆಗಳಿಗೆಕೊಳಾಯಿಯಲ್ಲಿ ನೀರು ಬರುವ ಸೌಲಭ್ಯ ಕಲ್ಪಿಸಲಾಗುತ್ತದೆ.

ಯದಾರ್ಲಹಳ್ಳಿ ಕೆರೆ: ದಕ್ಷಿಣ ಪೆನ್ನಾರ್‌ನಿಂದ ನೀರು ಪಡೆಯುವ ಯದಾರ್ಲಹಳ್ಳಿ ಕೆರೆ 101.31 ಹೆಕ್ಟೇರ್‌ ಅಚ್ಚುಕಟ್ಟು ಪ್ರದೇಶ ಹೊಂದಿದೆ. 30.40 ಹೆಕ್ಟೇರ್‌ನಲ್ಲಿ ನೀರಿದೆ. ಈ ಕೆರೆ ಒಟ್ಟು 27.63 ಎಂಸಿಎಫ್ಟಿ ಸಾಮರ್ಥ್ಯ ಹೊಂದಿದೆ. ಇಲ್ಲಿ ನೀರನ್ನು ಶುದ್ಧೀಕರಿಸುವ ಘಟಕ ಅಳವಡಿಸಿದ್ದು ನೀರನ್ನು ಶುದ್ಧಮಾಡಿ ಪೈಪ್‌ ಲೈನ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತದೆ. ಈ ಎಲ್ಲಾ ಕಾಮಗಾರಿ ಶೀಘ್ರವಾಗಿ ಮುಗಿಸಿ, 2023ರ ವೇಳೆಗೆ ಮನೆಗಳಿಗೆ ನೀರು ಪೂರೈಸಲಾಗುತ್ತದೆ.

ನೀರಿನ ಸೌಲಭ್ಯ ಪಡೆದ ಗ್ರಾಮಗಳು ಯಾವುವು? :

ಬಚ್ಚೇನಹಳ್ಳಿ, ದರಬೂರು, ಗುಡಿಸಿಹಳ್ಳಿ, ನೆಲಮಾನಪರ್ತಿ, ಗುಂಡ್ಲಮಂಡಿಕಲ್ಲು, ಮಣಿಪುರ, ಹೊಸಹಳ್ಳಿ, ಮಂಡಿಕಲ್ಲು, ಯಾಟಗಾನಹಳ್ಳಿ, ಪಾರೇನಹಳ್ಳಿ, ಪೈಯೂರು, ಯದಾರ್ಲಹಳ್ಳಿ, ಜೀಡಮಾಕಲಹಳ್ಳಿ, ಯರ್ರಬಾಪನಹಳ್ಳಿ.

ಜ್ವಲಂತ ಸಮಸ್ಯೆ ನಿವಾರಣೆಗೆ ಪ್ರಧಾನಿ ಮೋದಿ ಆದ್ಯತೆ :

ಎಚ್‌.ಎನ್‌.ವ್ಯಾಲಿಯಿಂದ ಕೆರೆಗಳ ಭರ್ತಿ, ಶುದ್ಧ ಕುಡಿವ ನೀರಿನ ಘಟಕ ಸ್ಥಾಪನೆ ಮೊದಲಾದ ಜಲ ಪೂರೈಕೆ ಯೋಜನೆಗಳ ಮುಂದುವರಿದ ಭಾಗವಾಗಿ, ಯದಾರ್ಲಹಳ್ಳಿ ಕೆರೆಯಿಂದ ನೀರು ಪಡೆದು, ಕೊಳಾಯಿಗಳಲ್ಲಿ ಮನೆಮನೆಗೆ ನೀರು ಪೂರೈಸುವ ಯೋಜನೆ ರೂಪಿಸಲಾಗಿದೆ. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ಸ್ವಾತಂತ್ರÂ ಬಂದು 75 ವರ್ಷಗಳಾದರೂ ಎಲ್ಲಾ ಮನೆಗಳಿಗೆ ಕೊಳಾಯಿ ನೀರಿನ ಸೌಲಭ್ಯ ಕಲ್ಪಿಸಲು ಸಾಧ್ಯವಾಗಿಲ್ಲ ಎಂಬುದು ಜ್ವಲಂತ ಸಮಸ್ಯೆ. ಈ ಸಮಸ್ಯೆಗೆ ಆದ್ಯತೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಜಲಜೀವನ್‌ ಮಿಷನ್‌ನಿಂದ ಮನೆಗೆ ನೇರವಾಗಿ ನೀರು ಪೂರೈಸುವ ಗುರಿಯನ್ನು ರಾಜ್ಯ ಸರ್ಕಾರಗಳಿಗೆ ನೀಡಿದ್ದಾರೆ. ಆ ಕನಸನ್ನು ಸಾಕಾರಗೊಳಿಸುವತ್ತ ಸಾಗಿದ್ದೇವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ಪ್ರಮುಖಾಂಶಗಳು :

ವೆಚ್ಚ: 15.48 ಕೋಟಿ ರೂ. ಮನೆಗಳು: 1420

ನೀರಿನ ಬೇಡಿಕೆ: 0.43 ಎಂಎಲ್‌ಡಿ

ಪ್ರಸ್ತುತ ಫಲಾನುಭವಿಗಳು: 5251 ಪೂರೈಸುವ ನೀರು: 55 ಎಲ್‌ಪಿಸಿಡಿ

ಕಾಮಗಾರಿ ಪೂರ್ಣ-ನೀರು ಪೂರೈಕೆ ಆರಂಭ: 2023ರಲ್ಲಿ

ಪೈಪ್‌ ಅಳವಡಿಕೆ: 23,345 ಮೀಟರ್‌ ಉದ್ದ

ಶುದ್ಧೀಕರಣ ಘಟಕದ ಸಾಮರ್ಥ್ಯ: 0.43 ಎಂಎಲ್‌ಡಿ

ಸಮಾನಾಂತರ ಜಲಾಶಯದ ಸಾಮರ್ಥ್ಯ: 2ಲಕ್ಷ ಲೀಟರ್‌.

ಟಾಪ್ ನ್ಯೂಸ್

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.