ಓವರ್‌ಹೆಡ್‌ ಟ್ಯಾಂಕ್‌ ಸ್ಥಳಾಂತರಕ್ಕೆ ಸ್ಥಳೀಯರ ಆಗ್ರಹ

Team Udayavani, Feb 10, 2022, 2:52 PM IST

23tank

ಸುರಪುರ: ಶಾಶ್ವತ ಕುಡಿಯುವ ನೀರು ಸರಬರಾಜು ಯೋಜನೆ ಅಡಿ ಟೇಲರ್‌ ಮಂಜಿಲ್‌ ಹತ್ತಿರ ನಿರ್ಮಿಸುತ್ತಿರುವ ಓವರ್‌ಹೆಡ್‌ ಟ್ಯಾಂಕ್‌ ಕಾಮಗಾರಿಯನ್ನು ಕೂಡಲೇ ನಿಲ್ಲಿಸಬೇಕು. ನೀಲ ನಕ್ಷೆಯಲ್ಲಿ ಗುರುತಿಸಿದಂತೆ ನಿಗ ದಿತ ಸ್ಥಳದಲ್ಲಿ ಟ್ಯಾಂಕ್‌ ನಿರ್ಮಿಸಬೇಕು ಎಂದು ನಗರಸಭೆ ವಿರೋಧ ಪಕ್ಷದ ನಾಯಕ ರಾಜಾ ಪಿಡ್ಡ ನಾಯಕ ಆಗ್ರಹಿಸಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಕುಡಿಯುವ ನೀರು ಸರಬರಾಜು ಯೋಜನೆ ಅಡಿ ಕ್ರಿಯಾಯೋಜನೆ ಮತ್ತು ನೀಲನಕ್ಷೆಯಲ್ಲಿ ಗುರುತಿಸಿರುವ ಸ್ಥಳಗಳಲ್ಲಿ ಓವರ್‌ ಹೆಡ್‌ ಟ್ಯಾಂಕ್‌ ನಿರ್ಮಿಸುತ್ತಿಲ್ಲ ಕುಡಿಯುವ ನೀರು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದು ಬೇರೆಡೆ ಟ್ಯಾಂಕ್‌ ನಿರ್ಮಿಸುತ್ತಿರುವುದನ್ನು ಖಂಡಿಸುವುದಾಗಿ ಹೇಳಿದರು.

ಟ್ಯಾಂಕ್‌ ನಿರ್ಮಾಣಕ್ಕೆ ತಹಶೀಲ್ದಾರ್‌ ಕಚೇರಿ ಹತ್ತಿರ ಸ್ಥಳ ಗುರುತಿಸಲಾಗಿದೆ. ಆದರೆ ಯಾರದೋ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ ಟೇಲರ್‌ ಮಂಜಿಲ್‌ ಹತ್ತಿರ ಟ್ಯಾಂಕ್‌ ನಿರ್ಮಿಸುತ್ತಿರುವುದು ಸರಿಯಲ್ಲ. ಇದರಿಂದ ಸಮರ್ಪಕ ನೀರು ಸರಬರಾಜು ಆಗದೆ ಜನರಿಗೆ ತೊಂದರೆಯಾಗಲಿದೆ. ಸರಕಾರದ ಕೋಟ್ಯಂತರ ರೂ. ನಷ್ಟವಾಗಲಿದೆ ಎಂದು ಆರೋಪಿಸಿದರು.

ಟೇಲರ್‌ ಮಂಜಿಲ್‌ ಸ್ಥಳ ಹುಲಕಲ್‌ ಗುಡ್ಡಕ್ಕಿಂತಲೂ ಎತ್ತರದಲ್ಲಿದೆ. ಮುಖ್ಯ ಟ್ಯಾಂಕ್‌ನಿಂದ ಟೇಲರ್‌ ಮಂಜಿಲ್‌ ಬಳಿ ನಿರ್ಮಿಸುತ್ತಿರುವ ಟ್ಯಾಂಕ್‌ ಗೆ ನೀರು ಹರಿಸಲು ಸಾಧ್ಯವೇ ಇಲ್ಲ. ಎತ್ತರ ಪ್ರದೇಶ ಆಗದ್ದರಿಂದ ಸಮಸ್ಯೆ ಮತ್ತಷ್ಟು ಹೆಚ್ಚಾಗುತ್ತದೆ. ಯೋಜನೆಯ ಉದ್ದೇಶ ಈಡೇರುವುದಿಲ್ಲ. ಜನರಿಗೆ ನೀರು ದೊರಕುವುದಿಲ್ಲ. ಆದ್ದರಿಂದ ಈ ಟ್ಯಾಂಕ್‌ ನಿರ್ಮಾಣ ಕಾಮಗಾರಿಯನ್ನು ಕೂಡಲೇ ನಿಲ್ಲಿಸಬೇಕು. ಈ ಮೊದಲು ಗುರುತಿಸಿದಂತೆ ತಹಶೀಲ್ದಾರ್‌ ಕಚೇರಿ ಬಳಿ ನಿರ್ಮಿಸಬೇಕು. ಇಲ್ಲದಿದ್ದರೆ ನಗರಸಭೆ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.

ಸದಸ್ಯರಾದ ಜುಮ್ಮಣ್ಣ ಕೆಂಗುರಿ, ನಾಸೀರಹುಸೇನ್‌ ಕುಂಡಾಲೆ, ಖಮುರುದ್ದೀನ್‌, ಪ್ರಮುಖರಾದ ಶಕೀಲ ಐಮದ್‌, ಸಿದ್ರಾಮ ಎಲಿಗಾರ, ಜಹೀರ್‌, ಸಣ್ಣ ಮಲ್ಕಪ್ಪ ಬಿರಾದಾರ, ಲಿಯಾಖತ್‌ ಹುಸೇನ್‌ ಇದ್ದರು.

ಟಾಪ್ ನ್ಯೂಸ್

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

Raichuru-Rims

Raichuru: ರಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ

ಮುಂದಿನ ಅವಧಿಗೆ ನಾನೇ ಸಿಎಂ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.